ಕಲಬುರಗಿ | ಆರ್‌ಎಸ್‌ಎಸ್ ನೋಂದಣಿ ಕಡ್ಡಾಯಗೊಳಿಸಿ, ಇಲ್ಲವೇ ನಿಷೇಧಿಸಿ: ದಸಂಸ ಆಗ್ರಹ

Date:

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ವನ್ನು ಕಾನೂನಿನ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿ ಕಾರ್ಯನಿರ್ವಹಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಸಂಘಟನೆ ನೋಂದಣಿಗೆ ಒಪ್ಪದಿದ್ದರೆ ಅದನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ರಾಜ್ಯ ಸಮಿತಿಯು ಸೋಮವಾರ ತಹಶೀಲ್ದಾರ್ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಿದರು.

- Advertisement -

ನಗರದ ಜಗತ್ತ್ ವೃತ್ತದಲ್ಲಿ ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಿ, ‘ಆರ್‌ಎಸ್‌ಎಸ್ ದೇಶದಲ್ಲಿ ಕೋಮು ಧ್ರುವೀಕರಣ, ದ್ವೇಷ ರಾಜಕಾರಣ ಹಾಗೂ ಸಂವಿಧಾನ ವಿರೋಧಿ ಚಿಂತನೆಗಳನ್ನು ಉತ್ತೇಜಿಸುತ್ತಿದೆ’ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸಂದರ್ಭದಲ್ಲಿ ಮಾತನಾಡಿದ ದಸಂಸ ಹಿರಿಯ ಮುಖಂಡ ಅರ್ಜುನ ಭದ್ರೆ, ‘ಮಹಾತ್ಮ ಗಾಂಧೀಜಿ ಹತ್ಯೆಯ ಬಳಿಕ 1948ರ ಫೆಬ್ರವರಿ 4ರಂದು ಆಗಿನ ಕೇಂದ್ರ ಸರ್ಕಾರ ಆರ್‌ಎಸ್‌ಎಸ್ ಅನ್ನು ನಿಷೇಧಿಸಿತ್ತು ಎಂದು ಉಲ್ಲೇಖಿಸಿದರು. ಬಳಿಕ 1949ರಲ್ಲಿ ಲಿಖಿತ ಸಂವಿಧಾನ ರೂಪಿಸುವುದು, ಭಾರತದ ಸಂವಿಧಾನ ಹಾಗೂ ರಾಷ್ಟ್ರಧ್ವಜಕ್ಕೆ ನಿಷ್ಠೆ ಘೋಷಿಸುವುದು, ರಹಸ್ಯ ಚಟುವಟಿಕೆಗಳನ್ನು ನಡೆಸದಿರುವುದು ಮತ್ತು ರಾಜಕೀಯದಿಂದ ದೂರವಿರುವುದು ಸೇರಿದಂತೆ ಹಲವು ಷರತ್ತುಗಳನ್ನು ಒಪ್ಪಿಕೊಂಡ ನಂತರವೇ ನಿಷೇಧ ಹಿಂಪಡೆಯಲಾಗಿತ್ತು’ ಎಂದು ಹೇಳಿದರು.

‘ಪ್ರಸ್ತುತ ಆ ಷರತ್ತುಗಳನ್ನು ಆರ್‌ಎಸ್‌ಎಸ್ ಪಾಲಿಸುತ್ತಿಲ್ಲ ಎಂದು ಆರೋಪಿಸಿದ ಅವರು, ಸಂಘಟನೆಯ ಚಟುವಟಿಕೆಗಳು ದೇಶದ ಏಕತೆ, ಜಾತ್ಯಾತೀತತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆಯಾಗುವಂತಿವೆ’ ಎಂದು ದೂರಿದರು.

2195194

ದಸಂಸ ಹಿರಿಯ ಮುಖಂಡ ಮರಿಯಪ್ಪ ಹಳ್ಳಿ ಮಾತನಾಡಿ, ‘ಗುರುದಕ್ಷಿಣೆ ಹೆಸರಿನಲ್ಲಿ ದೇಶ-ವಿದೇಶಗಳಿಂದ ಕೋಟ್ಯಂತರ ರೂಪಾಯಿ ಹಣ ಸಂಗ್ರಹವಾಗುತ್ತಿದ್ದು, ಆ ಹಣದ ಮೂಲ, ಬಳಕೆ ಹಾಗೂ ಅದು ಯಾರ ಖಾತೆಗೆ ಜಮೆಯಾಗುತ್ತಿದೆ ಎಂಬ ಕುರಿತು ಕೇಂದ್ರ ಸರ್ಕಾರ ಸಮಗ್ರ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.

‘ಅಮೆರಿಕದಲ್ಲಿ ನೋಂದಾಯಿತ ಇಂಡಿಯಾ ಡೆವಲಪ್ಮೆಂಟ್ ಅಂಡ್ ರಿಲೀಫ್ ಫಂಡ್ (ಐಡಿಆರ್‌ಎಫ್) ಸೇರಿದಂತೆ ಕೆಲವು ಸಂಸ್ಥೆಗಳ ಮೂಲಕ ಭಾರತದಲ್ಲಿನ ವಿವಿಧ ಸಂಘಟನೆಗಳಿಗೆ ಹಣ ಹರಿದು ಬರುತ್ತಿದೆ ಎನ್ನಲಾಗುತ್ತಿದೆ. ಈ ಹಣಕಾಸು ವ್ಯವಹಾರಗಳ ಕುರಿತು ಸ್ವತಂತ್ರ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.

‘ದೇಶದಲ್ಲಿ ಆರ್‌ಎಸ್‌ಎಸ್‌ನ ಕಾನೂನುಬದ್ಧ ಸ್ಥಾನಮಾನದ ಕುರಿತು ಸಾರ್ವಜನಿಕರಲ್ಲಿ ಪ್ರಶ್ನೆಗಳು ಮೂಡುತ್ತಿವೆ. ಆದ್ದರಿಂದ ಸಂಘಟನೆಯನ್ನು ಕಾನೂನಿನ ವ್ಯಾಪ್ತಿಗೆ ತಂದು ನೋಂದಣಿ ಮಾಡಿಸಬೇಕು. ಅದಕ್ಕೆ ಒಪ್ಪದಿದ್ದರೆ ದೇಶದ ಶಾಂತಿ, ಸೌಹಾರ್ದ ಮತ್ತು ಸಂವಿಧಾನಾತ್ಮಕ ಮೌಲ್ಯಗಳ ರಕ್ಷಣೆಯ ದೃಷ್ಟಿಯಿಂದ ನಿಷೇಧಿಸಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇದೇ ವೇಳೆ, ‘ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಕುರಿತು ಕೇಳಿರುವ ಪ್ರಶ್ನೆಗಳು ಸೂಕ್ತವಾಗಿದ್ದು, ಈ ವಿಚಾರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಹಾಗೂ ಪ್ರಗತಿಪರ ಸಂಘಟನೆಗಳು ಅವರಿಗೆ ಬೆಂಬಲ ನೀಡುತ್ತವೆ’ ಎಂದು ಮುಖಂಡರು ತಿಳಿಸಿದರು.

ಧರಣಿಯನ್ನು ಉದ್ದೇಶಿಸಿ ಮಲ್ಲಿಕಾರ್ಜುನ ಕ್ರಾಂತಿ, ಪ್ರೊ. ಆರ್.ಕೆ. ಹುಡುಗಿ ಸೇರಿದಂತೆ ಹಲವರು ಮಾತನಾಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಖಬರಸ್ಥಾನ ಬಳಿ ಮಟ್ಕಾ ದಂಧೆ; ಆಟೊ ಚಾಲಕ ಬಂಧನ

ಧರಣಿಯಲ್ಲಿ ಮಹೇಶ್ ಕೋಕಿಲೆ, ಮಲ್ಲಣ್ಣ ಮಸ್ಕಿ, ಮಹಾಂತೇಶ್, ಮಲ್ಲಿಕಾರ್ಜುನ ಖನ್ನಾ, ಮಲ್ಲಣ್ಣ ಮರತೂರ್, ಸೂರ್ಯಕಾಂತ ಅಜಾದಪುರ್, ಸಿದ್ದಣ್ಣ ಹಾಲಭಾವಿ, ಮೂರ್ತಿ ಬೊಮ್ಮನಹಳ್ಳಿ, ಹುಚ್ಚಪ್ಪ ಕೊಳಿಗೇರಿ, ಚಂದ್ರಶೇಖರ ಕಟ್ಟಿಮನಿ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...