ಕಲಬುರಗಿ | ಸರ್ಕಾರಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಭರ್ತಿಗಾಗಿ ಬೃಹತ್‌ ಪ್ರತಿಭಟನೆ

Date:

ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ಕೂಡಲೇ ಭರ್ತಿ ಮಾಡಬೇಕು, ಕನಿಷ್ಠ ಐದು ವರ್ಷಗಳ ವಯೋಮಿತಿ ಸಡಿಲಿಕೆ ನೀಡಬೇಕು ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆಯುವ ಅಕ್ರಮಗಳನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನಾಕಾರರು ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನೂ ಓದಿ: ಕಲಬುರಗಿ | ವೇತನ ಸಿಗದಿದ್ದಕ್ಕೆ ಬೇಸರ: ಗ್ರಂಥಾಲಯ ಮೇಲ್ವಿಚಾರಕಿ ಆತ್ಮಹತ್ಯೆ

ಪ್ರತಿಭಟನೆಯನ್ನು ಉದ್ದೇಶಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ  ಜಗನಾಥ್ ಎಸ್‌.ಎಸ್. ಮಾತನಾಡಿ, ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದು, ಇದರಿಂದ ಲಕ್ಷಾಂತರ ಯುವಜನರು ನಿರಾಶರಾಗಿದ್ದಾರೆ. ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ಖಾಲಿ ಹುದ್ದೆಗಳ ನೇಮಕಾತಿಗೆ ಯಾವುದೇ ಪ್ರಯತ್ನ ಮಾಡಲಿಲ್ಲ. ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಎಲ್ಲ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿತ್ತು. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷ ನಾಲ್ಕು ತಿಂಗಳು ಕಳೆದರೂ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ 2 2

2025–26ನೇ ಸಾಲಿನಲ್ಲಿ ರಾಜ್ಯದ 43 ಇಲಾಖೆಗಳಲ್ಲೇ 2,84,881 ಹುದ್ದೆಗಳು ಖಾಲಿ ಬಿದ್ದಿದ್ದು, ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗದಿರುವುದರಿಂದ ಯುವಜನತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 4-5 ವರ್ಷಗಳಿಂದ ನೇಮಕಾತಿ ನಿಂತಿರುವ ಕಾರಣ ಅನೇಕ ಅಭ್ಯರ್ಥಿಗಳು ತಮ್ಮ ಅರ್ಹತಾ ವಯಸ್ಸನ್ನೇ ಮೀರಿದ್ದಾರೆ. ಉದ್ಯೋಗದ ಭರವಸೆಯಿಲ್ಲದೆ ಹಲವರು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಪ್ರತಿಭಟನಾಕಾರರು ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕಲಬುರಗಿ | ಅಂಬಿಗರ ಚೌಡಯ್ಯ ಮೂರ್ತಿ ಹಾನಿ ಮಾಡಿದವರನ್ನು ಬಂಧಿಸುವಂತೆ ಪ್ರತಿಭಟನೆ

ಕೆಪಿಎಸ್‌ಸಿಯ ಒಳಜಗಳ ಹಾಗೂ ಭ್ರಷ್ಟಾಚಾರದಿಂದ ನೇಮಕಾತಿ ಪ್ರಕ್ರಿಯೆಯ ಮೇಲೆ ಯುವಜನರ ವಿಶ್ವಾಸ ಕುಂದಿದೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಗಳಲ್ಲೇ 59,454 ಹುದ್ದೆಗಳು ಖಾಲಿ, ಕಲ್ಯಾಣ ಕರ್ನಾಟಕದ 6 ಜಿಲ್ಲೆಗಳಲ್ಲಿ 21,381 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಆರೋಗ್ಯ, ಗ್ರಾಮೀಣಾಭಿವೃದ್ಧಿ, ಕಂದಾಯ ಮತ್ತು ಒಳಾಡಳಿತ ಸೇರಿದಂತೆ ಹಲವಾರು ಇಲಾಖೆಗಳಲ್ಲಿಯೂ ಸಾವಿರಾರು ಹುದ್ದೆಗಳು ಖಾಲಿ ಇರುವುದರಿಂದ ಸಾರ್ವಜನಿಕ ಸೇವೆಗಳು ಹಿನ್ನಡೆಯಾಗಿವೆ.

ಸರ್ಕಾರಿ ಇಲಾಖೆಹಳಲ್ಲಿ ಇರುವ ಖಾಲಿ ಹುದ್ದೆಗಳನ್ನು ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದಲ್ಲಿ ತುಂಬಿಕೊಳ್ಳಲಾಗುತ್ತಿದ್ದು, ಉದ್ಯೋಗ ಭದ್ರತೆ ಇಲ್ಲದೆ ಯುವಕರು ಕೆಲಸ ಮಾಡುತ್ತಿದ್ದಾರೆ. ಅನೇಕರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಸಾವಿರಾರು ರೂಪಾಯಿಗಳನ್ನು ಖರ್ಚುಮಾಡಿ ಕೋಚಿಂಗ್, ತರಬೇತಿ ಹಾಗೂ ಗ್ರಂಥಾಲಯ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆಂದು ತಿಳಿಸಿದರು.

ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ಮುಖಂಡ ತೇಜಸ್ ಸಿರ್ ಇಬ್ರಾಹಿಂಪೂರ ಮಾತನಾಡಿ, ರಾಜ್ಯ ಸರ್ಕಾರ ಆದಷ್ಟು ಬೇಗ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸವಿತಾ ಜಿ ಎಮ್, ರಮೇಶ ದೇವಕರ್ ಮಾತನಾಡಿ, ಇತ್ತೀಚೆಗೆ ಕೆ.ಇ.ಎ ಪ್ರಕಟಿಸಿರುವ ನೋಟಿಫಿಕೇಶನ್‌ನಲ್ಲಿ ನಿಗದಿಪಡಿಸಿರುವ ದುಬಾರಿ ಅರ್ಜಿ ಶುಲ್ಕವನ್ನು ಕೂಡಲೇ ಕೈಬಿಡಬೇಕು ಎಂದು ಅವರು ಒತ್ತಾಯಿಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ಮುಖಂಡರು ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು.

ಹೋರಾಟ ಸಮಿತಿಯ ಹಕ್ಕೋತ್ತಾಯಗಳು:

ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿಮಾಡಿ.ನೇಮಕಾತಿ ಪ್ರಕ್ರಿಯೆಗಳಲ್ಲಿ ಅಕ್ರಮ ತಡೆಗಟ್ಟಿ ಪಾರದರ್ಶಕತೆ ಖಚಿತಪಡಿಸಿ.ಕಳೆದ 4-5 ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಿಂತಿರುವ ಹಿನ್ನೆಲೆಯಲ್ಲಿ ಎಲ್ಲಾ ಹುದ್ದೆಗಳಿಗೆ ಕನಿಷ್ಠ ಐದು ವರ್ಷಗಳ ವಯೋಮಿತಿ ಸಡಿಲಿಕೆ ನೀಡಿ.ಸರ್ಕಾರಿ ಇಲಾಖೆಗಳಲ್ಲಿನ ದಿನಗೂಲಿ, ಗುತ್ತಿಗೆ ಹಾಗೂ ಹೊರಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ, ಕಾಯಂ ಆಧಾರದ ಮೇಲೆ ನೇಮಕಾತಿ ಮಾಡಿ. ಕೆ.ಇ.ಎ ಪ್ರಕಟಿಸಿರುವ ದುಬಾರಿ ಅರ್ಜಿ ಶುಲ್ಕವನ್ನು ಕೈಬಿಡಿ ಎಂದು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...