ಕಲಬುರಗಿ | ಯುವಜನರ ಘನತೆಯ ಬದುಕಿಗೆ ಯುವಜನ ಆಯೋಗ ಅಗತ್ಯ; ಯುವ ಮುನ್ನಡೆ ತಂಡ ಆಗ್ರಹ

Date:

ರಾಜ್ಯದಲ್ಲಿ ಯುವಜನರು ಘನತೆಯಿಂದ ಬದುಕಲು ಯುವಜನ ಹಕ್ಕುಗಳ ಅಗತ್ಯವಿದೆ. ಹೀಗಾಗಿ ಯುವಜನ ಆಯೋಗ ಜಾರಿಯಾಗಬೇಕೆಂದು ಕಲಬುರಗಿ ಯುವ ಮುನ್ನಡೆ ತಂಡವು ಜಿಲ್ಲಾದ್ಯಂತ ಯುವಜನ ಆಯೋಗ ರಚನೆಗಾಗಿ ಧ್ವನಿಯಾಗುವಂತೆ ಕಾಲೇಜುಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕರಪತ್ರ ಹಂಚುವ ಮೂಲಕ ಅಭಿಯಾನ ನಡೆಸಿದರು.

- Advertisement -

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಪಂಚಾಯಿತಿ, ಜಿಲ್ಲಾಧಿಕಾರಿ ಹಾಗೂ ಕೆಕೆಆರ್‌ಡಿಬಿ ಇಲಾಖೆ ಸೇರಿದಂತೆ ಹಲವು ಸರ್ಕಾರಿ ಇಲಾಖೆಗಳಿಗೂ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

WhatsApp Image 2023 10 20 at 16.35.36

ಯುವಜನ ಆಯೋಗ ರಚನೆಯಾಗಬೇಕೆಂದು ಮನವಿ ಮಾಡಿದ ಯುವಜನರು, “ಪ್ರಸ್ತುತ ಯುವಜನರು ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕವಾಗಿ ಹಲವಾರು ಸಮಸ್ಯೆಗಳ ಜೊತೆ ಹಲವಾರು ಒತ್ತಡಗಳನ್ನು ಅನುಭವಿಸುತ್ತಿದ್ದಾರೆ. ಇನ್ನೂ ಚಿಕ್ಕವರೆಂಬ ವಯಸ್ಸಿನ ಕಾರಣಕ್ಕೆ ಭಾರತದ ಸಂವಿಧಾನ ಬದ್ಧ ಹಕ್ಕುಗಳು ಯುವಜನರಿಗೆ ದಕ್ಕುತ್ತಿಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | 15ನೇ ಹಣಕಾಸು ಅನುದಾನದಲ್ಲಿ ಅಕ್ರಮ; ಪಿಡಿಒ ವಿರುದ್ಧ ತನಿಖೆಗೆ ಆಗ್ರಹ

“ಜಾತಿ, ಧರ್ಮ, ಲಿಂಗ ಮತ್ತು ವರ್ಗದ ಕಾರಣಕ್ಕಾಗಿ ಯುವಜನರು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ನಿರುದ್ಯೋಗ ಅಭದ್ರತೆ, ಘನತೆ ಹಾಗೂ ಅನನ್ಯತೆಯ ಹಕ್ಕುಗಳ ಉಲ್ಲಂಘನೆಯಾಗುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2023 10 20 at 16.35.36 1

ಯುವ ಜನರು ಎದುರಿಸುತ್ತಿರುವಂತಹ ಸಮಸ್ಯೆಗಳಿಗೆ ಪರಿಹಾರ ಹುಡುಕಲು, ಅಧ್ಯಯನ ಮಾಡಲು, ಮಾರ್ಗದರ್ಶನ ನೀಡಲು ಮತ್ತು ಯುವ ಸಬಲೀಕರಣಕ್ಕೆ ಬೇಕಾದ ಅಗತ್ಯತೆಗಳನ್ನು ಸರ್ಕಾರಕ್ಕೆ ಮಾಹಿತಿ ಮುಟ್ಟಿಸಲು‌, ಯುವಜನರ ಸಮಸ್ಯೆಗಳಿಗೆ ಕಿವಿಯಾಗಲು, ದನಿಯಾಗಲು ಯುವಜನರ ಆಯೋಗದ ಅಗತ್ಯವಿದೆ” ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...