ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ ಹೊಲದ ಪಕ್ಕದಲ್ಲಿ ಪತ್ತೆಯಾಗಿದ್ದು, ಘಟನೆ ಕುರಿತು ಕೊಲೆ ಶಂಕೆ ವ್ಯಕ್ತವಾಗಿದೆ.
ಡೊಂಗರಗಾಂವ ಗ್ರಾಮದ ನಿವಾಸಿ ಬಸವತೀರ್ಥಯ್ಯ ರಾಚಯ್ಯ ಮಠಪತಿ (68) ಮೃತರು. ಮಂಗಳವಾರ ಮಧ್ಯಾಹ್ನ ಹೊಲಕ್ಕೆ ತೆರಳುವುದಾಗಿ ಮನೆಯಲ್ಲಿ ತಿಳಿಸಿ ಹೊರಟಿದ್ದ ಅವರು ರಾತ್ರಿ ಕಳೆದರೂ ಮನೆಗೆ ಮರಳಿರಲಿಲ್ಲ. ಆತಂಕಗೊಂಡ ಕುಟುಂಬಸ್ಥರು ಹೊಲಕ್ಕೆ ತೆರಳಿ ರಾತ್ರಿಯಿಡೀ ಹುಡುಕಾಟ ನಡೆಸಿದರೂ ಸುಳಿವು ಸಿಕ್ಕಿರಲಿಲ್ಲ.
ಬುಧವಾರ ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ, ಅವರ ಹೊಲದ ಪಕ್ಕದ ಹೊಲದಲ್ಲಿ ಬಸವತೀರ್ಥಯ್ಯ ಅವರ ಮೃತದೇಹ ಪತ್ತೆಯಾಗಿದೆ. ಮೃತರ ಕೊರಳು, ಎದೆ ಸೇರಿದಂತೆ ದೇಹದ ವಿವಿಧ ಭಾಗಗಳಲ್ಲಿ ಚಾಕುವಿನಿಂದ ಇರಿದ ಗಾಯಗಳು ಹಾಗೂ ತಲೆಯ ಮೇಲೆ ಗಾಯಗಳಾಗಿರುವುದು ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಇದು ಕೊಲೆ ಕೃತ್ಯವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಇದನ್ನು ಓದಿದ್ದೀರಾ? ಯಾದಗಿರಿ | ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ; ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
This video cannot be played in your browser. Open the video directly

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಪ್ರಕರಣದ ತನಿಖೆ ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗುವುದು. ತನಿಖೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.





