ಕಲಬುರಗಿ | ಬೈಕ್‌ ಡಿಕ್ಕಿ ಹೊಡೆದು ವ್ಯಕ್ತಿ ಸಾವು : ಆರೋಪಿಗೆ 1 ತಿಂಗಳು ಜೈಲು, ₹500 ದಂಡ

Date:

ಬೈಕ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರ ಸಾವಿಗೆ ಕಾರಣನಾದ ಆರೋಪಿಗೆ ಕಲಬುರಗಿ ಜಿಲ್ಲೆಯ ಅಫಜಲಪುರದ ಜೆಎಂಎಫ್‍ಸಿ ನ್ಯಾಯಾಲಯ 1 ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ ₹500 ದಂಡ ವಿಧಿಸಿದೆ.

- Advertisement -

2020ರಲ್ಲಿ ಬಂದಗಿಸಾಬ್ ತಂದೆ ಮತಾಬ್‌ಸಾಬ್ ಸುತಾರ್ ಎಂಬುವವರು ಚೌಡಾಪುರ-ಕಲಬುರಗಿ ರಸ್ತೆಯ ಗೊಬ್ಬೂರವಾಡಿ ಕ್ರಾಸ್ ಸಮೀಪ ಜಮೀನಿಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ವ್ಯಕ್ತಿಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದಿದ್ದರು. ಗಂಭೀರವಾಗಿ ಗಾಯಗೊಂಡು ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ಕುರಿತು ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿಗಳಾದ ಅಫಜಲಪುರ ಸಿಪಿಐ ಮಹಾದೇವ ಪಂಚಮುಖಿ, ದೇವಲಗಾಣಗಾಪುರ ಪಿಎಸ್‍ಐ ಭೀಮರತ್ನ, ಮುಖ್ಯಪೇದೆ ಮಹಾಂತಯ್ಯ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣ ವಿಚಾರಣೆ ನಡೆಸಿದ ಅಫಜಲಪುರ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶ ಅನಿಲ ಅಮಾತೆ ಅವರು ಆರೋಪಿ ಕಡಣಿ ಗ್ರಾಮದ ಬೀರಪ್ಪಾ ತಂದೆ ಚಂದ್ರಕಾಂತ ಎಂಬುವವರಿಗೆ ಒಂದು ತಿಂಗಳ ಸಾದಾ ಕಾರಾಗೃಹವಾಸ ಮತ್ತು ₹500 ದಂಡ ವಿಧಿಸಿದ್ದಾರೆ.

ಸರ್ಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕರಾದ ಜಯಶ್ರೀ ಪಿ.ಅವರು ವಾದ ಮಂಡಿಸಿದ್ದರು.

ಇದನ್ನೂ ಓದಿ : ಬೀದರ್‌ | ಬಿಟ್ಟೂಬಿಡದ ಮಳೆ : 325 ಹೆಕ್ಟೇರ್‌ಗೂ ಅಧಿಕ ಬೆಳೆ ಹಾನಿ; ಪರಿಹಾರದ ನಿರೀಕ್ಷೆಯಲ್ಲಿ ರೈತರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟ ಅನಾಮಧೇಯ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ...

ರಾಯಚೂರು | ದೇವದುರ್ಗದಲ್ಲಿ ರಕ್ತನಿಧಿ ಕೇಂದ್ರ ಲೋಕಾರ್ಪಣೆ; 100ಕ್ಕೂ ಹೆಚ್ಚು ಜನರಿಂದ ಸ್ವಯಂಪ್ರೇರಿತ ರಕ್ತದಾನ

ಪಟ್ಟಣದಲ್ಲಿ ರಕ್ತನಿಧಿ ಕೇಂದ್ರವನ್ನು ಲೋಕಾರ್ಪಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ 100ಕ್ಕೂ ಹೆಚ್ಚು...

ರಾಯಚೂರು | ಗಾಂಜಾ ಮಾರಾಟ ಪ್ರಕರಣ: ಮೂವರು ಆರೋಪಿಗಳಿಗೆ ತಲಾ 1 ವರ್ಷ ಜೈಲು, ₹25 ಸಾವಿರ ದಂಡ

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ...

ರಾಯಚೂರು | ಮದರಕಲ್ ಅಂಬಾ ಮಠದ ವಿರುದ್ಧ ಸುಳ್ಳು ಆರೋಪ: ಅಮರೇಶ್ ಪಾಟೀಲ್

ದೇವದುರ್ಗ ತಾಲ್ಲೂಕು ಮದರಕಲ್‌ ಗ್ರಾಮದ ಅವದೂತ ರಾಜಯೋಗಿ ಸಂತ ನಾಮದೇವಗೌಡ ಶರಣರ...