ಕಲಬುರಗಿ | ಮಣಿಪುರ ಘಟನೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಎಸ್‌ಎಫ್‌ಐ ಕರೆ

Date:

ಮಣಿಪುರ ಹಿಂಸಾಚಾರ ಹಾಗೂ ಕುಕಿ ಸಮುದಾಯದ ಯುವತಿಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ ಘಟನೆ ಖಂಡಿಸಿ ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಎದುರು ಭಾರತೀಯ ವಿದ್ಯಾರ್ಥಿ ಫೆಡರೇಶನ್(ಎಸ್‌ಎಫ್‌ಐ) ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಪ್ರತಿಭಟನೆಯಲ್ಲಿ ಮಾತನಾಡಿದ ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ಭೀಮನಗೌಡ, “ಮಣಿಪುರದಲ್ಲಿ ಕಳೆದ ಮೇ 4ರಂದು ಮಹಿಳೆಯರನ್ನು ಬೆತ್ತಲೆ ಮಾಡಿ, ಖಾಸಗಿ ಅಂಗಾಂಗಗಳ ಒಳಗೆ ಕೈ ತೂರಿಸಿ ಮೆರವಣಿಗೆ ಮಾಡಲಾಗಿದೆ. ಜೊತೆಗೆ ಸಾಮೂಹಿಕ ಅತ್ಯಾಚಾರ‌ ಮಾಡಿದ ಘಟನೆ ನಡೆದಿದೆ. ತಡವಾಗಿ ಬೆಳಕಿಗೆ ಬಂದ ಈ ದಾರುಣ ಘಟನೆಯನ್ನು ಖಂಡಿಸಿ ತಪ್ಪಿತಸ್ಥರಿಗೆ ತೀವ್ರ ಶಿಕ್ಷೆ ನೀಡುವಂತೆ ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಫೆಡರೇಶನ್ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಕರೆ ನೀಡಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಮಣಿಪುರದಿಂದ ಹೊರಬಂದ ಹೃದಯ ವಿದ್ರಾವಕ ವಿಡಿಯೋ ಇಡೀ ರಾಷ್ಟ್ರವನ್ನು ಬೆಚ್ಚಿಬೀಳಿಸಿದ್ದು, ಇಂತಹ ಹೀನಾಯ ಕೃತ್ಯಗಳನ್ನು ಮನುಷ್ಯರಾದವರು ಹೇಗೆ ನಡೆಸುತ್ತಾರೆ ಎಂಬುದನ್ನು ಗ್ರಹಿಸಲಾಗದು. ಇದರಿಂದ ಇಡೀ ನಾಗರಿಕ ಸಮಾಜ ತಲೆತೆಗ್ಗಿಸುವಂತಾಗಿದೆ” ಎಂದರು.

ಕಲಬುರಗಿ ಜಿಲ್ಲೆಯ ಸಂಚಾಲಕಿ ಸುಜಾತ ಮಾತನಾಡಿ, “ಸ್ವಾತಂತ್ರ್ಯ ಪೂರ್ವದಿಂದ ಈವರೆಗೆ ಮಹಿಳೆಯ ಸಮಾನ ಹಕ್ಕುಗಳಿಗಾಗಿ ಹೋರಾಟ ಮಾಡಿದ್ದೆವು. ಆದರೆ ಸ್ವಾತಂತ್ರ್ಯ ಬಂದು 76 ವರ್ಷಗಳು ಕಳೆದರೂ ಇನ್ನೂ ಮಹಿಳೆಯರಿಗೆ ರಕ್ಷಣೆಯೇ ಸಿಕ್ಕಿಲ್ಲ ಎಂಬುದು ನಮಗೆ ಗೊತ್ತಾಗಿದೆ. ಬಿಲ್ಕಿಸ್ ಬಾನು ಪ್ರಕರಣವಾದಾಗ, ಹತ್ರಾಸ್ ದಲಿತ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆದಾಗ, ಮಹಿಳಾ ಕುಸ್ತಿಪಟುಗಳ ದೌರ್ಜನ್ಯ ನಡೆದಾಗ ನಮ್ಮ ದೇಶದ ಪ್ರಧಾನಮಂತ್ರಿ ಮಾತನಾಡಿದ್ದರೆ ಇಂದು ಇಂತಹ ಕೃತ್ಯ ಎಸಗಲು ದುಷ್ಟರು ಯೋಚಿಸುತ್ತಿದ್ದರು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರೀಯ ವಿವಿಯ ಎಸ್‌ಎಫ್‌ಐ ಘಟಕ ಕಾರ್ಯದರ್ಶಿ ಆದಿತ್ಯ ಮಾತನಾಡಿ, “ಮಣಿಪುರದಲ್ಲಿ ಶಾಂತಿ ನೆಲಸಬೇಕು. ಅಲ್ಲಿ ನಡೆದ ಅಮಾನುಷ ಕೃತ್ಯವನ್ನು ಕೇಂದ್ರೀಯ ವಿವಿ ವಿದ್ಯಾರ್ಥಿಗಳು ಒಕ್ಕೊರಲಿನಿಂದ ಖಂಡಿಸುತ್ತೇವೆ. ಪ್ರಾಮಾಣಿಕವಾಗಿ ಈ ಘಟನೆಯ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು” ಎಂದು ಆಗ್ರಹಿಸಿದರು.

ಈ ಸಂಧರ್ಭದಲ್ಲಿ ನೂರಾರು ವಿದ್ಯಾರ್ಥಿಗಳು ಸೇರಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಮಹಿಳೆಯರ ಘನತೆ ಉಳಿಯಲಿ, ಮಣಿಪುರದಲ್ಲಿ ಶಾಂತಿ ನೆಲೆಸಲಿ ಎಂದು ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿ ನ್ಯಾಯಕ್ಕಾಗಿ ಒತ್ತಾಯಿಸಿದರು.

ಮೈಸೂರು : ಜಿಲ್ಲೆಯ ಹುಣಸೂರಿನಲ್ಲಿಯೂ ಮಣಿಪುರದ ಅಮಾನವೀಯ ಕೃತ್ಯ ಖಂಡಿಸಿ ಸಾಲಿಡಾರಿಟಿ ಯೂತ್ ಮೂವ್ ಮೆಂಟ್ ಹಾಗೂ ಪ್ರಗತಿಪರ ಸಂಘಟನೆಗಳು ಸೇರಿ ಪ್ರತಿಭಟನೆ ನಡೆಸಿದರು.

ಹುಣಸೂರು 1
ಮಣಿಪುರದ ಘಟನೆ ಖಂಡಿಸಿ ಪ್ರತಿಭಟನೆ

ಸಾಲಿಡಾರಿಟಿ ಯೂತ್ ಮೂವ್ ಮೆಂಟ್ ಅಧ್ಯಕ್ಷ ಮುದಾಸಿರ್ ಖಾನ್ ಮಾತನಾಡಿ, “ಕಳೆದ ಮೂರು ತಿಂಗಳಿಂದಲೂ ಮಣಿಪುರ ಜನಾಂಗೀಯ ದ್ವೇಷದ ದಳ್ಳುರಿಯಲ್ಲಿ ಬೇಯುತ್ತಿದೆ. ಅಲ್ಲಿನ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅಮಾನವೀಯ. ಇಡೀ ಮನುಕುಲವೇ ತಲೆ ತಗ್ಗಿಸುವ ಕೃತ್ಯವಿದು. ಅಲ್ಲಿನ ಹೆಣ್ಣುಮಕ್ಕಳಿಗೆ ಆದ ಅಪಮಾನ, ನೋವು, ಮಾನಸಿಕ ಆಘಾತವನ್ನು ಊಹಿಸಲು ಸಾಧ್ಯವಿಲ್ಲ. ಈ ಕೃತ್ಯ ಗುಜರಾತ್, ಕೈರ್ಲಾಂಜೆ, ಹತ್ರಾಸ್ ಮುಂತಾದ ಹೇಯ ಘಟನೆಗಳ ಮುಂದುವರೆದ ಭಾಗವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಮಣಿಪುರದಲ್ಲಿ ಸಂಘರ್ಷ ಆರಂಭಗೊಂಡು ಮೂರು ತಿಂಗಳಾದರೂ ಆಡಳಿತ ವ್ಯವಸ್ಥೆ ಕ್ರಮಕ್ಕೆ ಮುಂದಾಗದಿರುವುದು ಅತ್ಯಂತ ಅಪಾಯಕಾರಿ ನಡೆಯಾಗಿದೆ. ಅಲ್ಲಿನ ಮಹಿಳೆಯರು ನೆಮ್ಮದಿಯಿಂದ ಬದುಕುವ ವ್ಯವಸ್ಥೆ ನಿರ್ಮಾಣ ಮಾಡಬೇಕಿದೆ. ಮಣಿಪುರ ಕಳೆದೆರಡು ತಿಂಗಳು ಹಿಂಸಾಚಾರದಲ್ಲಿ ಹೊತ್ತಿ ಉರಿಯುತ್ತಿರುವಾಗ ಪ್ರಧಾನಿಯ ಮೌನ ಖಂಡನೀಯ. ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮಧ್ಯ ಪ್ರವೇಶ ಮಾಡಿದೆ. ಹಾಗಾಗಿ ನಮ್ಮ ಪ್ರಧಾನಿ 80 ದಿನಗಳ ನಂತರ ಮೌನ ಮುರಿದಿದ್ದಾರೆ” ಎಂದು ಟೀಕಿಸಿದರು.

“ಮಣಿಪುರದಂತಹ ಮೃಗೀಯ ಕೃತ್ಯಗಳು ಭಾರತದಲ್ಲಿ ನಿರಂತರವಾಗಿ ಮುಂದುವರೆದಿವೆ. ಈ ಗೂಂಡಾಗಳಿಗೆ ಇಷ್ಟು ಧೈರ್ಯ ಕೊಟ್ಟವರಾರು? ಶಾಂತಿಪ್ರಿಯ ನಾಗರಿಕರು ಇದನ್ನು ಪ್ರಶ್ನಿಸಬೇಕು. ಮಣಿಪುರದಲ್ಲಿ ಶಾಂತಿ ಮರು ಸ್ಥಾಪಿಸಬೇಕು. ಮಹಿಳೆಯರ ಘನತೆಯನ್ನು ಕಾಪಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮಣಿಪುರ ಹಿಂಸಾಚಾರ | ರಾಷ್ಟ್ರಪತಿ ದ್ರೌಪದಿ ಮುರ್ಮು ತಕ್ಷಣ ಮಧ್ಯ ಪ್ರವೇಶಿಸಲಿ: ಐವನ್ ಡಿ ಸೋಜ

ಸೌಹಾರ್ದ ಕರ್ನಾಟಕ ವೇದಿಕೆಯ ಅಧ್ಯಕ್ಷ ಜೆ ಮಹದೇವ ಮಾತನಾಡಿ, “ಮಣಿಪುರದಲ್ಲಿ ನಡೆದಿರುವ ಘಟನೆಗೆ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ. ಜನಾಂಗೀಯ ದ್ವೇಷದ ಬೆಂಕಿ ಹತ್ತಿಸಿದಾಗ ಅದು ಜ್ವಲಿಸುವ ಹಿಂಸೆಯ ಆತ್ಯಂತಿಕ ಸ್ವರೂಪವೇ ಮಹಿಳೆಯರ ಮೇಲಿನ ಅತ್ಯಾಚಾರ. ಹೆಣ್ಣೊಬ್ಬಳು ಜನಾಂಗೀಯ ಪ್ರತಿನಿಧಿಯಾಗಿ ಕಾಣುವ ವಿಕೃತಿ ಇದು. ಇದಕ್ಕೆ ತಡೆಯೊಡ್ಡುವುದು ನಾಗರಿಕ ಜವಾಬ್ದಾರಿ. ಮಣಿಪುರದಲ್ಲಿನ ನಿರಂತರ ಜನಾಂಗೀಯ ಹಿಂಸಾಚಾರ ತಡೆಯಲು ಕೂಡಲೇ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರಬೇಕು” ಎಂದು ಒತ್ತಾಯಿಸಿದರು.

ಸಾಲಿಡಾರಿಟಿ ಯೂತ್ ಮೂವ್ ಮೆಂಟ್ ರಾಶಿದ್, ಪಬ್ಲಿಕ್ ಪೀಸ್ ಕಮಿಟಿಯ ಶಾಮುನ್ನಾ, ಮುಜಾಮಿಲ್, ಜಬ್ಬಾರ್, ಜಮಾತ್ ಇಸ್ಲಾಂನ ಅಜೀಜುಲ್ಲಾ, ಮುಸ್ತಫಾ, ಅಬ್ಬಾಸ್, ಹೂಮನ್ ಹೆಲ್ಪ್ ಪೌಂಡೇಶನ್ ಸಮಿತಿಯ ರಿಜ್ವಾನ್, ದಸಂಸ ಸಂಚಾಲಕ ರಾಮಕೃಷ್ಣ ಅತ್ತಿಗುಪ್ಪೆ, ಚಿಕ್ಕ ಹುಣಸೂರು ರಾಜು, ಅಲ್ಪಸಂಖ್ಯಾತ ಮುಖಂಡರಾದ ಮೊಯಿದ್ದೀನ್, ಜಬ್ಬಾರ್, ಅಬ್ಬಾಸ್, ಉವೇ ಸಲ್ಮಾ, ಜಸೀಲಾ ಸೇರಿದಂತೆ ನೂರಾರು ಮಂದಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...