ಕಲಬುರಗಿ | ನೇಮಕಾತಿಗಳಲ್ಲಿ ತಾರತಮ್ಯ; ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ‌ ಆಗ್ರಹ

Date:

ರಾಜ್ಯದ ಅಯಾ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಆಯ್ಕೆಯ (ಆಧ್ಯತೆ)ಯನ್ನು ಕೇಳುವ ಮೂಲಕ ಅನುಷ್ಠಾನಧಿಕಾರಿಗಳು ನಮ್ಮ ಹಕ್ಕಿನ ಹುದ್ದೆಗಳನ್ನು ಉದ್ದೇಶಪೂರ್ವಕವಾಗಿಯೇ ಕಸಿಯುತ್ತಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಆರೋಪಿಸಿದ್ದಾರೆ.

- Advertisement -

ಕಲ್ಯಾಣದ ಸಚಿವರು ಗಂಭೀರವಾಗಿ ಪರಿಗಣಿಸಿ ರಾಜ್ಯದ ಎಲ್ಲ ಇಲಾಖೆಗಳ ನೇಮಕಾತಿ ಮತ್ತು ಮುಂಬಡ್ತಿ ನೀಡುವ ಅನುಷ್ಠಾನಾಧಿಕಾರಿಗಳಿಗೆ ಸರ್ಕಾರದ ವತಿಯಿಂದ ಕಟ್ಟು ನಿಟ್ಟಿನ ಆದೇಶ ನೀಡಬೇಕು ಎಂದು ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಭಾರತ ಸರ್ಕಾರ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿ ಮತ್ತು ನೇಮಕಾತಿಗಳಲ್ಲಿ ನಮ್ಮ ಪಾಲು ಪಡೆಯುವ ದೃಷ್ಟಿಯಿಂದ ಸಂವಿಧಾನ ಬದ್ಧ ವಿಶೇಷ ಸ್ಥಾನಮಾನ ನೀಡಿದೆ.‌‌ ಆದರೆ, ರಾಜ್ಯ ಸರ್ಕಾರ ಅಯಾ ಇಲಾಖೆಯ ನೇಮಕಾತಿಗಳಿಗೆ ಈ ಹಿಂದೆ ಸುಮಾರು ಐದು ಬಾರಿ ನೇಮಕಾತಿ ಸುತ್ತೋಲೆಗಳನ್ನು ಪರಿಷ್ಕರಣೆ ಮಾಡಿ ದ್ವಂದ್ವ ಸೃಷ್ಟಿಸಿತ್ತು. ತೀವ್ರ ಹೋರಾಟದ ಬಳಿಕ ಎಲ್ಲ ನೇಮಕಾತಿಗಳಲ್ಲಿ ಮೊದಲು ರಾಜ್ಯ ಮಟ್ಟದ ಮೆರಿಟ್ ಪಟ್ಟಿಯಂತೆ ನಮ್ಮ ಅಭ್ಯರ್ಥಿಗಳಿಗೆ ಅವರವರ ಮೆರಿಟ್ ಆಧಾರದ ಮೇಲೆ ಪರಿಗಣಿಸಿ ಪಟ್ಟಿ ಪ್ರಕಟಿಸಿ, ನಂತರ ನಮ್ಮ ಮೀಸಲಾತಿಯಡಿಯ ಪಟ್ಟಿ ಪ್ರಕಟಿಸಬೇಕು ಎಂದು ನಿಯಮ ಜಾರಿಗೆ ತರಲಾಯಿತು ಎಂದು ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲಂಚ ಪ್ರಕರಣ | ಲೋಕಾಯುಕ್ತ ಸಿಬ್ಬಂದಿ ಮೇಲೆ ಕಾರು ನುಗ್ಗಿಸಿದ ಅಧಿಕಾರಿ ಬಂಧನ

ಪ್ರಸ್ತುತ ನಿಯಮದಲ್ಲಿ ಹೀಗಿದ್ದರೂ ಕಲ್ಯಾಣದ ಅಭ್ಯರ್ಥಿಗಳಿಗೆ ಆಯ್ಕೆಯ ಪ್ರಶ್ನೆ ಕೇಳುವ ಮೂಲಕ ಅನುಷ್ಠಾನ ಅಧಿಕಾರಿಗಳು ವಿನಾ ಕಾರಣ ಸಮಸ್ಯೆ ಹುಟ್ಟಿಸಿ ನಮ್ಮ ಪಾಲಿನ ಹುದ್ದೆಗಳನ್ನು ಕಬಳಿಸುವ ಕುತಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಲ್ಯಾಣದ ಮಂತ್ರಿಗಳು ಗಂಭೀರವಾಗಿ ಪರಿಗಣಿಸಿ ವಿಶೇಷ ಸ್ಥಾನಮಾನದಡಿ ನೇಮಕಾತಿಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಾನದಂಡದ ಮಾದರಿ ನಮ್ಮ ಹಕ್ಕಿನ ನೇಮಕಾತಿ, ಮುಂಬಡ್ತಿಗಳು ಸುಸೂತ್ರವಾಗಿ ನಮ್ಮ ಅಭ್ಯರ್ಥಿಗಳಿಗೆ ಸಿಗುವ ನಿಟ್ಟಿನಲ್ಲಿ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ರಾಜ್ಯದ ಅನುಷ್ಠಾನಧಿಕಾರಿಗಳ ದ್ವಂದ್ವ ನೀತಿಯನ್ನು ಖಂಡಿಸಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...