ಕಲಬುರಗಿ | ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಹತ್ಯೆ

Date:

ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ವ್ಯಕ್ತಿಯೊಬ್ಬರ ಶವ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

- Advertisement -

ಮೃತರನ್ನು ಚಿಣಮಗೇರ ಗ್ರಾಮದ ನಿವಾಸಿ ಬಡೇಸಾಬ್ (41) ಎಂದು ಗುರುತಿಸಲಾಗಿದೆ. ಭಾನುವಾರ ಬೆಳಿಗ್ಗೆ ಜಮೀನಿನಲ್ಲಿ ಶವ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಗಾಣಗಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಮೃತನ ತಲೆಗೆ ಮಾರಣಾಂತಿಕವಾಗಿ ಕಲ್ಲಿನಿಂದ ಹಲ್ಲೆ ನಡೆಸಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಹತ್ಯೆಯ ಹಿಂದಿನ ಉದ್ದೇಶ ಹಾಗೂ ಆರೋಪಿಗಳ ಕುರಿತು ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಇದನ್ನು ಓದಿದ್ದೀರಾ? ವರದಕ್ಷಿಣೆ ನಿರ್ಮೂಲನೆಗೆ ಬಂಜಾರ ಸಮಾಜದ ಐತಿಹಾಸಿಕ ಹೆಜ್ಜೆ; ಜು.12ರಂದು ಯಾದಗಿರಿಯಲ್ಲಿ ಮಹಾಸಭೆ

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿರುವ ಪೊಲೀಸರು, ಸ್ಥಳದಲ್ಲಿನ ಸಾಕ್ಷ್ಯಗಳನ್ನು ವಶಪಡಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಸಂಬಂಧ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...