ಕಲಬುರಗಿ | ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೇಳಿದ ಪತ್ರಕರ್ತನಿಗೆ ಬೆದರಿಕೆ : ಪಿಡಿಒ ಅಮಾನತು

Date:

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿ ಮಾಹಿತಿ ಕೋರಿದ್ದ ಪತ್ರಕರ್ತನಿಗೆ ಬೆದರಿಕೆ ಹಾಕಿ ಕರ್ತವ್ಯ ಲೋಪ ಎಸಗಿದ್ದ ಆರೋಪದಡಿ ಚಿತ್ತಾಪುರ ತಾಲ್ಲೂಕಿನ ಅಳ್ಳೊಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ದೇವೇಂದ್ರಪ್ಪ ಭಾಲ್ಕಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ ಅವರು ಅಮಾನತುಗೊಳಿಸಿ ಆದೇಶಿಸಿದ್ದಾರೆ.

- Advertisement -

ಪತ್ರಿಕೆಯೊಂದರ ವರದಿಗಾರ ನಾಗಯ್ಯ ಸ್ವಾಮಿ ಅಲ್ಲೂರು ಅವರು 15ನೇ ಹಣಕಾಸು ಯೋಜನೆಯಡಿ ಖರ್ಚಾದ ಮಾಹಿತಿ ಕೊಡುವಂತೆ ಅಳ್ಳೊಳ್ಳಿ ಗ್ರಾ.ಪಂ.ಗೆ ಆರ್‌ಟಿಐ ಅರ್ಜಿ ಹಾಕಿದ್ದರು. ಖರ್ಚಿನ ಮಾಹಿತಿಯನ್ನು ನೀಡದೆ ಅರ್ಜಿದಾರನಿಗೆ ಫೋನ್ ಕರೆ ಮಾಡಿದ್ದ ಪಿಡಿಒ ದೇವೇಂದ್ರಪ್ಪ, ʼಬ್ಲಾಕ್‌ಮೇಲ್ ಮಾಡಲು ಅರ್ಜಿ ಹಾಕಿದ್ದೀಯಾ, ಪೊಲೀಸರಿಗೆ ದೂರು ಕೊಟ್ಟು ಒಳ ಹಾಕಿಸುತ್ತೇನೆʼ ಎಂದು ಬೆದರಿಕೆ ಹಾಕಿದ್ದರು ಎಂದು ಸಿಇಒ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಬಗ್ಗೆ ನಾಗಯ್ಯ ಸ್ವಾಮಿ ಅವರು ಚಿತ್ತಾಪುರ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ಸಲ್ಲಿಸಿದ್ದರು. ದೇವೇಂದ್ರಪ್ಪ ಅವರಿಗೆ ಇಒ ನೋಟಿಸ್‌ ನೀಡಿದ್ದರೂ ಸಮಜಾಯಿಷಿ ನೀಡಿರಲಿಲ್ಲ. ಜತೆಗೆ ಆರ್‌ಟಿಐ ಅಡಿ ಮಾಹಿತಿಯೂ ಕೊಡದೆ ಕರ್ತವ್ಯ ಪಾಲನೆಯಲ್ಲಿ ನಿರ್ಲಕ್ಷ್ಯ ತೋರಿದ್ದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ, ದೇವೇಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...