ಶ್ರಾವಣ ಮಾಸದ ಅಂತ್ಯ ಹಾಗೂ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಸೇಡಂ ತಾಲೂಕಿನ ಊಡಗಿ ಗ್ರಾಮಕ್ಕೆ ಭೇಟಿ ನೀಡಿ ಪುರಾತನ ಶ್ರೀ ಲೋಕೇಶ್ವರ ದೇವಾಲಯದಲ್ಲಿ ದರ್ಶನ ಪಡೆದರು.
ಈ ಸಂದರ್ಭದಲ್ಲಿ ದೇವಾಲಯದ ಸ್ಥಿತಿಗತಿಗಳನ್ನು ಪರಿಶೀಲಿಸಿದ ಸಚಿವರು, ಪುರಾತನ ದೇವಾಲಯದ ಸಂರಕ್ಷಣೆ ಹಾಗೂ ಅಭಿವೃದ್ಧಿ ಕುರಿತು ಸ್ಥಳೀಯರೊಂದಿಗೆ ಚರ್ಚಿಸಿದರು. ದೇವಾಲಯದ ಜೀರ್ಣೋದ್ಧಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಅವರು ಕಾಳಜಿ ವ್ಯಕ್ತಪಡಿಸಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸೆ.17ರಂದು ಸಂಕಲ್ಪ ಸಮಾವೇಶ
ಗ್ರಾಮದ ಮುಖಂಡರಾದ ಬಸವರಾಜ ಪಾಟೀಲ ಊಡಗಿ, ಸತೀಶ್ ಕುಮಾರ್ ಭಾಂಜಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.





