ಕಲಬುರಗಿ | ಲೋಕಾಯುಕ್ತ ಬಲೆಗೆ ನಿವೃತ್ತ ಪಿಡಬ್ಲ್ಯೂಡಿ ಎಂಜಿನಿಯರ್; ಲಾಕರ್‌ನಲ್ಲಿ ₹9 ಲಕ್ಷ ಹಳೆಯ ನೋಟು ಪತ್ತೆ

Date:

ನಿವೃತ್ತ ಪಿಡಬ್ಲ್ಯೂಡಿ ಎಂಜಿನಿಯರ್ ಮಾಣಿಕ್ ಕನಕಟ್ಟಿ ಅವರಿಗೆ ಸೇರಿದ ಬ್ಯಾಂಕ್ ಲಾಕರ್‌ನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಅಮಾನೀಕೃತ ನೋಟುಗಳು ಹಾಗೂ ಗಣನೀಯ ಪ್ರಮಾಣದ ಚಿನ್ನದ ಆಭರಣಗಳು ಪತ್ತೆಯಾಗಿರುವುದು ಲೋಕಾಯುಕ್ತ ತನಿಖೆಗೆ ಹೊಸ ತಿರುವು ನೀಡಿದೆ.

- Advertisement -

ನಗರದ ಗೊದುತಾಯಿ ನಗರದಲ್ಲಿರುವ ನಿವಾಸ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಮಂಗಳವಾರ ಪರಿಶೀಲನೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, ಬುಧವಾರ ಎನ್‌.ವಿ. ಕಾಲೇಜು ಸಮೀಪದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿರುವ ಲಾಕರ್ ತೆರೆಯಿಸಿ ತಪಾಸಣೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ವೇಳೆ 2016ರ ನೋಟು ಅಮಾನೀಕರಣದ ಬಳಿಕ ಚಲಾವಣೆಗೆ ಅನರ್ಹಗೊಂಡ ₹1,000 ಮುಖಬೆಲೆಯ ನೂರಾರು ನೋಟುಗಳು ಪತ್ತೆಯಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹9 ಲಕ್ಷ ಎಂದು ಅಂದಾಜಿಸಲಾಗಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಹಳೆಯ ನೋಟುಗಳು ಲಾಕರ್‌ನಲ್ಲಿ ಸಂಗ್ರಹವಾಗಿರುವುದು ಅಧಿಕಾರಿಗಳ ಗಮನ ಸೆಳೆದಿದೆ.

ಇದರ ಜೊತೆಗೆ 20 ತೊಲೆಗೂ ಅಧಿಕ ತೂಕದ ಚಿನ್ನದ ಉಂಗುರಗಳು ಹಾಗೂ ಇತರೆ ಆಭರಣಗಳು ಪತ್ತೆಯಾಗಿದ್ದು, ಅವುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆಭರಣಗಳ ಮೌಲ್ಯ ಹಾಗೂ ಮೂಲದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಓಂನಗರ ಬಳಿ ದುರಂತ; ಬಸ್ ಹತ್ತುತ್ತಿದ್ದ ವ್ಯಕ್ತಿ ಸಾವಿನ ಬಲೆಗೆ

ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಬಸವರಾಜ್, ಪೊಲೀಸ್ ಇನ್ಸ್‌ಪೆಕ್ಟರ್ ಅರುಣ್ ಕುಮಾರ್ ರಾಜಶೇಖರ ಬಡದೇಸಾರ ಹಾಗೂ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.

ಪತ್ತೆಯಾದ ನಗದು ಮತ್ತು ಚಿನ್ನದ ಮೂಲ, ಆಸ್ತಿ ವಿವರಗಳು ಹಾಗೂ ಇತರೆ ದಾಖಲೆಗಳ ಕುರಿತು ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ತನಿಖೆ ಮುಂದುವರಿಸಿದ್ದು, ಪ್ರಕರಣದ ಸಂಪೂರ್ಣ ವಿವರಗಳು ತನಿಖೆಯ ನಂತರವೇ ಸ್ಪಷ್ಟವಾಗಲಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಸರಾಯಿತು ಕಲ್ಯಾಣ ಕರ್ನಾಟಕ; ಬದಲಾಗದ ಜನರ ಬದುಕು!

ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಎರಡು ಸ್ವಾತಂತ್ರ್ಯ ಸಂಭ್ರಮದ ದಿನ. ಒಂದು...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...