ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

Date:

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ವತಿಯಿಂದ ಮಂಗಳವಾರ ಭಂಕೂರು ಕ್ರಾಸ್‌ನಲ್ಲಿ ರಸ್ತೆ ತಡೆ ಹಾಗೂ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.

- Advertisement -

ಪ್ರತಿಭಟನೆ ಬಳಿಕ ಶಹಾಬಾದ್ ತಹಸೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ, ಅಬಕಾರಿ ಇಲಾಖೆ, ಭಂಕೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಶಹಾಬಾದ್ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಕೆಪಿಆರ್‌ಎಸ್ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ‘ವಿಬಿ-ಜಿ ರಾಮ್ ಜಿ’ ಯೋಜನೆಯಡಿ ಕೆಲಸ ಮಾಡಿದ ಕೂಲಿಕಾರರ ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಕೂಲಿ ಹಣದಲ್ಲಿ ಕಡಿತಗೊಳಿಸಿರುವ ₹82ನ್ನು ಮರುಪಾವತಿಸಿ, ಯೋಜನೆಯಡಿ ನಿರಂತರ ಕೆಲಸದ ಜೊತೆಗೆ 200 ಮಾನವ ದಿನಗಳ ಉದ್ಯೋಗ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

‘ಭಂಕೂರು ಗ್ರಾಮದಿಂದ ಶಹಾಬಾದ್ ಕ್ರಾಸ್‌ವರೆಗೆ ಹದಗೆಟ್ಟಿರುವ ರಸ್ತೆಯನ್ನು ಸಿಸಿ ರಸ್ತೆಯಾಗಿ ನಿರ್ಮಿಸಬೇಕು. ಮಹಿಳೆಯರಿಗಾಗಿ ಸಾರ್ವಜನಿಕ ಶೌಚಾಲಯ, ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಗ್ರಂಥಾಲಯವನ್ನು ಪುನಶ್ಚೇತನಗೊಳಿಸಬೇಕು. ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು’ ಎಂದು ಆಗ್ರಹಿಸಿದರು.

3263818

ಇದನ್ನು ಓದಿದ್ದೀರಾ? ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಬರ ಪರಿಹಾರವಾಗಿ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ರೈತರ ಸಾಲ ಮನ್ನಾ ಮಾಡಬೇಕು ಹಾಗೂ ರೇಷನ್‌ ಇ-ಕೆವೈಸಿ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು. ‘ವಿಬಿ-ಜಿ ರಾಮ್ ಜಿ’ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಿ ಎಲ್ಲ ಕೂಲಿಕಾರರಿಗೆ ಸಮಾನವಾಗಿ ಕೂಲಿ ಪಾವತಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕ್ಷೆಮಲಿಂಗ ನರೋಣ, ನಾಗು ಕಂಟಿ, ಸಿದ್ದಮ್ಮಾ ದೆವನ್, ಕೂಲಿಕಾರರ, ರೈತ ಮುಖಂಡರು ಸೇರಿದಂತೆ ಇನ್ನಿತರರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...