ಕಲಬುರಗಿ | ಜನ ವಿರೋಧಿ ಬಿಜೆಪಿ ಸೋಲಿಸಿ, ಜನಪರ ಕಾಂಗ್ರೆಸ್ ಗೆಲ್ಲಿಸೋಣ: ದಸಂಸ

Date:

ಸಂವಿಧಾನ ಬದಲಿಸುತ್ತೇವೆ ಎಂದವರನ್ನೇ ಬದಲಿಸೋಣ. 40% ಸರ್ಕಾರದ ಆಡಳಿತ ಸಾಮಾನ್ಯ ಜನರಿಗೆ ನೂರಕ್ಕೆ ನೂರರಷ್ಟು ನರಕವಾಗಿದೆ. ಈವರೆಗೆ ಸಂಕಷ್ಟ ಅನುಭವಿಸಿದ್ದು ಸಾಕು. ಈ ಬಾರಿ ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಜೇವರ್ಗಿ ದಲಿತ ಸಂಘರ್ಷ ಸಮಿತಿ ಕರೆ ನೀಡಿದೆ.

ಕಲಬುರಗಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ. ಅಜಯ್ ಸಿಂಗ್ ಪರ ಮತಯಾಚನೆ ಮಾಡುತ್ತಿದ್ದ ವೇಳೆ ಬಣಮಗಿ ಗ್ರಾಮದಲ್ಲಿ ದಸಂಸ ಮುಖಂಡರು ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಔರಾದ್‌ನಲ್ಲಿ ಬಿಜೆಪಿ ಅಲೆಯಿದೆ, ಬೇರೆ ಪಕ್ಷಗಳಿಗೆ ನೆಲೆಯಿಲ್ಲ: ಸಚಿವ ಪ್ರಭು ಚವ್ಹಾಣ್

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳೋಣ, ಸರ್ವಾಧಿಕಾರಿ ಸರ್ಕಾರವನ್ನು ಕಿತ್ತೊಗೆಯೋಣ. ಇದೇ ಮೇ 10ರಂದು ನಮ್ಮ ಸಿಟ್ಟು ತೀರಿಸಿಕೊಳ್ಳುವ ದಿನವಾಗಿದೆ. ಜನ ವಿರೋಧಿ ‘ಬಿಜೆಪಿ’ಯನ್ನು ಸೋಲಿಸಿ, ಜನಪರವಾದ ‘ಕಾಂಗ್ರೆಸ್ಸನ್ನು ಗೆಲ್ಲಿಸೋಣ” ಎಂದು ಮತದಾನ ಜಾಗೃತಿ ಸಭೆ ನಡೆಸಿದರು.

ಈ ವೇಳೆ ದಸಂಸ ಮುಖಂಡರುಗಳಾದ ಭೀಮರಾಯ ನಗನೂರ್ , ದವಲಪ್ಪ ಮದನ್ , ಸಿದ್ರಾಮ್ ಕಟ್ಟಿ, ಮಹೇಶ್ ಕೋಕಿಲೆ, ಶ್ರೀ ಹರಿ ಕರಿಕಿಹಳ್ಳಿ, ಕಾಂಗ್ರೆಸ್‌ ಅಭ್ಯರ್ಥಿ ಡಾ ಅಜಯ್ ಸಿಂಗ್, ಕಾಂಗ್ರೆಸ್‌ ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...