ಕಲಬುರಗಿ | ಮೂಢನಂಬಿಕೆ ತೊರೆದು ಮಾನವೀಯತೆಯಿಂದ ಬಸವ ಪಂಚಮಿ ಆಚರಿಸಿ: ಕರೆ

Date:

ಬಸವ ಪಂಚಮಿ ಹಬ್ಬವನ್ನು ಮೂಢನಂಬಿಕೆ ಹಾಗೂ ಕಂದಾಚಾರಗಳಿಗೆ ಅವಕಾಶ ನೀಡದೆ ವೈಚಾರಿಕ, ವೈಜ್ಞಾನಿಕ ಮತ್ತು ಮಾನವೀಯ ಮೌಲ್ಯಗಳೊಂದಿಗೆ ಆಚರಿಸಬೇಕು ಎಂದು ಮಾನವ ಬಂಧುತ್ವ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿವೆ.

- Advertisement -

ಬಸವ ಪಂಚಮಿ ಅಂಗವಾಗಿ ಮಾನವ ಬಂಧುತ್ವ ವೇದಿಕೆ ಕರ್ನಾಟಕ, ಕಲ್ಯಾಣ ಕರ್ನಾಟಕ ಜನ ಜಾಗೃತಿ ವೇದಿಕೆ, ಸ್ಲಂ ಜನರ ಸಂಘಟನೆ ಕರ್ನಾಟಕ ಹಾಗೂ ರಕ್ಷಿತಾ ಇಂಟಿಗ್ರೇಟೆಡ್ ರೂರಲ್ ಅಂಡ್ ಅರ್ಬನ್ ಡೆವಲಪ್‌ಮೆಂಟ್ ಸೊಸೈಟಿ ಆಶ್ರಯದಲ್ಲಿ ನಗರದ ವಿವಿಧ ಬಡಾವಣೆಗಳಲ್ಲಿ ಬಡ ಹಾಗೂ ಅಸಹಾಯಕ ಮಕ್ಕಳಿಗೆ ಹಾಲು ವಿತರಿಸುವ ಮೂಲಕ ವಿಭಿನ್ನವಾಗಿ ಹಬ್ಬ ಆಚರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ನಗರದ ಪಂಚಶೀಲ ಬಡಾವಣೆ, ಸಿದ್ಧಾರ್ಥ ಶ್ರವಣ ನ್ಯೂನತೆಯುಳ್ಳ ಬಾಲಕ–ಬಾಲಕಿಯರ ಪ್ರಾಥಮಿಕ ಮತ್ತು ಪ್ರೌಢಶಾಲೆ, ಸೇಡಂ ರಸ್ತೆ, ರಾಜಾಪುರ ಅಲೆಮಾರಿ ಬಡಾವಣೆ ಹಾಗೂ ಬೀದಾಪುರ ಅನಾಥಾಶ್ರಮದಲ್ಲಿ ಕಾರ್ಯಕ್ರಮ ನಡೆಯಿತು.

ಬಸವ ಪಂಚಮಿ ಹೆಸರಿನಲ್ಲಿ ಕಲ್ಲಿನ ನಾಗರಹಾವು ಅಥವಾ ಹುತ್ತಕ್ಕೆ ಹಾಲು ಎರೆಯುವ ಬದಲು, ಹಾಲನ್ನು ಹಸಿವಿನಿಂದ ಬಳಲುತ್ತಿರುವ ಬಡ ಮಕ್ಕಳು ಹಾಗೂ ಪೌಷ್ಟಿಕಾಂಶದ ಕೊರತೆಯಿರುವ ಮಕ್ಕಳಿಗೆ ನೀಡಬೇಕು. ಈ ಮೂಲಕ ಆಹಾರ ಪದಾರ್ಥ ವ್ಯರ್ಥವಾಗುವುದನ್ನು ತಡೆದು ಮಾನವೀಯತೆ ಮೆರೆಯಬೇಕು ಎಂದು ಸಂಘಟಕರು ಸಾರ್ವಜನಿಕರಿಗೆ ಮನವಿ ಮಾಡಿದರು.

2805733

ಹಾವುಗಳು ಸರಿಸೃಪಗಳಾಗಿದ್ದು, ಸಸ್ತನಿಗಳಲ್ಲ. ಹಾಲನ್ನು ಜೀರ್ಣಿಸಿಕೊಳ್ಳಲು ಅಗತ್ಯವಾದ ಲ್ಯಾಕ್ಟೇಸ್ ಕಿಣ್ವ ಅವುಗಳ ದೇಹದಲ್ಲಿ ಇಲ್ಲದ ಕಾರಣ ಹಾವುಗಳಿಗೆ ಹಾಲು ಕುಡಿಸುವುದು ಆರೋಗ್ಯಕ್ಕೆ ಹಾನಿಕರವಾಗಬಹುದು. ಹುತ್ತಕ್ಕೆ ಹಾಲು ಸುರಿಯುವುದರಿಂದಲೂ ಯಾವುದೇ ವೈಜ್ಞಾನಿಕ ಪ್ರಯೋಜನವಿಲ್ಲ ಎಂದು ಸಂಘಟಕರು ತಿಳಿಸಿದರು.

ಮಾನವ ಬಂಧುತ್ವ ವೇದಿಕೆ ಕಳೆದ 12 ವರ್ಷಗಳಿಂದ ರಾಜ್ಯಾದ್ಯಂತ ವೈಚಾರಿಕತೆ, ವೈಜ್ಞಾನಿಕ ಮನೋಭಾವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಜತೆಗೆ ಮೂಢನಂಬಿಕೆ ಮತ್ತು ಕಂದಾಚಾರಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಪಾಕಿಸ್ತಾನ ಮೂಲದ ಸಾಮಾಜಿಕ ಜಾಲತಾಣ ಖಾತೆ ಫಾಲೋ: ಉತ್ತರ ಪ್ರದೇಶದ ಯುವಕ ಬಂಧನ

ಕಾರ್ಯಕ್ರಮದಲ್ಲಿ ಮಾನವ ಬಂಧುತ್ವ ವೇದಿಕೆ ವಿಭಾಗೀಯ ಸಂಚಾಲಕ ಸುನಿಲ ಮಾರುತಿ ಮಾನಪಡೆ, ಜಿಲ್ಲಾ ಸಂಚಾಲಕ ನಾಗೇಂದ್ರ ಜವಳಿ, ಕಲ್ಯಾಣ ಕರ್ನಾಟಕ ಜನ ಜಾಗೃತಿ ವೇದಿಕೆ ಅಧ್ಯಕ್ಷ ಗುರಣ್ಣಾ ಐನಾಪುರ, ಮಲ್ಲಿಕಾರ್ಜುನ ಕೇರಿ ಅಂಬಲಗಾ, ಸ್ಲಂ ಜನರ ಸಂಘಟನೆಯ ಜಿಲ್ಲಾ ಸಂಚಾಲಕ ಅಲ್ಲಮಪ್ರಭು ನಿಂಬರ್ಗಾ, ಅಂಬರೀಶ್ ಇಟ್ಟಗಿಕರ, ಬ್ರಹ್ಮಾನಂದ ಮಿಂಚಾ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಸಂಜೀವಕುಮಾರ ಕಾಂಬ್ಳೆ, ರಕ್ಷಿತಾ ಸಂಸ್ಥೆಯ ನಿರ್ದೇಶಕ ಸುರೇಶ ಕಟ್ಟಿಮನಿ, ನಾರಾಯಣ ರಂಗದಾಳ, ಸಿದ್ದಲಿಂಗ ಪಾಳ, ಶಿವಕುಮಾರ ಸಂತ್ರವಾಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...