ಕಲಬುರಗಿ | ಕೇಂದ್ರ ಕಾರಾಗೃಹದ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ

Date:

ನಗರದ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ಅನಿರೀಕ್ಷಿತ ದಾಳಿ ನಡೆಸಿ, ಬ್ಯಾರಕ್‌ವೊಂದರಲ್ಲಿ ಸಿಮ್‌ ಇಲ್ಲದ ಕೀಪ್ಯಾಡ್ ಮೊಬೈಲ್‌ವೊಂದನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.

- Advertisement -

ಬುಧವಾರ ಬೆಳಗ್ಗೆ 5ರಿಂದ 7 ಗಂಟೆಯವರೆಗೆ ನಡೆದ ಕಾರ್ಯಾಚರಣೆಯಲ್ಲಿ 128 ಮಂದಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಭಾಗವಹಿಸಿ, ಕಾರಾಗೃಹದ ವಿವಿಧ ಬ್ಯಾರಕ್‌ಗಳು ಮತ್ತು ಕೈದಿಗಳ ಕೋಣೆಗಳನ್ನು ತಪಾಸಣೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಈ ವೇಳೆ ಬ್ಯಾರಕ್ ನಂ.6ರ ಅಮರ್ಜಾ ವಿಭಾಗದಲ್ಲಿ ಹೀರೋ ಕಂಪನಿಯ ಕೀಪ್ಯಾಡ್ ಮೊಬೈಲ್ ಪತ್ತೆಯಾಗಿದೆ. ಮೊಬೈಲ್‌ನಲ್ಲಿ ಯಾವುದೇ ಸಿಮ್ ಕಾರ್ಡ್ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಾಗೃಹದಲ್ಲಿ ನಿಷೇಧಿತ ವಸ್ತು ಪತ್ತೆಯಾದ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಣಕುಮಾರ ಅವರು ನೀಡಿದ ದೂರಿನ ಮೇರೆಗೆ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕರ್ನಾಟಕ ಕಾರಾಗೃಹ (ತಿದ್ದುಪಡಿ) ಅಧಿನಿಯಮ-2022ರ ಕಲಂ 42 ಹಾಗೂ ಬಿಎನ್‌ಎಸ್‌-2023ರ ಕಲಂ 323ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ನಿಷೇಧಿತ ಕಫ್ ಸಿರಪ್ ಮಾರಾಟ: ಇಬ್ಬರ ಬಂಧನ, 42 ಬಾಟಲ್ ವಶ

ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರ ನಿರ್ದೇಶನದಂತೆ, ಡಿಸಿಪಿ ಶಾಲೂ ಐಪಿಎಸ್ ಅವರ ಮಾರ್ಗದರ್ಶನದಲ್ಲಿ ಡಿಸಿಪಿ ಪ್ರವೀಣ್ ಹೆಚ್. ನಾಯಕ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಬಸ್‌ಗಳ ಮುಖಾಮುಖಿ ಢಿಕ್ಕಿ : ಮೂವರ ಸ್ಥಿತಿ ಗಂಭೀರ, 28 ಮಂದಿಗೆ ಗಾಯ

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ...

ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ...

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...