ಕಲಬುರಗಿ | ಬೆಳಕೋಟಾ ಗ್ರಾಮದ ಪುನರ್ವಸತಿಯ ಖಾಲಿ ನಿವೇಶನಗಳ ಹಕ್ಕುಪತ್ರ ನಕಲು; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಗಂಡೋರಿ ನಾಲಾ ಯೋಜನೆ ಅಡಿಯಲ್ಲಿ ಮುಳುಗಡೆಯಾದ ಬೆಳಕೋಟಾ ಗ್ರಾಮದ ಪುನರ್ವಸತಿಯಲ್ಲಿನ ಖಾಲಿ ನಿವೇಶನಗಳ ಹಕ್ಕುಪತ್ರ ನಕಲು ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಹಾಗೂ ಕಮಲಾಪುರ ಪಟ್ಟಣ ಪಂಚಾಯಿತಿಯ ಆಸ್ತಿ ಸಂಖ್ಯೆ 11-192ರಲ್ಲಿ ನಡೆಯುತ್ತಿರುವ ಗಜಾನನ ಟೈರ್ ಮೋಲ್ಡಿಂಗ್ ಕಂಪನಿಯ ಕಾಮಗಾರಿ ತಡೆಹಿಡಿಯುವಂತೆ ಪ್ರಜಾ ಪರಿವರ್ತನ ವೇದಿಕೆ ಕಲಬುರಗಿ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

ಕಲಬುರಗಿ ಜಿಲ್ಲೆಯ ಕಮಲಾಪುರದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಿದ ಅವರು, “ಕಮಲಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗಂಡೋರಿ ನಾಲಾ ಯೋಜನೆ ಅಡಿಯಲ್ಲಿ ಬೆಳಕೋಟಾ ಗ್ರಾಮವು ಮುಳುಗಡೆಯಾಗಿತ್ತು. ಸದರಿ ಗ್ರಾಮದ ಪುನರ್ವಸತಿಯನ್ನು ಕಮಲಾಪುರದ ಬಳಿ ನೀಡಲಾಗಿದ್ದು, ಆ ಪುನರ್ವಸತಿಯಲ್ಲಿ ಮುಳುಗಡೆಯಾದ ಬೆಳಕೋಟ ಗ್ರಾಮದ ನಿರಾಶ್ರಿತರಿಗೆ ಖಾಲಿ ನಿವೇಶನಗಳ ಹಕ್ಕುಪತ್ರಗಳನ್ನು ನೀಡಲಾಗಿದೆ. ಗ್ರಾಮದ ಬಹುತೇಕ ನಿವಾಸಿಗಳಿಗೆ ಇನ್ನೂ ಖಾಲಿ ನಿವೇಶನಗಳ ಹಕ್ಕುಪತ್ರ ನೀಡಿರುವುದಿಲ್ಲ. ಆದರೆ ಕೆಲವು ದುಷ್ಕರ್ಮಿಗಳು ಪುನರ್ವಸತಿಯಲ್ಲಿರುವ ಖಾಲಿ ನಿವೇಶನಗಳನ್ನು ನೋಡಿ ನಕಲಿ(ಜಾಲಿ) ಹಕ್ಕುಪತ್ರಗಳನ್ನು ತಯಾರಿಸಿ, ಪುನರ್ವಸತಿಯಲ್ಲಿ ಖಾಲಿ ಇರುವ ಖಾಲಿ ನಿವೇಶನಗಳ ಸಂಖ್ಯೆಯನ್ನು ಹಾಕಿ ಮಾರಾಟ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಜುಲೈ 10ರಂದು ದೂರು ನೀಡಲಾಗಿತ್ತು. ಆದರೆ ಈವರೆಗೆ ಯಾವುದೇ ಕ್ರಮ ಜರುಗಿಸಿರುಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಸದರಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ಅಧಿಕಾರಿಗಳ ಸಮಿತಿಯನ್ನು ರಚಿಸಬೇಕು. ಸಮಿತಿಯ ನೇತೃತ್ವದಲ್ಲಿ ನಕಲಿ(ಜಾಲಿ) ಹಕ್ಕು ಪತ್ರಗಳನ್ನು ತಯಾರಿಸಿದವರನ್ನು ತನಿಖೆ ಮಾಡಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

“ಗಜಾನನ ಟೈರ್ ಮೋಲ್ಡಿಂಗ್ ಕಂಪನಿಯು ಮಾಡುತ್ತಿರುವ ಕಾಮಗಾರಿಯಿಂದ ಕಮಲಾಪುರದಲ್ಲಿನ ಪರಿಸರ ಹಾಳಾಗುತ್ತಿದೆ. ಈ ಕಂಪನಿಯು ಹಳೆ ಟೈರ್‌ಗಳನ್ನು ಸುಡುವುದರಿಂದ ಅದರಿಂದ ಬರುವ ಕೆಟ್ಟ ಹೊಗೆಯಿಂದ ಸಾರ್ವಜನಿಕರಿಗೆ ತೊಂದರೆಯುಂಟಾಗುತ್ತಿದ್ದು, ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಉಸಿರಾಟಕ್ಕೆ ತೊಂದರೆಯುಂಟು ಮಾಡುತ್ತಿದೆ” ಎಂದರು.

“ಸಾರ್ವಜನಿಕರ ಹಿತದೃಷ್ಟಿಯಿಂದ ಸದರಿ ಗಜಾನನ ಟೈರ್ ಮೋಲ್ಡಿಂಗ್ ಕಂಪನಿಯು ಮಾಡುವ ಕಾಮಗಾರಿಯನ್ನು ಕೂಡಲೇ ತಡೆಹಿಡಿಯಬೇಕು. ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಕಂಪೆನಿಗೆ ನೀಡಿರುವ ಪರವಾನಗಿಯನ್ನು ರದ್ದುಪಡಿಸಬೇಕು. ಒಂದುವೇಳೆ ಈ ವಿಷಯಕ್ಕೆ ಸ್ಪಂದಿಸದಿದ್ದಲ್ಲಿ ನಮ್ಮ ಸಂಘಟನೆಯಿಂದ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೇಲುಕೋಟೆ ಚೆಲುವ ನಾರಾಯಣಸ್ವಾಮಿ ದೇವಾಲಯದ ಆಸ್ತಿ ಕಬಳಿಕೆ ಆರೋಪ

ಈ ಸಂದರ್ಭದಲ್ಲಿ ರಮೇಶ್ ಆರ್ ಬೆಳಕೋಟಿ, ಅರುಣ್, ಆನಂದ ಸಿಂಗೆ, ಧರ್ಮಣ್ಣ, ಸಿದಪ್ಪ ನಾರಾಯಣಪುರ, ಅಜಾರೋದ್ದಿನ್, ಸಿದಪ್ಪ ಕೌನಳ್ಳಿ, ವಿಜಯಕುಮಾರ್ ಹೋಲ್ಕರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...