ಕಲಬುರಗಿ | ಬೆಳೆ ವಿಮೆ ಹಣ ಬಿಡುಗಡೆಗೆ ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹ

Date:

ಬೆಳೆ ಹಾನಿ ಸಂಭವಿಸಿದ್ದಕ್ಕೆ ಪ್ರತಿಯಾಗಿ ಪ್ರಿಮಿಯಂ ಪಾವತಿಸಿದ ರೈತರ ₹600 ಕೋಟಿ ಬೆಳೆ ವಿಮೆ ಹಣವನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

- Advertisement -

ಕಲಬುರಗಿ ನಗರದ ಎಸ್‌ವಿಪಿ ವೃತ್ತದಲ್ಲಿರುವ ಇಫ್ಕೊ ಟೋಕಿಯೊ ವಿಮಾ ಕಂಪನಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ, ಟೋಕಿಯೊ ವಿಮಾ ಸಂಸ್ಥೆಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

‘ಈಗಾಗಲೇ ಪೂರ್ವ ಮುಂಗಾರು ಮಳೆ ಶುರುವಾಗಿದ್ದು, ರೈತರು ಬಿತ್ತನೆಗೆ ಹೊಲವನ್ನು ಸಜ್ಜು ಗೊಳಿಸಬೇಕಿದೆ. ಬಿತ್ತನೆ ಬೀಜ, ಗೊಬ್ಬರ ಖರೀದಿ, ಹೊಲ ಹಸನು ಮಾಡಲು ಟ್ರ್ಯಾಕ್ಟರ್ ಬಾಡಿಗೆ ಮತ್ತಿತರ ಖರ್ಚುಗಳನ್ನು ತೂಗಿಸಲು ಬೇರೆಡೆ ಸಾಲ ಮಾಡಬೇಕಿದೆ. ಅದನ್ನು ತಪ್ಪಿಸಲು ಕೂಡಲೇ ಬಾಕಿ ಉಳಿಸಿಕೊಂಡಿರುವ ಬೆಳೆ ವಿಮೆ ಹಣವನ್ನು ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ‘ತೊಗರಿ ಬೆಳೆ ನಷ್ಟ ಪರಿಹಾರ ಬಿಡುಗಡೆ ಮಾಡುವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದಾಗ ವರದಿ ತರಿಸಿಕೊಂಡು ಪರಿಹಾರ ಘೋಷಣೆ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ, ಇದುವರೆಗೂ ಪರಿಹಾರ ನೀಡಿಲ್ಲ. ಆ ಮೂಲಕ ಮುಖ್ಯಮಂತ್ರಿ ಅವರು ರೈತರ ಬಗ್ಗೆ ನಿಷ್ಕಾಳಜಿ ವಹಿಸಿರುವುದು ಬೇಸರದ ಸಂಗತಿ’ ಎಂದರು.

ಇದನ್ನೂ ಓದಿ : ಕಲಬುರಗಿ | ಸಿಡಿಲು ಬಡಿದು ರೈತ ಸಾವು

ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರಾದ ದಿಲೀಪ್ ನಾಗೂರೆ, ಸಿದ್ದರಾಮ ಧಣ್ಣೂರ, ದೇವು ಬಿರಾದಾರ, ಸುನಿಲ್ ಹೇರೂರು, ಚಂದಪ್ಪ ಪೂಜಾರಿ, ನಾಗೇಂದ್ರಪ್ಪ ಡಿಗ್ಗಿ, ಮಹಾದೇವ ಡಿಗ್ಗಿ, ಸಿದ್ದಣ್ಣಾ ಪಾಟೀಲ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...