ಕಲಬುರಗಿ | ಜಂಟಿ ಕೃಷಿ ನಿರ್ದೇಶಕರ ಕಚೇರಿ ಎದುರು ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ

Date:

ಕಳಪೆ ಮಟ್ಟದ ಸಾರಸ್ 335 ಸೋಯಾ ಕಳಪೆ ಮಟ್ಟದ ಬೀಜ ಮಾರಾಟ ಮಾಡಿದ ಮಹಾಗಾಂವ ರೈತ ಸಂಪರ್ಕ ಕೇಂದ್ರದಿಂದ ಒಟ್ಟು 1,000 ಪಾಕೆಟ್ ಬೀಜ ವಿತರಿಸಿ ರೈತರಿಗೆ ಮೋಸ ಮಾಡಿದ ಬೀಜದ ಕಂಪನಿ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

- Advertisement -

ಸಂಘಟನೆ ಜಿಲ್ಲಾಧ್ಯಕ್ಷ ಶರಣಬಸಪ್ಪಾ ಮಮಶೆಟ್ಟಿ ಮಾತನಾಡಿ, “ಕಲಬುರಗಿ ಜಿಲ್ಲೆಯ ರೈತರ ಜಿವನಾಡಿ ಬೆಳೆ ಸೋಯಾ ಬೆಳೆಯಾಗಿದೆ. ಆದರೆ, ಮಹಾಗಾಂವ ರೈತ ಸಂಪರ್ಕ ಕೇಂದ್ರದಿಂದ ವಿತರಿಸಿದ ಸಾರಸ್ 335 ಸೋಯಾ ಬೀಜ ಅತ್ಯಂತ ಕಳಪೆ ಮಟ್ಟದಿಂದ ಕೂಡಿದೆ. ಇದರಿಂದ ರೈತರಿಗೆ ಆರ್ಥಿಕ ನಷ್ಟ ಉಂಟಾಗಿದೆ. ಬೀಜದ ಕಂಪನಿ ಮೂಲಕ ಪ್ರತಿ ಎಕರೆಗೆ ಕನಿಷ್ಠ 25,000 ರೂಪಾಯಿ ಪರಿಹಾರ ವಿತರಿಸಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರೈತರು ಪ್ರತಿ ಎಕರೆಗೆ ಕನಿಷ್ಠ 6 ರಿಂದ 8 ಸಾವಿರ ರೂಪಾಯಿ ಖರ್ಚು ಆಗುತ್ತಿದೆ. ಕಳಪೆ ಬೀಜ ವಿತರಿಸಿದ ಕಂಪನಿಯಿಂದ ರೈತರಿಗೆ ಕನಿಷ್ಠ ಒಂದು ಎಕರೆಗೆ 35,000 ರೂಪಾಯಿ ಹಾನಿಯುಂಟಾಗಿದೆ. ರೈತರ ಬದುಕಿಗೆ ಬರೆ ಎಳೆದ ಸಾರಸ್ 335 ಸೋಯಾ ಬೀಜದ ಕಂಪನಿ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ, ಕಂಪನಿ ಪರವಾನಿಗೆ ಕಪ್ಪು ಪಟ್ಟಿಗೆ ಸೇರಿಸಬೇಕೆಂದು ಒತ್ತಾಯಿಸಿದರು.

ಒಂದು ವೇಳೆ ನಿರ್ಲಕ್ಷ್ಯ ಧೋರಣೆ ತೊರಿದ್ದಲ್ಲಿ ಮೊಸಕ್ಕೊಳಗಾದ ರೈತರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಕಲಬುರಗಿ | ಅನುದಾನ ಲೂಟಿ ಆರೋಪ : ಹಾಗರಗಾ ಪಿಡಿಒ ವಿರುದ್ಧ ಕ್ರಮಕ್ಕೆ ದಸಂಸ ಆಗ್ರಹ

ಪ್ರತಿಭಟನೆಯಲ್ಲಿ ಪ್ರಮುಖರಾದ ಶ್ರೀನಿವಾಸ ಎಸ್‌.ಕೆಂಚೆ, ಶಿವಕುಮಾರ ಹೆರೂರು, ರೇವಣಸಿದ್ದಪ್ಪಾ ಅಪಚಂದ, ಮನೋಹ‌ರ್ ಗುರುಡೆ, ಮಲ್ಲಿಕಾರ್ಜುನ ಮಿಸೆ, ಬಸವರಾಜ ಹೊಳಕುಂದಿ, ಬಾಬುರಾವ, ವಿದ್ಯಾವತಿ, ಚಂದಮ್ಮ ಬುರುಡೆ, ಗಂಗಮ್ಮಾ ಜಿವುಣಗಿ, ಅನಿತಾ ಹರೆಕುರುಬುರು, ಸುರುತ ಹತ್ತರ್ಕಿ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...