ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಾದಿಗ ಸಮಾಜದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ತಮಟೆ ಬಾರಿಸುತ್ತ ಪ್ರತಿಭಟನಾ ಮೆರವಣಿಗೆ ಮುಖಾಂತರ ತೆರಳಿದರು. ಬಳಿಕ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ʼಒಳಮೀಸಲಾತಿಗೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಆಂಜನೇಯ ವಿರುದ್ಧ ಇಲ್ಲಸಲ್ಲದ ವಿರುದ್ಧ ಆರೋಪ ಮಾಡಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕುʼ ಎಂದು ಒತ್ತಾಯಿಸಿದರು.
ʼಜೇವರ್ಗಿ ತಾಲ್ಲೂಕಿನ ಯುವಕ ದೌಲಪ್ಪ ರಾಸಣಗಿ ಕೊಲೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಈ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿರುವ ಪೊಲೀಸರನ್ನು ಅಮಾನತುಗೊಳಿಸಬೇಕುʼ ಎಂದು ಆಗ್ರಹಿಸಿದರು.
ಇದನ್ನೂ ಓದಿ : ಕಲಬುರಗಿ | ದಲಿತರ ಭೂಮಿ-ವಸತಿ ಹಕ್ಕಿಗಾಗಿ ಆಗ್ರಹಿಸಿದ ದಸಂಸ ಧರಣಿ
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಮಾದಿಗ ಸಮಾಜದ ವಿಭಾಗೀಯ ಅಧ್ಯಕ್ಷ ಚಂದ್ರಕಾಂತ ಕೆ.ನಾಟೀಕಾರ, ಜಿಲ್ಲಾಧ್ಯಕ್ಷ ಸಿದ್ದಲಿಂಗ ಕಟ್ಟಿಮನಿ, ಗೌರವಾಧ್ಯಕ್ಷ ಮಲ್ಲಿಕಾರ್ಜುನ ಚಟ್ನಳ್ಳಿ, ಮುಖಂಡರಾದ ಸುಂದರ ಸಾಗರ, ಸುನೀತಾ ಎಂ., ಮಹಾದೇವ ಕೌವಲಿ, ಕಂಠಪ್ಪ ಮಾಸ್ತರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.