ಕಲಬುರಗಿ | ಕೆಕೆಆರ್‌ಟಿಸಿ ಬಸ್ ಚಾಲಕನ ಭೀಕರ ಹತ್ಯೆ

Date:

ಕಲಬುರಗಿ ನಗರ ಬಸ್ ನಿಲ್ದಾಣದಲ್ಲಿ ಭೀಕರ ಹತ್ಯೆ ನಡೆದಿದೆ. ಕೆಕೆಆರ್‌ಟಿಸಿ ಬಸ್ ಚಾಲಕ ನಾಗಯ್ಯಾ ಸ್ವಾಮಿ (45) ಎಂಬುವವರನ್ನು ದುಷ್ಕರ್ಮಿಗಳು ಭೀಕರವಾಗಿ ಇರಿದುಕೊಂದಿದ್ದಾರೆ.

ನಾಗಯ್ಯಾ ಸ್ವಾಮಿ ಅವರು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮದರಿ ಗ್ರಾಮದ ನಿವಾಸಿಯೆಂದು ತಿಳಿದುಬಂದಿದೆ. ಅವರು ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ ಬಸ್ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದರು.

ಕಲಬುರಗಿ ಬಸ್‌ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಊಟ ಮಾಡಿ ಹೊರ ಬರುತ್ತಿದ್ದಂತೆ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ, ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ದುಷ್ಕರ್ಮಿಗಳು ಚಾಲಕ ನಾಗಯ್ಯ ಸ್ವಾಮಿ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ನಾಗಯ್ಯ ಸ್ವಾಮಿ ಕೈ ಹೆಬ್ಬೆರಳು ತುಂಡಾಗಿದೆ. ಹತ್ಯೆಗೈದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಬ್ರಹ್ಮಪುರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಆಪರೇಷನ್ ಹಸ್ತದ ಬಗ್ಗೆ ಲಕ್ಷ್ಮಣ್ ಸವದಿ ಮಾರ್ಮಿಕ ಹೇಳಿಕೆ

ಬಹಳಷ್ಟು ಮಂದಿ ಜೆಡಿಎಸ್‌-ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರುಲು ಸಿದ್ದರಾಗಿದ್ದಾರೆ. ಎಲ್ಲದಕ್ಕೂ ಕಾಲ...

ಚಾಮರಾಜನಗರ | ಚೈನ್ನೈ ಮೂಲದ ವೈದ್ಯೆ ಅನುಮಾನಾಸ್ಪದ ಸಾವು

ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯೆ ಡಾ. ಸಿಂಧುಜಾ (28) ಅನುಮಾನಾಸ್ಪವಾಗಿ...

ಬೀದರ್‌ | ಸೀತಾಫಲ ಹಣ್ಣಿಗೆ ಭಾರೀ ಬೇಡಿಕೆ; ಬೇಕಿದೆ ಮಾರುಕಟ್ಟೆ ಸೌಲಭ್ಯ

ಸೀತಾಫಲ ಹಣ್ಣು ತಿನ್ನಲು ತುಂಬಾ ರುಚಿಕರ ಹಾಗೂ ಅಷ್ಟೇ ಸ್ವಾದಿಷ್ಟ, ರೋಗ...

ಕಾವೇರಿ ವಿವಾದ | ತಮಿಳು ನಟ ಸಿದ್ಧಾರ್ಥ್‌ ಕ್ಷಮೆ ಕೇಳಿದ ನಟ ಶಿವರಾಜ್‌ಕುಮಾರ್

ತಮಿಳು ನಟ ಸಿದ್ಧಾರ್ಥ್‌ ಅವರ ಸುದ್ದಿಗೋಷ್ಠಿಗೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ...