ಕಲಬುರಗಿ | ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

Date:

ಅಪ್ರಾಪ್ತ ಬಾಲಕಿಯನ್ನು ವಂಚಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಯುವಕನೊಬ್ಬನಿಗೆ ವಿಶೇಷ ಪೋಕ್ಸ್‌ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹55 ಸಾವಿರ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

- Advertisement -

ಸೇಡಂ ತಾಲೂಕಿನ ಹೈಯ್ಯಾಳ ಗ್ರಾಮದ ನವೀನಕುಮಾರ ದುದ್ಯಾಲ (22) ಶಿಕ್ಷೆಗೆ ಗುರಿಯಾದ ಆರೋಪಿ. ಅಪ್ರಾಪ್ತೆಯೊಂದಿಗೆ ಸ್ನೇಹ ಬೆಳೆಸಿದ್ದ ಆರೋಪಿ, ಆಕೆಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ ಹೊರ ರಾಜ್ಯದಲ್ಲಿ ವಾಸ್ತವ್ಯ ಹೂಡಿದ್ದ. ಈ ಅವಧಿಯಲ್ಲಿ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬ ಆರೋಪ ಸಾಬೀತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಪ್ರಕರಣ ದಾಖಲಿಸಿಕೊಂಡ ಕುರಕುಂಟಾ ಠಾಣೆ ಪೊಲೀಸರು ಬಾಲಕಿಯನ್ನು ಸುರಕ್ಷಿತವಾಗಿ ಪತ್ತೆಹಚ್ಚಿ ರಕ್ಷಣೆ ನೀಡಿದ್ದರು. ಬಳಿಕ ಸಾಕ್ಷ್ಯಾಧಾರಗಳು, ವೈದ್ಯಕೀಯ ವರದಿಗಳು ಹಾಗೂ ಸಾಕ್ಷಿದಾರರ ಹೇಳಿಕೆಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ವಿಚಾರಣೆ ಪೂರ್ಣಗೊಳಿಸಿದ ಕಲಬುರಗಿಯ ವಿಶೇಷ ಪೋಕ್ಸ್‌ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ನ್ಯಾಯಾಧೀಶ ಎಸ್‌.ಎಲ್. ಚವ್ಹಾಣ ಅವರು ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ತೀರ್ಮಾನಿಸಿ ಶಿಕ್ಷೆ ಪ್ರಕಟಿಸಿದರು.

ತೀರ್ಪಿನಂತೆ ಪೋಕ್ಸ್‌ ಕಾಯ್ದೆಯ ಕಲಂ 6ರಡಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹25 ಸಾವಿರ ದಂಡ, ಕಲಂ 12ರಡಿ ಒಂದು ವರ್ಷದ ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಲಾಗಿದೆ. ಜೊತೆಗೆ ಬಿಎನ್‌ಎಸ್‌ನ ವಿವಿಧ ಕಲಂಗಳಡಿ ತಲಾ ಒಂದು ವರ್ಷದ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಲಾಗಿದೆ.

ಅಲ್ಲದೆ, ಸಂತ್ರಸ್ತ ಬಾಲಕಿಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ₹5 ಲಕ್ಷ ಪರಿಹಾರಧನ ನೀಡುವಂತೆ ನ್ಯಾಯಾಲಯ ಆದೇಶಿಸಿದ್ದು, ಒಂದು ತಿಂಗಳೊಳಗೆ ಪರಿಹಾರ ವಿತರಿಸಲು ಸೂಚನೆ ನೀಡಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ಒಣಗಿದ ಧರೆ: ವಲಸೆ ಭೀತಿಯಲ್ಲಿ ಕಲ್ಯಾಣ ಕರ್ನಾಟಕದ ರೈತರು!

ಪ್ರಕರಣದ ತನಿಖೆಯನ್ನು ಸಿಪಿಐ ಮಹಾದೇವಪ್ಪ ಹಾಗೂ ಪಿಎಸ್‌ಐ ಚಿದಾನಂದ ನಡೆಸಿದ್ದು, ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆರಿಗೆಯ ನಂತರ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಿಗೆ! ಬಾಲಕನ ವಿರುದ್ಧ ಪೋಕ್ಸೋ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಕೇರಳ ಮೂಲದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯೊಂದಿಗೆ...

ಶೌಚಕ್ಕೆ ಬಾವಿ ನೀರು ಹೊರುವ ವಿದ್ಯಾರ್ಥಿಗಳು: ತಾತ್ಕಾಲಿಕವಷ್ಟೇ ಎಂದು ನುಣುಚಿದ ಆಡಳಿತ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ...

ವಿಜಯಪುರ | ನೈಜ ಮತದಾರರ ಹಕ್ಕು ಕಸಿದುಕೊಳ್ಳದಂತೆ ಕ್ರಮಕ್ಕೆ ಅಬ್ದುಲ್ ಹಮೀದ್ ಮುಶ್ರೀಫ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ Claims &...

ಬಾದಾಮಿ | ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ

ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ...