ಕಲಬುರಗಿ | ಅಧ್ಯಾಪಕರು ಕಾಲಕ್ಕೆ ತಕ್ಕಂತೆ ನವೀಕರಿಸಿಕೊಳ್ಳುವುದು ಅಗತ್ಯ: ತಹಸೀಲ್ದಾರ್ ಅಂಜುಮ್ ತಬಸ್ಸುಮ್

Date:

ಅಧ್ಯಾಪಕರು ವಿದ್ಯಾರ್ಥಿಗಳಿಗೆ ಆದರ್ಶಪ್ರಾಯ ಮಾರ್ಗದರ್ಶಕರಾಗಬೇಕು. ಕಾಲಕ್ಕೆ ತಕ್ಕಂತೆ ಆಗುವ ಬದಲಾವಣೆಗಳಿಗೆ ಅನುಗುಣವಾಗಿ ತಮ್ಮ ಜ್ಞಾನ ಮತ್ತು ಬೋಧನಾ ಕೌಶಲ್ಯಗಳನ್ನು ನವೀಕರಿಸಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ತಹಸೀಲ್ದಾರ್ ಅಂಜುಮ್ ತಬಸ್ಸುಮ್ ಹೇಳಿದರು.

- Advertisement -

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ)ದ ವತಿಯಿಂದ ಆಯೋಜಿಸಿದ್ದ ಒಂದು ವಾರದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅಧ್ಯಾಪಕರಿಗೆ ಪ್ರಮಾಣಪತ್ರ ವಿತರಿಸಿ, ಕಾಲೇಜಿನ ವತಿಯಿಂದ ನೀಡಿದ ಸತ್ಕಾರವನ್ನು ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘SIR ಪ್ರಕ್ರಿಯೆ ಕುರಿತು ನಮಗೆ ಏನನ್ನೂ ತಿಳಿಸಿದೇ ತೀರ್ಮಾನ’:...

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂಥದ್ದೊಂದು ಗಂಭೀರ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision - SIR /...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಅಧ್ಯಾಪಕರನ್ನು ಬೋಧನಾ ವೃತ್ತಿಯಲ್ಲಿ ಮತ್ತಷ್ಟು ಸಶಕ್ತರನ್ನಾಗಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ಕೆಸಿಎಸ್ಆರ್, ಒತ್ತಡ ನಿರ್ವಹಣೆ ಸೇರಿದಂತೆ ಉಪಯುಕ್ತ ವಿಷಯಗಳನ್ನು ಕಾರ್ಯಕ್ರಮದಲ್ಲಿ ಅಳವಡಿಸಿರುವುದು ಸಂತಸ ತಂದಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ತಮ್ಮ ಬೋಧನಾ ಅವಧಿಯ ದಿನಗಳನ್ನು ಸ್ಮರಿಸಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಶಾಂತಾ ಅಸ್ಟಗಿ ಮಾತನಾಡಿ, ಅಧ್ಯಾಪಕರು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ತಮ್ಮ ಬೋಧನಾ ಕೌಶಲ್ಯವನ್ನು ಮತ್ತಷ್ಟು ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಐಕ್ಯೂಎಸಿ ಸಂಯೋಜಕ ಡಾ. ಸಂದೀಪ ತಿವಾರಿ ಸ್ವಾಗತಿಸಿದರು. ಹಿಂದಿ ಅಧ್ಯಾಪಕ ಕುಪೇಂದ್ರ ರಾಠೋಡ ನಿರೂಪಿಸಿದರು. ಸಿಬ್ಬಂದಿ ಕಾರ್ಯದರ್ಶಿ ಡಾ. ಖಾಜಾವಲಿ ಈಚನಾಳ ವಂದಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಅಕ್ರಮ ಮದ್ಯ ಮಾರಾಟ: ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಹ ಸಂಯೋಜಕ ರವೀಂದ್ರ, ಹಿರಿಯ ಪ್ರಾಧ್ಯಾಪಕರಾದ ರಾಬಿಯಾ ಬೇಗಂ, ಡಾ. ಸಂತೋಷಕುಮಾರ, ಡಾ. ನಾಗಣ್ಣ ಕಿಲಾರಿ, ಡಾ. ಅಶೋಕ ಹೋಳ್ಕರ್, ಡಾ. ಎನ್.ಜಿ. ಶ್ರೀಧರ್, ತಿಪ್ಪಣ್ಣ ವಗ್ದಾಳ, ಡಾ. ಖುತೇಜಾ ನಸ್ರಿನ್, ಡಾ. ರೂಪಾ ಕುಲ್ಕರ್ಣಿ, ಡಾ. ಮಂಜುಳ, ಶರಣಪ್ಪ ಗುಂಡಗುರ್ತಿ, ಭೀಮಣ್ಣ, ಡಾ. ಶಿವಕುಮಾರ್, ಡಾ. ಹೊನ್ನೂರಸ್ವಾಮಿ, ಮೋಹನ್ ಬೈಲಪತ್ತಾರ, ಅಪರ್ಣ, ವಿಕಾಸ್ ಫುಲಾವತಿ ಜಲ್ದೆ, ವಸಂತಕುಮಾರ, ಜಯಪ್ರಕಾಶ ಬಿರಾದಾರ ಸೇರಿದಂತೆ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಮೆಕ್ಕೆಜೋಳ ಮೇವು ರಕ್ಷಣೆಗೆ ಸಲಹೆ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಉತ್ತಮ ಮಳೆಯಾಗದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನೀರು...

ಹಾವೇರಿ | ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು: ಎಂ.ಎಂ.ಮೈದೂರ

"ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ದೈಹಿಕ ಹಾಗೂ ಮಾನಸಿಕ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟ

"ಭಾರತ ಚುನಾವಣಾ ಆಯೋಗ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ವೇಳಾಪಟ್ಟಿ...

ಹುಬ್ಬಳ್ಳಿ | ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ: ನೂರ್ ಶ್ರೀಧರ್ ಆರೋಪ

"ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು...