ಕಲಬುರಗಿ | ಕೆಕೆಆರ್‌ಟಿಸಿ ಬಸ್,ಬೈಕ್ ಮುಖಾಮುಖಿ; ಸ್ಥಳದಲ್ಲೇ ಮೂವರು ಯುವಕರು ಸಾವು!

Date:

ಕೆಕೆಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕರದಾಳ, ಚಿತ್ತಾಪುರ ರಸ್ತೆ ಮಧ್ಯೆ ಗುರುವಾರ ನಡೆದಿದೆ.

- Advertisement -

ಮೃತರನ್ನು ಬಮ್ಮನಳ್ಳಿ ಗ್ರಾಮದ ದೇವರಾಜ ಅಯ್ಯಪ್ಪ (19), ಮುಡಬೂಳ ಗ್ರಾಮದ ಲಕ್ಷ್ಮೀಕಾಂತ (24) ಹಾಗೂ ಸೇಡಂ ತಾಲೂಕಿನ ಬೀಜನಳ್ಳಿ ಗ್ರಾಮದ ಪ್ರಕಾಶ ಬಸ್ಸಪ್ಪ (22) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಲಭ್ಯ ಮಾಹಿತಿಯ ಪ್ರಕಾರ, ಕೆಕೆಆರ್‌ಟಿಸಿ ಬಸ್‌ ಚಿತ್ತಾಪುರದಿಂದ ಸನ್ನತಿ ಕಡೆಗೆ ತೆರಳುತ್ತಿದ್ದ ವೇಳೆ, ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ಬಮ್ಮನಳ್ಳಿ ಕಡೆಯಿಂದ ಬೀಜನಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಕರದಾಳ–ಚಿತ್ತಾಪುರ ರಸ್ತೆಯಲ್ಲಿ ಎದುರುಬದಿಯಿಂದ ಬಂದ ಬಸ್‌ ಮತ್ತು ಬೈಕ್‌ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್‌ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅದ್ಧೂರು ಶ್ರೀನಿವಾಸಲು, ಡಿವೈಎಸ್ಪಿ ಶಂಕರಗೌಡ ಪಾಟೀಲ್‌, ಸಿಪಿಐ ಎಸ್‌.ಸಿ. ಪಾಟೀಲ್‌, ಪಿಎಸ್‌ಐ ಮಂಜುನಾಥ ರೆಡ್ಡಿ ಹಾಗೂ ಸಿಬ್ಬಂದಿಗಳಾದ ದತ್ತು, ಅಯ್ಯಣ್ಣ ಮತ್ತು ಅಝರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೃತದೇಹಗಳನ್ನು ಚಿತ್ತಾಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ನಡೆಯುತ್ತಿದೆ. ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ಮೊಹರಂ ಹಬ್ಬದಲ್ಲಿ ನರೇಗಾ ಕಾರ್ಮಿಕರ ಹೆಜ್ಜೆ; ಸೌಹಾರ್ದತೆ ಮತ್ತು ಐಕ್ಯತೆಯ ಸಂದೇಶ

ಈ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೀಕರ ರಸ್ತೆ ಅಪಘಾತ: ಸವಾರ ಸ್ಥಳದಲ್ಲೇ ಸಾವು 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಕಸ್ಕೆಬೈಲ್‌ನಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ...

ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಸೋಮನಹಳ್ಳಿ ತಾಂಡ್ಯದಲ್ಲಿ ಮದ್ಯಪಾನ...

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...