ಕಲಬುರಗಿ | ಅ.5ರಿಂದ ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ

Date:

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ 70ನೇ ಬೌದ್ಧ ಧಮ್ಮ ದೀಕ್ಷಾ ವರ್ಷಾಚರಣೆ ಅಂಗವಾಗಿ ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ–2026 ಅನ್ನು ಅಕ್ಟೋಬರ್ 5ರಿಂದ ಆರಂಭಿಸಲಾಗುತ್ತಿದೆ ಎಂದು ಅಂತರಾಷ್ಟ್ರೀಯ ಬೌದ್ಧ ಯುವ ಸಂಘಟನೆ (ಭಾರತ) ರಾಷ್ಟ್ರೀಯ ಅಧ್ಯಕ್ಷ ಝೆನ್ ಮಾಂಕ್ ಡಾ. ಶಾಕು ಬೋಧಿ ಧಮ್ಮ ತಿಳಿಸಿದರು.

- Advertisement -

ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಬೌದ್ಧ ಯುವ ಸಂಘಟನೆ (ಭಾರತ), ಗ್ಲೋಬಲ್ ಡಾ. ಅಂಬೇಡ್ಕರ್ ಬೌದ್ಧ ಮಿಷನ್ (ಯು.ಎಸ್.ಎ.), ಅಖಿಲ ಭಾರತ ಡಾ. ಅಂಬೇಡ್ಕರ್ ಭಿಕ್ಕು ಸಂಘ ಹಾಗೂ ಬೌದ್ಧ ಮಹಾಸ್ತೂಪ ಅಭಿವೃದ್ಧಿ ಸಂರಕ್ಷಣಾ ಸಂಸ್ಥೆ, ಸನ್ನತಿ (ಕನಗನಹಳ್ಳಿ) ಇವರ ಸಂಯುಕ್ತ ಆಶ್ರಯದಲ್ಲಿ ಯಾತ್ರೆ ಆಯೋಜಿಸಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಅಕ್ಟೋಬರ್ 5ರಂದು ಬೆಳಿಗ್ಗೆ 10.30ಕ್ಕೆ ಕಲಬುರಗಿಯ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮಾ ವೃತ್ತದಿಂದ ಯಾತ್ರೆಗೆ ಚಾಲನೆ ದೊರೆಯಲಿದ್ದು, ನವೆಂಬರ್ 1ರಂದು ಚಿತ್ತಾಪುರ ತಾಲೂಕಿನ ಸನ್ನತಿ (ಕನಗನಹಳ್ಳಿ)ಯ ಪ್ರಾಚೀನ ಸಾಮ್ರಾಟ್ ಅಶೋಕ ಸ್ತೂಪದಲ್ಲಿ ಸಮಾರೋಪ ಸಮಾರಂಭ ಹಾಗೂ ಭವ್ಯ ಬೌದ್ಧ ಧಮ್ಮ ದೀಕ್ಷಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಈ ವೇಳೆ ಸುಮಾರು 5 ಲಕ್ಷ ಜನರು ಬೌದ್ಧ ಧಮ್ಮ ದೀಕ್ಷೆ ಸ್ವೀಕರಿಸುವ ನಿರೀಕ್ಷೆ ಇದ್ದು, ರಾಜ್ಯದ ವಿವಿಧ ಜಿಲ್ಲೆಗಳ ಜೊತೆಗೆ ದೇಶದ ವಿವಿಧ ಭಾಗಗಳಿಂದಲೂ ಭಕ್ತರು ಹಾಗೂ ಅನುಯಾಯಿಗಳು ಭಾಗವಹಿಸಲಿದ್ದಾರೆ ಎಂದರು.

ಭಾರತದ ಸಂವಿಧಾನ ಪ್ರತಿಪಾದಿಸುವ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಬಂಧುತ್ವದ ಮೌಲ್ಯಗಳನ್ನು ಸಮಾಜದಲ್ಲಿ ಬಲಪಡಿಸುವ ಉದ್ದೇಶದಿಂದ ಈ ಜನಜಾಗೃತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಸನ್ನತಿ ಐತಿಹಾಸಿಕ ಬೌದ್ಧ ಕ್ಷೇತ್ರವಾಗಿದ್ದು, ಅದರ ಅಭಿವೃದ್ಧಿ ಹಾಗೂ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಬರ ಘೋಷಣೆಗೆ ಆಗ್ರಹಿಸಿ ಆರ್‌ಪಿಐ ಧರಣಿ; ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರಕ್ಕೆ ಒತ್ತಾಯ

ಸುದ್ದಿಗೋಷ್ಠಿಯಲ್ಲಿ ಭದಂತ ಬೋಧಿ ಧಮ್ಮ, ಮಹಾದೇವ್ ದನ್ನಿ, ಶಿವಶರಣಪ್ಪ ಮೈತ್ರಿ, ಸಂತೋಷ ಮೆಲ್ಮನಿ, ದಿನೇಶ್ ದೊಡ್ಡಮನಿ ಸದೀಪ್ ಕಟ್ಟಿ, ಹಾಗೂ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕಾಣೆಯಾದ ಮಕ್ಕಳ ಪತ್ತೆಗೆ ವಿಶೇಷ ಕಾರ್ಯಪಡೆ ಸಮಿತಿ ಸಭೆ

ನಗರ ಪೊಲೀಸ್ ಆಯುಕ್ತಾಲಯದ ಪೊಲೀಸ್ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ,...

ಕಲಬುರಗಿ | ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪಾಲಿಕೆ ಎದುರುಗಡೆ ಪ್ರತಿಭಟನೆ

ನಗರದ ವಾರ್ಡ್‌ ನಂ. 2ರ ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ...

ಯಾದಗಿರಿ | ಪಂಚಾಯಿತಿ ಚುನಾವಣೆಗಳಲ್ಲೂ ಪರಿಶಿಷ್ಟ ಜಾತಿಗಳಿಗೆ ರಾಜಕೀಯ ಒಳಮೀಸಲಾತಿ ಕಲ್ಪಿಸಲು ಆಗ್ರಹ

ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ, ಪ್ರವರ್ಗ-ಬಿ...

ಕಲಬುರಗಿ | ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ

ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವುದು ಹಾಗೂ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ...