ಶಹಬಾದ್ ಪಟ್ಟಣದ ಹೊರವಲಯದಲ್ಲಿರುವ ಸೇತುವೆ ಮೇಲಿಂದ ಕಾಗಿಣಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.
ಶಹಬಾದ್ ಪಟ್ಟಣ ನಿವಾಸಿ ಜಗದೀಶ್ ಸ್ವಾಮಿ (55) ಮೃತರು ಎಂದು ಗುರುತಿಸಲಾಗಿದೆ.
ಅನಾರೋಗ್ಯ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ವ್ಯಕ್ತಿಯ ಮೃತದೇಹ ಪತ್ತೆಗೆ ಅಗ್ನಿಶಾಮಕ ದಳದಿಂದ ಹುಡುಕಾಟ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಶಹಬಾದ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಬೀದರ್ | ಮನೆ ಮಹಡಿ ಮೇಲೆ ‘ಡ್ರ್ಯಾಗನ್ ಫ್ರೂಟ್’ ಬೆಳೆದ ಉಪನ್ಯಾಸಕ!