ಕಲಬುರಗಿ | ಅಂಬೇಡ್ಕರ್ ಭಾವಚಿತ್ರ ಹರಿದು ಹಾಕಿದ ಕಿಡಿಗೇಡಿಗಳು: ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Date:

ಕಮಲಾಪುರ ತಾಲೂಕಿನ ಚೇಂಗಟಾ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹರಿದು ಹಾಕಿ ಅವಮಾನಿಸಿದ ಘಟನೆ ಖಂಡಿಸಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

- Advertisement -

ಮಂಗಳವಾರ ರಾತ್ರಿ ಸುಮಾರು 10.30ರವರೆಗೆ ಅಂಬೇಡ್ಕರ್ ಅವರ ಭಾವಚಿತ್ರ ಸ್ಥಳದಲ್ಲೇ ಇದ್ದು, ಬಳಿಕ ಕಿಡಿಗೇಡಿಗಳು ಭಾವಚಿತ್ರವನ್ನು ಹರಿದು ಹಾಕಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ. ವಿಷಯ ತಿಳಿದ ಅಂಬೇಡ್ಕರ್ ಸೇವಾ ಸಮಿತಿ ಪದಾಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಪೊಲೀಸ್ ಅಧಿಕಾರಿಗಳು ಹಾಗೂ ತಾಲೂಕು ದಂಡಾಧಿಕಾರಿಗಳ ಗಮನಕ್ಕೆ ತಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ನಂತರ ಚೇಂಗಟಾ ಗ್ರಾಮದ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಮುಖಂಡರು, ಘಟನೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾಕಾರರು ಮಾತನಾಡಿ, ‘ಡಾ.ಬಿ.ಆರ್. ಅಂಬೇಡ್ಕರ್ ಅವರು ಭಾರತದ ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ ಮಹಾನ್ ನಾಯಕರು. ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವುದು ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಅಗೌರವ ತೋರಿದಂತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಘಟನೆಯ ಹಿಂದೆ ಇರುವ ಉದ್ದೇಶವನ್ನು ಸಮಗ್ರವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನೆಗೆ ಸ್ಪಂದಿಸಿದ ರಟಕಲ್ ಪೊಲೀಸ್ ಅಧಿಕಾರಿಗಳು ಹಾಗೂ ತಾಲೂಕು ದಂಡಾಧಿಕಾರಿಗಳು, ‘ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬಂಧಿಸಿರುವುದಾಗಿ ತಿಳಿಸಿದರು. ಘಟನೆಯ ಹಿಂದಿನ ಉದ್ದೇಶ ಸೇರಿದಂತೆ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಭರವಸೆ’ ನೀಡಿದರು.

ಘಟನೆಯ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವಂತೆ ಮುಖಂಡರು ಹಾಗೂ ಗ್ರಾಮಸ್ಥರು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ರೌಡಿ ಶೀಟರ್ ಅಶೋಕ ವಿಠಲರಾವ ಸಿಂಗೆ ಗಡಿಪಾರು

ಪ್ರತಿಭಟನೆಯಲ್ಲಿ ಅಂಬೇಡ್ಕರ್ ಸೇವಾ ಸಮಿತಿ ಯುವ ಘಟಕದ ಅಧ್ಯಕ್ಷ ಎನ್.ಕೆ. ಅರ್ಜುನ್, ಭೀಮ ಆರ್ಮಿ ಕಾಳಗಿ ತಾಲೂಕು ಅಧ್ಯಕ್ಷ ಸಂದೀಪ್ ರಾವಣ ಸೇರಿದಂತೆ ಅಂಬೇಡ್ಕರ್ ಸೇವಾ ಸಮಿತಿ ಪದಾಧಿಕಾರಿಗಳು ಹಾಗೂ ಚೇಂಗಟಾ ಗ್ರಾಮದ ಗ್ರಾಮಸ್ಥರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...

ರಾಯಚೂರು | ದಸರಾ ವೇಳೆ ದಲಿತ ಸಚಿವರನ್ನು ತಡೆದ ಆರೋಪ: ಮೈಸೂರು ಎಸ್‌ಪಿ ವಿರುದ್ಧ ಕ್ರಮಕ್ಕೆ ಹನುಮಂತಪ್ಪ ಮನ್ನಾಪುರಿ ಆಗ್ರಹ

ಮೈಸೂರಿನ ದಸರಾ ಮಹೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ತೆರಳುತ್ತಿದ್ದ...

ಚಿಕ್ಕಮಗಳೂರು | ಮರ ಎಳೆಯಲು ಕಟ್ಟಿದ್ದ ಹಗ್ಗದಿಂದ ಸವಾರ ಸಾವು 

ಚಿಕ್ಕಮಗಳೂರು ತಾಲೂಕಿನ ಹೊರವಲಯದ ತೇಗೂರು ಗ್ರಾಮದ ಬಳಿ ಟ್ರ್ಯಾಕ್ಟರ್‌ಗೆ ಕಟ್ಟಿದ್ದ ಹಗ್ಗ...