ಕಲಬುರಗಿ | ರಸ್ತೆ ಬದಿಯಲ್ಲಿ ಲಾರಿ ನಿಲುಗಡೆಗೆ ಕಡಿವಾಣ: ಪೊಲೀಸರ ಕಟ್ಟುನಿಟ್ಟಿನ ಸೂಚನೆ

Date:

ರಸ್ತೆ ಅಪಘಾತಗಳನ್ನು ನಿಯಂತ್ರಿಸಿ ಸಾರ್ವಜನಿಕರ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಸೇಡಂ ಪೊಲೀಸ್ ಠಾಣೆಯಲ್ಲಿ ಲಾರಿ ಚಾಲಕರು, ಮಾಲೀಕರ ಸಂಘದ ಪದಾಧಿಕಾರಿಗಳು ಹಾಗೂ ಸಂಬಂಧಪಟ್ಟವರೊಂದಿಗೆ ಜಾಗೃತಿ ಸಭೆ ನಡೆಸಲಾಯಿತು.

- Advertisement -

ಸಭೆಯಲ್ಲಿ ಸಿಪಿಐ ಮಹಾದೇವಪ್ಪ ದಿಡ್ಡಿಮನಿ ಹಾಗೂ ಪಿಎಸ್ಐ ಉಪೇಂದ್ರ ಕುಮಾರ್ ಅವರು ರಸ್ತೆ ಸುರಕ್ಷತೆ, ಸಂಚಾರ ನಿಯಮಗಳ ಪಾಲನೆ ಹಾಗೂ ಅಪಘಾತ ನಿಯಂತ್ರಣ ಕುರಿತು ಲಾರಿ ಚಾಲಕರು ಮತ್ತು ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ವಿಶೇಷವಾಗಿ ಕಲಬುರಗಿ-ಕೊಡಂಗಲ್ ಮುಖ್ಯ ರಸ್ತೆಯ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆ ಮುಂಭಾಗದಿಂದ ಬಸವೇಶ್ವರ ವೃತ್ತ–ಕೊಡ್ಲತ ಕ್ರಾಸ್‌ವರೆಗೆ ಯಾವುದೇ ಕಾರಣಕ್ಕೂ ರಸ್ತೆ ಬದಿಯಲ್ಲಿ ಲಾರಿಗಳನ್ನು ನಿಲ್ಲಿಸದಂತೆ ಸೂಚಿಸಲಾಯಿತು. ರಸ್ತೆ ಬದಿಯಲ್ಲಿ ಭಾರಿ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ಅಡಚಣೆಯಾಗುವುದರ ಜತೆಗೆ ಅಪಘಾತದ ಅಪಾಯವೂ ಹೆಚ್ಚುತ್ತಿದೆ ಎಂದು ಪೊಲೀಸರು ತಿಳಿಸಿದರು.

3097262

ಈ ವೇಳೆ ಕಲ್ಯಾಣ ಜನಪರ ವೇದಿಕೆಯ ರಾಜ್ಯ ಉಪಾಧ್ಯಕ್ಷ ವರದಾ ಸ್ವಾಮಿ ಬಿ. ಹಿರೇಮಠ ಮಾತನಾಡಿ, ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಗೆ ಸಂಬಂಧಿಸಿದ ಟ್ರಾನ್ಸ್‌ಪೋರ್ಟ್ ಲಾರಿಗಳು ಬಸವೇಶ್ವರ ವೃತ್ತದಿಂದ ಕಾರ್ಖಾನೆವರೆಗೆ ಹಾಗೂ ಮಳಖೇಡ ಗ್ರಾಮದ ಬಾಲಕಿಯರ ವಸತಿ ನಿಲಯದಿಂದ ಮಳಖೇಡ ಸೇತುವೆವರೆಗೆ ರಸ್ತೆ ಬದಿಯಲ್ಲಿ ನಿಲ್ಲುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದರಿಂದ ಅಪಘಾತಗಳ ಸಂಭವವೂ ಹೆಚ್ಚುತ್ತಿದೆ ಎಂದು ಸಭೆಯ ಗಮನಕ್ಕೆ ತಂದರು.

ಲಾರಿ ಚಾಲಕರು ಹಾಗೂ ಮಾಲೀಕರು ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸದೆ, ಕಾರ್ಖಾನೆ ಆವರಣದೊಳಗೆ ಅಥವಾ ಪ್ರತ್ಯೇಕವಾಗಿ ಸೂಕ್ತ ಲಾರಿ ನಿಲುಗಡೆ ಸ್ಥಳದ ವ್ಯವಸ್ಥೆ ಮಾಡಿಕೊಂಡು ವಾಹನಗಳನ್ನು ನಿಲ್ಲಿಸಬೇಕು ಎಂದು ಅವರು ಮನವಿ ಮಾಡಿದರು.

ಸಾರ್ವಜನಿಕರ ಜೀವ ಮತ್ತು ಸುರಕ್ಷತೆಯ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ, ರಸ್ತೆ ಬದಿಯಲ್ಲಿ ಲಾರಿ ನಿಲುಗಡೆ ಮಾಡುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಇದನ್ನು ಓದಿದ್ದೀರಾ? ಯಾದಗಿರಿ | ನವಿಲು ಬೇಟೆ ಆರೋಪ: ಏಳು ಮಂದಿ ಬಂಧನ; 6 ನಾಡ ಬಂದೂಕು, 12 ಆಮೆ ಸೇರಿ ಸಾಮಗ್ರಿ ವಶ

ಸಭೆಯಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ಲಾಜಿಸ್ಟಿಕ್ಸ್ ವಿಭಾಗದ ಸಿಬ್ಬಂದಿ, ಸೆಕ್ಯುರಿಟಿ ವ್ಯವಸ್ಥಾಪಕರು, ಲಾರಿ ಚಾಲಕರು, ಲಾರಿ ಮಾಲೀಕರ ಸಂಘದ ಅಧ್ಯಕ್ಷ ಎಂ.ಡಿ. ಮೊಯಿಜ್ ಪಾಷ ಹಾಗೂ ಪದಾಧಿಕಾರಿಗಳು, ಪೊಲೀಸ್ ಸಿಬ್ಬಂದಿ ಬಾಲಕೃಷ್ಣ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...