ತನ್ನ ಇಬ್ಬರು ಮಕ್ಕಳು, ಪತ್ನಿಯನ್ನು ಕೊಂದ ವ್ಯಕ್ತಿಯೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಕಲಬುರಗಿ ನಗರದ ಹಳೇ ಜೇವರ್ಗಿ ರಸ್ತೆಯ ಗಾಬರೆ ಲೇಔಟ್‌ನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಈ ಘಟನೆ ನಡೆದಿದೆ.
ಆತ್ಮಹತ್ಯೆಗೂ ಮುನ್ನ ಸಂತೋಷ ಕೊರಳಿ (45) ಅವರು ಪತ್ನಿ ಶೃತಿ (35), ಮಕ್ಕಳಾದ ಮುನಿಶ್ (9) ಹಾಗೂ ಮೂರು ತಿಂಗಳ ಮಗು ಅನಿಶ್‌ನನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸಂತೋಷ್ ಅವರು ಜೆಸ್ಕಾಂನಲ್ಲಿ ಹಿರಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
‘ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿರಬಹುದು. ನಂತರ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜತೆಗೆ ಡೆತ್ ನೋಟ್ ಸಹ ಬರೆದಿಟ್ಟಿದ್ದಾನೆ’ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಬಸವಕಲ್ಯಾಣ ನಗರಸಭೆ ಸಿಬ್ಬಂದಿ ಕೊಲೆ ಪ್ರಕರಣ : ಆರೋಪಿ ಬಂಧನ
ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.