ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹೇಳಿಕೆಗಳನ್ನು ನೀಡುತ್ತಿರುವ ಬಿಜೆಪಿ ಮುಖಂಡರಾದ ಮಣಿಕಂಠ ರಾಠೋಡ್, ಚಂದು ಪಾಟೀಲ್ ಹಾಗೂ ಆಂದೋಲಾ ಸ್ವಾಮೀಜಿ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.
ಆಮ್ ಆದ್ಮಿ ಪಾರ್ಟಿಯ ಅಲ್ಪಸಂಖ್ಯಾತ ಘಟಕದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆ ಉದ್ದೇಶಿಸಿ ಜಿಲ್ಲಾಧ್ಯಕ್ಷ ಸುಲೇಮಾನ್ ಅಲಿ ಮಾತನಾಡಿ, ʼಮುಸ್ಲಿಂ ಸಮುದಾಯದ ವಿರುದ್ಧ ದ್ವೇಷಕಾರಿ ಹೇಳಿಕೆ ನೀಡುತ್ತಿದ್ದರೂ ಜಿಲ್ಲೆಯಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ, 15 ನಿಮಿಷ ಪೊಲೀಸರನ್ನು ತಡೆದರೆ ಮುಸ್ಲಿಂ ಸಮುದಾಯವನ್ನು ನಾಶ ಮಾಡುವುದಾಗಿ ಹೇಳಿದ ಮಣಿಕಂಠ ರಾಠೋಡ್, ಮುಸ್ಲಿಂ ಬಡಾವಣೆಗಳಿಗೆ ನುಗ್ಗಲು ಪ್ರಯತ್ನಿಸಿದ ಚಂದು ಪಾಟೀಲ್ ಅವರ ವಿರುದ್ಧ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿಲ್ಲʼ ಎಂದು ದೂರಿದರು.
ಕೋಮು, ದ್ವೇಷ ಬಿತ್ತುವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ನಾವೇ ಖುದ್ದಾಗಿ ಪ್ರಕರಣ ದಾಖಲಿಸಿದ್ದೇವೆ. ಆದರೆ ಜಿಲ್ಲೆಯ ಜನಪ್ರತಿನಿಧಿಗಳು ಈ ಬಗ್ಗೆ ಮೌನವಹಿಸಿ ಜರುಗಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.