ಕಲಬುರಗಿ | ಕಾಣೆಯಾದ ಮಕ್ಕಳ ಪತ್ತೆಗೆ ವಿಶೇಷ ಕಾರ್ಯಪಡೆ ಸಮಿತಿ ಸಭೆ

Date:

ನಗರ ಪೊಲೀಸ್ ಆಯುಕ್ತಾಲಯದ ಪೊಲೀಸ್ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಮಕ್ಕಳ ವಿಶೇಷ ಪೊಲೀಸ್ ಘಟಕದ ಸಂಯುಕ್ತಾಶ್ರಯದಲ್ಲಿ ಕಾಣೆಯಾದ ಮಕ್ಕಳ ಪತ್ತೆಗಾಗಿ ರಚಿಸಿರುವ ವಿಶೇಷ ಕಾರ್ಯಪಡೆ ಸಮಿತಿಯ ಪರಿಶೀಲನಾ ಸಭೆ ನಡೆಯಿತು.

- Advertisement -

ಸಭೆಯಲ್ಲಿ ಕಾಣೆಯಾದ ಮಕ್ಕಳ ಕುರಿತು ದಾಖಲಾಗಿರುವ ದೂರುಗಳನ್ನು ಪರಿಶೀಲಿಸಲಾಯಿತು. ಉಪ ಪೊಲೀಸ್ ಆಯುಕ್ತ ಪ್ರವೀಣ್ ಕುಮಾರ್ ಎಚ್. ನಾಯಕ್, ಕೆಎಸ್‌ಪಿಎಸ್ ಅವರು ಪ್ರಕರಣಗಳ ಪ್ರಸ್ತುತ ಸ್ಥಿತಿಗತಿ ಕುರಿತು ಪೊಲೀಸ್ ಅಧಿಕಾರಿಗಳು ಹಾಗೂ ಮಕ್ಕಳ ಪಾಲಕರೊಂದಿಗೆ ಚರ್ಚಿಸಿ, ತನಿಖೆಯ ಪ್ರಗತಿ ಮತ್ತು ಮಕ್ಕಳ ಪತ್ತೆಗೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಇದನ್ನು ಓದಿದ್ದೀರಾ? ಕಲಬುರಗಿ | ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪಾಲಿಕೆ ಎದುರುಗಡೆ ಪ್ರತಿಭಟನೆ

ಕಾಣೆಯಾದ ಮಕ್ಕಳ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಮಕ್ಕಳ ಪತ್ತೆಗೆ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಿರಲಿ: ಅಶೋಕ್ ಕುಮಾರ್ ಕೊಡವೂರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು....

ಕುಮಟಾ | ತದಡಿ ಬಂದರಿನಲ್ಲಿ ದುರಂತ: ಮೀನು ಸಂಗ್ರಹಣಾ ಸ್ಥಳ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಸಾವು

ಕುಮಟಾ: ಸಮುದ್ರದಲ್ಲಿ ಮೀನುಗಾರಿಕೆ ಮುಗಿಸಿ ದಂಡೆಗೆ ಮರಳಿದ್ದ ಬೋಟ್‌ನ ಮೀನು ಸಂಗ್ರಹಣಾ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ: ಎರಡನೇ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಮತ...