ಕಲಬುರಗಿ | ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ; ಹೈಕ ಅಭಿವೃದ್ಧಿಗೆ ₹5 ಸಾವಿರ ಕೋಟಿ: ಸಿಎಂ ಸಿದ್ದರಾಮಯ್ಯ

Date:

ಸ್ವಾಮಿ ರಮಾನಂದ ತೀರ್ಥರು ಹಾಗೂ ಹಲವು ಹೋರಾಟಗಾರರ ತ್ಯಾಗ, ಬಲಿದಾನಗಳ ಫಲವಾಗಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲರ ಸಂಕಲ್ಪ ಶಕ್ತಿಯಿಂದಾಗಿ ಹೈದರಾಬಾದ್ ಕರ್ನಾಟಕ ನಿಜಾಮರ ಆಳ್ವಿಕೆಯಿಂದ ಮುಕ್ತವಾಗಿ ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕಲ್ಯಾಣ ‌ಕರ್ನಾಟಕ ಅಮೃತ ಮಹೋತ್ಸವದ ಅಂಗವಾಗಿ ಕಲಬುರಗಿಯ ಸಿಎಆರ್ ಪರೇಡ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

“2013ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಈ ಭಾಗದ ಅಭಿವೃದ್ಧಿಗೆ ಹೊಸ ವೇಗ ನೀಡಲಾಯಿತು” ಎಂದರು.

“ಸಂವಿಧಾನದಲ್ಲಿ 371 (ಜೆ) ಪರಿಚ್ಛೇದ ಸೇರ್ಪಡೆಯೊಂದಿಗೆ ಹೈದರಾಬಾದ್‌ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ದೊರೆತಂತಾಯಿತು. ಹೈದರಾಬಾದ್‌ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಈ ಭಾಗದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಯಿತು. ಮುಂದೆ ಮಂಡಳಿಯನ್ನು ಕಲ್ಯಾಣ ಕರ್ನಾಟಕ ‌ಪ್ರದೇಶ ಅಭಿವೃದ್ಧಿ ಮಂಡಳಿ ಎಂದು‌ ಪುನರ್ ನಾಮಕರಣ ಮಾಡಲಾಯಿತು” ಎಂದರು.

“ಸಮಾನತೆಯ ಹೊಸ ಹಾದಿಯಲ್ಲಿ ಸಾಗಿದ ಬುದ್ಧ, ಸಾಮಾಜಿಕ ‌ಕ್ರಾಂತಿಯ ಹರಿಕಾರ ಬಸವಣ್ಣ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ತತ್ವ ಮತ್ತು ಅದರ್ಶಗಳನ್ನು ಅಕ್ಷರಶಃ ಅಳವಡಿಸಿಕೊಂಡಿರುವ ನಮ್ಮ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ದಿನವೇ ಚುನಾವಣಾ ‌ಪೂರ್ವದಲ್ಲಿ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳ ಜಾರಿಗೆ ತಾತ್ವಿಕ ಅನುಮೋದನೆ ನೀಡಿ 100 ದಿನಗಳ ಅವಧಿಯಲ್ಲಿ ಪ್ರಮುಖ ನಾಲ್ಕು ಗ್ಯಾರಂಟಿ ಜಾರಿಗೆ ತಂದಿದ್ದೇವೆ. ಇದರಿಂದ ಕಾಂಗ್ರೆಸ್ ನುಡಿದಂತೆ ನಡೆಯುವ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ” ಎಂದು ಹೇಳಿದರು.

“ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗೆ 371 (ಜೆ) ತಿದ್ದುಪಡಿಯನ್ವಯ ರಚನೆಗೊಂಡ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಪ್ರಸಕ್ತ 2023-24ನೇ ಸಾಲಿನ ಬಜೆಟ್‌ನಲ್ಲಿ ತಿಳಿಸಿದಂತೆ 5 ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಬಳಿಕ ಪೊಲೀಸ್, ಅರಣ್ಯ, ಅಬಕಾರಿ, ಗೃಹರಕ್ಷಕ ದಳ ಸೇರಿದಂತೆ ಹಲವು ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ದಿನದ ಸಂಭ್ರಮ ಮನೆ ಮಾಡಿದೆ. ದೇಶಕ್ಕೆ ಆಗಸ್ಟ್‌ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಿದೆ. ಆದರೆ ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಿಗೆ ಹೈದ್ರಾಬಾದ್ ನಿಜಾಮರಿಂದ 1948 ಸೆಪ್ಟೆಂಬರ್ 17ರಂದು ಸ್ವಾತಂತ್ರ್ಯ ಸಿಕ್ಕಿತು. ಇದೀಗ ಸ್ವಾತಂತ್ರ್ಯ ಲಭಿಸಿ 75 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಆಚರಣೆ ನಡೆಯುತ್ತಿದೆ. 

ಈ ಸುದ್ದಿ ಓದಿದ್ದೀರಾ? ಸೆ.25ರಂದು ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ‘ಜನತಾ ದರ್ಶನ’ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಕಾರ್ಯಕ್ರಮಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಯಾಣ ನಾಡಿನ ಸ್ವಾತಂತ್ರ್ಯಕ್ಕಾಗಿ ದಿಟ್ಟ ಕ್ರಮ ಕೈಗೊಂಡು ಮಿಲಿಟರಿ ಆಪರೇಷನ್ ನಡೆಸಿ ಹೈದರಾಬಾದ್ ನಿಜಾಮನ ಕಪಿಮುಷ್ಟಿಯಿಂದ ಮುಕ್ತಿಗೊಳಿಸಿ ಸ್ವಾತಂತ್ರ್ಯ ಕೊಡಿಸಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ನೇರವೇರಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್, ಐಟಿ-ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ‌ಕಾರ್ಯದರ್ಶಿ ಗೋವಿಂದರಾಜ, ಶಾಸಕರುಗಳಾದ ಬಿ ಆರ್ ಪಾಟೀಲ, ಎಂ ವೈ ಪಾಟೀಲ, ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ವಿಧಾನ ಪರಿಷತ್ ಸದಸ್ಯರುಗಳಾದ ತಿಪ್ಪಣ್ಣಪ್ಪ ಕಮಕನೂರ, ಶಶೀಲ್ ಜಿ. ನಮೋಶಿ, ಮೇಯರ್ ವಿಶಾಲ ದರ್ಗಿ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಐಜಿಪಿ ಅಜಯ್ ಹಿಲೋರಿ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಕಮಿಷನರ್ ಚೇತನ್ ಆರ್, ಜಿ ಪಂ ಸಿಇಒ ಭಂವರ್ ಸಿಂಗ್ ಮೀನಾ ಸೇರಿದಂತೆ ಇತರರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಜಾತಿ ನಿಂದನೆ; ನಟ ಉಪೇಂದ್ರ ಬಂಧನಕ್ಕೆ ಆಗ್ರಹ

ನಟ ಉಪೇಂದ್ರ ಅವರು, ʼಊರು ಇದ್ದಲ್ಲಿ ಹೊಲಗೇರಿʼ ಎನ್ನುವ ಮಾತನ್ನು ಹೇಳುವುದರ...

ಕಾವೇರಿ ವಿವಾದ | ಬೆಂಗಳೂರು ಬಂದ್‌ಗೆ ಎಫ್‌ಐಟಿಯು ಬೆಂಬಲ: ಅಬ್ದುಲ್ ರಹಿಮಾನ್

ಕಾವೇರಿ ಜಲ ವಿವಾದದ ಹಿನ್ನಲೆಯಲ್ಲಿ ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್‌ಗೆ ಫೆಡರೇಶನ್...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲು ಮಸೂದೆಗೆ ತಿದ್ದುಪಡಿ: ಮಲ್ಲಿಕಾರ್ಜುನ ಖರ್ಗೆ

2024ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿ ತರುವುದಾಗಿ...

ಬೀದರ್‌ | ಪಡಿತರದಲ್ಲಿ ಅಕ್ರಮ; 22 ನ್ಯಾಯಬೆಲೆ ಅಂಗಡಿಗಳ ಅಮಾನತು

ಪಡಿತರ ಮಾರಾಟದಲ್ಲಿ ನಿಗದಿತ ಬೆಲೆಗಿಂತ ಹೆಚ್ಚು ದರ ವಿಧಿಸುವುದು, ಇಲ್ಲವೇ ಬಯೋಮೆಟ್ರಿಕ್‌...