ಕಲಬುರಗಿ | ನೀಟ್ ಅಕ್ರಮ, ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ಕೆವಿಎಸ್ ಆಗ್ರಹ

Date:

ಶಿಕ್ಷಣ ತಜ್ಞ ಹಾಗೂ ಪರಿಸರವಾದಿ ಸೋನಮ್ ವಾಂಗ್ಚುಕ್ ಅವರ ಬಂಧನ ಮತ್ತು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗಿಸಿರುವುದನ್ನು ಖಂಡಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್) ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

- Advertisement -

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೀಡಾಗಿದ್ದು, ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸ್ಪಂದಿಸುವ ಬದಲು ಸರ್ಕಾರ ದಮನಕಾರಿ ಕ್ರಮ ಕೈಗೊಂಡಿದೆ ಎಂದು ಸಂಘಟನೆ ಆರೋಪಿಸಿದೆ. ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿರುವುದು ಹಾಗೂ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

‘ರಾಷ್ಟ್ರಪತಿಗಳು ತಕ್ಷಣ ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸಂಘಟನೆ ಆಗ್ರಹಿಸಿದೆ.

‘ಸಂಘಟನೆ ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಬಳಕೆಗೆ ಆದೇಶ ನೀಡಿದ ಅಧಿಕಾರಿಗಳನ್ನು ವಜಾಗೊಳಿಸಬೇಕು, ನೀಟ್ ಪರೀಕ್ಷಾ ಪದ್ಧತಿಯನ್ನು ರದ್ದುಗೊಳಿಸಬೇಕು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು, ಸೋನಮ್ ವಾಂಗ್‌ಚುಕ್ ಅವರನ್ನು ಬಿಡುಗಡೆ ಮಾಡಬೇಕು ಹಾಗೂ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ರಸ್ತೆ ಅಗಲೀಕರಣವಿಲ್ಲದೆ ಸಿಸಿ ರಸ್ತೆ ಕಾಮಗಾರಿ ಬೇಡ: ದಲಿತ ಸಂಘರ್ಷ ಸಮಿತಿ ಎಚ್ಚರಿಕೆ

ಈ ಸಂದರ್ಭದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಜಿಲ್ಲಾ ಸಂಚಾಲಕ ರಾಜೇಂದ್ರ ರಾಜವಾಳ, ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ದಿಲಷಾದ್ ಸುತ್ತಾರ, ಕೀರ್ತಿ ಕೊಹಿನೂರ್, ಪರಶುರಾಮ ಸಿಂಗೆ, ಸೀಮಾ, ಜಯಶ್ರೀ, ವೈಭವ ಬಬಲಾದ, ಗೀತಾ ಹೊಸಮನಿ, ದಲಿತ ಪ್ಯಾಂಥರ್ ನಗರ ಸಂಚಾಲಕ ದಿಲೀಪ್ ಕಿರಸಾವಳಗಿ ಸೇರಿದಂತೆ ಹಲವರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಭಾರತೀಯ ತತ್ವಶಾಸ್ತ್ರಕ್ಕೆ ಮಹತ್ವದ ಕೊಡುಗೆ: ಪ್ರೊ. ಪಿ.ಜಿ. ತಡಸ

ಮಧ್ವಾಚಾರ್ಯರು ದ್ವೈತ ತತ್ವವನ್ನು ದೇಶಾದ್ಯಂತ ಪಸರಿಸುವ ಮೂಲಕ ಭಾರತೀಯ ತತ್ವಶಾಸ್ತ್ರ ಹಾಗೂ...

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...