ನಗರದ ಗುಬ್ಬಿ ಕಾಲನಿಯ ಸುಷ್ಮಾ ಬಾರ್ ಸಮೀಪ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರವಿವಾರ ರಾತ್ರಿ ನಡೆದಿದೆ.
ಕೊಲೆಯಾದವರನ್ನು ಆದರ್ಶ ನಗರದ ನಿವಾಸಿ ರವಿಚಂದ್ರ ತಿಪ್ಪಯ್ಯ ಗುತ್ತೇದಾರ್ (47) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಮೂವರು ಅಪರಿಚಿತರು ಮಾರಕಾಸ್ತ್ರಗಳಿಂದ ರವಿಚಂದ್ರರ ಮೇಲೆ ಏಕಾಏಕಿ ದಾಳಿ ನಡೆಸಿ ಕೊಲೆಗೈದು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯಿಂದ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಪ್ರಾಥಮಿಕ ಮಾಹಿತಿಯಂತೆ, ಈ ಹಿಂದೆ ರವಿಚಂದ್ರರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಅದೇ ಪ್ರಕರಣಕ್ಕೆ ಸಂಬಂಧಿಸಿದ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರಬಹುದೆಂಬ ಅನುಮಾನ ವ್ಯಕ್ತವಾಗಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಗ್ರಾಹಕರಿಗೆ ಗ್ಯಾಸ್ ಸಿಗದೆ ಸಂಕಷ್ಟ; ಏಜೆನ್ಸಿ ವಿರುದ್ಧ ಕ್ರಮಕ್ಕೆ ದಲಿತ ಸೇನೆ ಆಗ್ರಹ
ಘಟನಾ ಸ್ಥಳಕ್ಕೆ ಎಂ.ಬಿ. ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಎಂ.ಬಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,





