ಕಲಬುರಗಿಯಲ್ಲಿ ಅಲೆಮಾರಿ ಸಮುದಾಯ ವಾಸಿಸುತ್ತಿರುವ ರಾಜಾಪುರ ಪ್ರದೇಶಕ್ಕೆ ಭೇಟಿ ನೀಡಿದ್ದು, ಸಮುದಾಯದ ಜನರೊಂದಿಗೆ ಚರ್ಚೆ ನಡೆಸಿದ್ದಾರೆ.
ಶಾಸಕರ ಬಳಿ ತಮ್ಮ ಕುಂದುಕೊರತೆಗಳನ್ನು ಹೇಳಿಕೊಂಡ ಅಲೆಮಾರಿ ಸಮುದಾಯದ ಮಂದಿ, “ತಾವು ವಾಸಿಸುತ್ತಿರುವ ಗುಡಿಸಲುಗಳು ಮಳೆಯಿಂದಾಗಿ ಸಂಪೂರ್ಣ ಹಾನಿಯಾಗಿವೆ. ಸೂರಿಲ್ಲದೆ ಪರದಾಡುವಂತಾಗಿದೆ” ಎಂದು ಹೇಳಿಕೊಂಡಿದ್ದಾರೆ.
ಸಮಸ್ಯೆ ಆಲಿಸಿದ ಶಾಸಕರು, ಸಮಸ್ಯೆಗಳಿಗೆ ಪರಿಹಾರ ಒದಗಿಸಲು ತುರ್ತು ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆಸೂಚನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಹಲವರು ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಇದ್ದರು.