ಕಲಬುರಗಿ | ನೀಟ್ ಅಕ್ರಮ ಖಂಡಿಸಿ ಕರಾದಸಂಸ ಧರಣಿ; ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹ

Date:

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ದೇಶದ ವಿವಿಧ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ರಾಜ್ಯ ಸಮಿತಿಯ ನೇತೃತ್ವದಲ್ಲಿ ಗುರುವಾರ ಜಗತ್ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಿ, ಜಿಲ್ಲಾಧಿಕಾರಿಗಳ ಮುಖಾಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಧರಣಿಯನ್ನುದ್ದೇಶಿಸಿ ಮಾತನಾಡಿದ ಕರಾದಸಂಸ ಹಿರಿಯ ಮುಖಂಡ ಡಾ. ಡಿ ಜಿ ಸಾಗರ, ‘ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿನ ಅವ್ಯವಸ್ಥೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

‘ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ದಲಿತ ಸಂಘರ್ಷ ಸಮಿತಿ ಬೆಂಬಲಿಸುತ್ತದೆ. ವಿದ್ಯಾರ್ಥಿಗಳ ಬೇಡಿಕೆಗಳನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸಿರುವುದು ಖಂಡನೀಯವಾಗಿದ್ದು, ಪ್ರಜಾಪ್ರಭುತ್ವದಲ್ಲಿ ಶಾಂತಿಯುತ ಪ್ರತಿಭಟನೆಗಳಿಗೆ ಗೌರವ ನೀಡಬೇಕು’ ಎಂದು ಅವರು ಒತ್ತಾಯಿಸಿದರು.

‘ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಅಥವಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ದೇಶದ ಪರೀಕ್ಷಾ ವ್ಯವಸ್ಥೆಯನ್ನು ಸಮಗ್ರವಾಗಿ ಸುಧಾರಿಸಬೇಕು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗಿಸಿದ ಪ್ರಕರಣದ ಕುರಿತು ಕ್ರಮ ಕೈಗೊಳ್ಳಬೇಕು ಮತ್ತು ಪರೀಕ್ಷಾ ಅಕ್ರಮಗಳಿಂದ ತೊಂದರೆಗೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಶಹಾಪುರದಲ್ಲಿ ಪಂಜಿನ ಮೆರವಣಿಗೆ

ಧರಣಿಯಲ್ಲಿ ರಾಜ್ಯ ಖಜಾಂಚಿ ಬಿ.ಸಿ. ವಾಲಿ, ಜಿಲ್ಲಾ ಮುಖಂಡ ಸುರೇಶ್ ಹಾದಿಮನಿ, ಎಸ್.ಬಿ. ಸುಳ್ಳದ್, ಎಸ್. ಶಂಕರ್, ಅಂಬಣ್ಣ ಜಿವಣಗಿ, ಕೃಷ್ಣಪ್ಪ ಕರಣಿಕ, ಮಹಾದೇವ ತರ್ನಳ್ಳಿ, ಶಿವಶರಣ ಮಾರಡಗಿ, ಮಹಾಲಿಂಗ ಅಂಗಡಿ, ತಿಪ್ಪಣ್ಣ ದನೇಕರ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...

ಕೋಲಾರ | ಆಗ್ನೇಯ ಪದವೀಧರರ ಕ್ಷೇತ್ರ : ಕೋಲಾರ ಜಿಲ್ಲೆಯಲ್ಲಿ ಶೇ. 76.99 ರಷ್ಟು ಮತದಾನ : ಚುನಾವಣಾಧಿಕಾರಿ ಎಂ.ಆರ್. ರವಿಕುಮಾರ್

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಕೋಲಾರ ಜಿಲ್ಲೆಯಲ್ಲಿ...