ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರನ್ನು ಹಲ್ಲೆ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಬ್ರಹ್ಮಪುರದ ಕನಕನಗರ ನಿವಾಸಿ ಸಿದ್ದಲಿಂಗ ಸಾವಳಗಿ (35) ಮೃತ ವ್ಯಕ್ತಿ. ಅವರು ಕಲಬುರಗಿ ಕೇಂದ್ರ ಬಸ್ ನಿಲ್ದಾಣದ ಬಳಿ ಹೋಟೆಲ್ ನಡೆಸುತ್ತಿದ್ದರು ಎನ್ನಲಾಗಿದೆ. ಶುಕ್ರವಾರ ಮನೆಯಿಂದ ಹೊರಗೆ ತೆರಳಿದ ಬಳಿಕ ಅವರು ವಾಪಸ್ ಮನೆಗೆ ಬಂದಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಆತಂಕಗೊಂಡು ಹುಡುಕಾಟ ನಡೆಸಿದ್ದರು.
ಭಾನುವಾರ ಸಂಜೆ ನಗರದ ಹೊರವಲಯದಲ್ಲಿರುವ ಹೋಟೆಲ್‌ವೊಂದರ ಸಮೀಪ ಕಾರಿನಲ್ಲಿ ಸಿದ್ದಲಿಂಗ ಅವರ ಮೃತದೇಹ ಪತ್ತೆಯಾಗಿದೆ. ದೇಹದ ಮೇಲೆ ಹಲ್ಲೆಯ ಗುರುತುಗಳು ಕಂಡುಬಂದಿದ್ದು, ಸ್ಟಿಕ್ ರಾಡ್‌ನಿಂದ ಹೊಡೆದು ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಪರಿಚಯಸ್ಥರೇ ಸಿದ್ದಲಿಂಗ ಅವರನ್ನು ಕಾರಿನಲ್ಲಿ ಕರೆದೊಯ್ದು ಹಲ್ಲೆ ನಡೆಸಿ ಕೊಲೆ ಮಾಡಿರಬಹುದು ಎಂಬ ಪ್ರಾಥಮಿಕ ಅನುಮಾನ ವ್ಯಕ್ತವಾಗಿದ್ದು, ಹತ್ಯೆಯ ಬಳಿಕ ಮೃತದೇಹವನ್ನು ಕಾರಿನಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿರುವ ಶಂಕೆ ಇದೆ. ಆದರೆ ಕೊಲೆಗೆ ನಿಖರ ಕಾರಣವೇನು ಹಾಗೂ ಕೃತ್ಯದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
This video cannot be played in your browser. Open the video directly

ಇದನ್ನು ಓದಿದ್ದೀರಾ? ಯಾದಗಿರಿ | ಕಾಂಗ್ರೆಸ್ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ., ಸಬ್ ಅರ್ಬನ್ ಪೊಲೀಸ್ ಠಾಣೆಯ ಪಿಐ ನಟರಾಜ್ ಲಾಡೆ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





