ಕಲಬುರಗಿ | ₹72.50 ಲಕ್ಷ ವೆಚ್ಚದ 5 ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಸಚಿವ ಡಾ. ಶರಣಪ್ರಕಾಶ ಪಾಟೀಲ್

Date:

ಜಿಲ್ಲಾ ಪಂಚಾಯಿತಿ ಕಲಬುರಗಿ ಹಾಗೂ ಪಂಚಾಯತ್ ರಾಜ್ ಇಲಾಖೆಯ 2024–25ನೇ ಸಾಲಿನ ಡಿಡಿಐ ಯೋಜನೆಯಡಿ ಸೇಡಂ ನಗರದ ವಿದ್ಯಾನಗರ–2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ₹72.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಐದು ಹೆಚ್ಚುವರಿ ಶಾಲಾ ಕೊಠಡಿಗಳನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಬುಧವಾರ ಉದ್ಘಾಟಿಸಿದರು.

- Advertisement -

ಬಳಿಕ ಮಾತನಾಡಿದ ಸಚಿವರು, ‘ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧಿಸುವ ನಿಟ್ಟಿನಲ್ಲಿ ಶಿಕ್ಷಕರು ಹೆಚ್ಚಿನ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ಶಾಲಾ ಕಟ್ಟಡ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳ ಅಭಿವೃದ್ಧಿಗೆ ಯಾವುದೇ ಕೊರತೆ ಉಂಟಾಗದಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ’ ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

‘ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ನಿಯಮಿತವಾಗಿ ಶೈಕ್ಷಣಿಕ ಚಿಂತನಾಕೂಟಗಳನ್ನು ಆಯೋಜಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ನಿವಾರಿಸಿ ಆತ್ಮವಿಶ್ವಾಸ ಬೆಳೆಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ನಿರ್ಮಿಸಲಾಗುವ ಶೌಚಾಲಯ ಕಾಮಗಾರಿಗೆ ಸಚಿವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಬರಪೀಡಿತ ಜಿಲ್ಲೆ ಘೋಷಿಸಿ; ರೈತರ ಸಾಲ ಮನ್ನಾಕ್ಕೆ ಸಮತಾ ಸೈನಿಕ ದಳ ಆಗ್ರಹ

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು, ಮುಖಂಡರು, ಶಿಕ್ಷಣ ಪ್ರೇಮಿಗಳು, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...