ಕಲಬುರಗಿ | ಸೇತುವೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಜೆಡಿಎಸ್ ಆಗ್ರಹ

Date:

ಕಲಬುರಗಿ ಜಿಲ್ಲೆಯ ಸೇಡಂನ ಮಳಖೇಡದ ಸೇತುವೆ ಕಾಮಗಾರಿ ಕಳೆದ ಏಳೆಂಟು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದೆ. ರಾಜ್ಯ ಹೆದ್ದಾರಿಯಲ್ಲಿರುವ ಈ ಸೇತುವೆಯು ಪ್ರಮುಖ ನಗರಗಳಿಗೆ ಸಂಪರ್ಕ ಬೆಸೆಯುತ್ತಿದ್ದು, ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಜೆಡಿಎಸ್‌ ಮುಖಂಡ ಬಾಲರಾಜ್ ಗುತ್ತೇದಾರ ಆಗ್ರಹಿಸಿದ್ದಾರೆ.

- Advertisement -

ಮಳಖೇಡ ಸೆತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ್ದ ಅವರು, “ಸೇಡಂನಿಂದ ಕಲಬುರಗಿ ಹಾಗೂ ಕಲಬುರಗಿಯಿಂದ ಹೈದ್ರಬಾದ್‌ಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ದಿನನಿತ್ಯ ಸಾವಿರಾರು ಜನರು ಸಂಚರಿಸುತ್ತಾರೆ. ರಸ್ತೆ ಈ ಸೇತುವೆ ಮೂಲಕ ಹಾದುಹೋಗಿದ್ದು, ಕಾಮಗಾರಿ ಪೂರ್ಣಗೊಳ್ಳದೆ ಸಂಚಾರಕ್ಕೆ ಸಮಸ್ಯೆ ಉಂಟಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಮಳೆ ಬಂದಾಗ ಹಳೇ ಸೆತುವೆ ಸಂಪೂರ್ಣ ಮುಳುಗಡೆ ಆಗುತ್ತಿದ್ದು, ರಸ್ತೆ ಸಂಚಾರ ಸಂಪೂರ್ಣ ಸ್ಥಗೀತವಾಗುತ್ತಿದೆ. ಇದರಿಂದ ಜನರಿಗೆ ತುಂಬಾ ತೊಂದರೆ ಆಗುತ್ತಿದೆ. ಮಾಜಿ ಶಾಸಕರು ಹಾಗೂ ಈಗಿನ ಸಚಿವರ ಇಚ್ಛಾಶಕ್ತಿ ಕೊರತೆಯಿಂದಾಗಿ ಕಾಮಗಾರಿ ಪೂರ್ಣಗೊಂಡಿಲ್ಲ. ಇನ್ನೂ 20% ಕಾಮಗಾರಿ ಬಾಕಿ ಇದೆ. ಮಳೆಗಾಲವನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಈ ವೇಳೆಗೆ ಕಾಮಗಾರಿ ಪೂರ್ಣಗೊಳಿಸಬಹುದಾಗಿತ್ತು. ಆದರೆ, ಎಲ್ಲರೂ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ” ಎಂದು ಆರೋಪಿಸಿದರು.

ಕಾಮಗಾರಿ ವೀಕ್ಷಣೆ ವೇಳೇ, ಜೆಡಿಎಸ್ ಮುಖಂಡ ಮಸ್ತಾನ ಮಳಖೇಡ, ದೇವಪ್ಪಾ, ಜಾವೀದ, ಮೌಲನಾಸಾಬ್ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು 

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾ‌ರ್ ಕೆರೆಗೆ ಬಿದ್ದ ಪರಿಣಾಮ...

ಹಾಸನ | ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಶಾಸಕ ಸಿ.ಎನ್ ಬಾಲಕೃಷ್ಣರಿಗೆ ಮನವಿ; ಸಿಐಟಿಯು

ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಹಾಗೂ ಕಾರ್ಮಿಕರ ವಿವಿಧ ಬೇಡಿಕೆಗಳ...

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...