ಕಲಬುರಗಿ | ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು; ಕಸ್ಟಡಿ ಕೊಲೆ ಆರೋಪ – ಪ್ರತಿಭಟನೆ

Date:

ಕಲಬುರಗಿಯ ಅಶೋಕ ನಗರ ಪೊಲೀಸ್‌ ಠಾಣೆಯಲ್ಲಿ ಪೊಲೀಸರು ವಶದಲ್ಲಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಇದು ಕಸ್ಟಡಿ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

- Advertisement -

ಶರಣ ಸಿರಸಗಿ ಮಡ್ಡಿಯ ನಿವಾಸಿ ಉದಯಕುಮಾರ ಪರದಿ ಅವರು ಪೊಲೀಸ್‌ ಕಸ್ಟಡಿಯಲ್ಲಿದ್ದಾಗ ಮೃತಪಟ್ಟಿದ್ದಾರೆ. ಪೊಲೀಸರು ಹೊಡೆದಿದ್ದರಿಂದಲೇ ಉದಯಕುಮಾರ್ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬಸ್ಥರು ಮತ್ತು ಗ್ರಾಮಸ್ಥರು ಕಲಬುರಗಿ ಜಿಲ್ಲಾಸ್ಪತ್ರೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಉದಯಕುಮಾರ ಅವರನ್ನು ಕಳ್ಳತನ ಪ್ರಕರಣದ ಆರೋಪದಲ್ಲಿ ಗುರುವಾರ ಬೆಳಿಗ್ಗೆ ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದರು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಪೊಲೀಸರು ಕರೆ ಮಾಡಿ, ಆಸ್ಪತ್ರೆಗೆ ದಾಖಲಿಸಿರುವುದಾಗಿ ಹೇಳಿದರು. ಆಸ್ಪತ್ರೆಗೆ ಹೋಗಿ ನೋಡುವಷ್ಟರಲ್ಲಿ ಉದಯಕುಮಾರ್ ಮೃತಪಟ್ಟಿದ್ದರು. ಅವರ ದೇಹದ ಮೇಲೆ ಗಾಯದ ಗುರುತುಗಳಿವೆ” ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

“ಪೊಲೀಸರ ವಶದಲ್ಲಿದ್ದ ವ್ಯಕ್ತಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧ ಕುಟುಂಬಸ್ಥರು ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು. ಸಿಐಡಿ ತನಿಖೆಗೆ ವರ್ಗಾವನೆ ಮಾಡಲಾಗುವುದು” ಎಂದು ಪೊಲೀಸ್‌ ಆಯುಕ್ತ ಚೇತನ್ ಆರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...

ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR)...