ನಾಲ್ಕು ಮಂದಿ ಮೇಲೆ ಮಂಗಗಳು ದಾಳಿ ಮಾಡಿದ್ದು, ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದಲ್ಲಿ ನಡೆದಿದೆ.
ಮಂಗಗಳ ದಾಳಿಗೆ ಒಳಗಾದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದ್ದು, ಹಲವಾರು ದಿನಗಳಿಂದ ಮಂಗಗಳು ಗ್ರಾಮದಲ್ಲಿ ಸಿಕ್ಕಸಿಕ್ಕವರ ಮೇಲೆ ದಾಳಿ ನಡೆಸುತ್ತಿವೆ ಎಂದು ಹೇಳಲಾಗುತ್ತದೆ.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಸೇರಿದ ಕುಡಿಯುವ ನೀರಿನ ಬಾವಿ ಮುಚ್ಚಿಸಿದ ಸವರ್ಣೀಯರು
‘ದಂಡೋತಿ ಗ್ರಾಮದಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಅರಣ್ಯ ಇಲಾಖೆಯವರು ಕೂಡಲೇ ಮಂಗಗಳನ್ನು ಸೆರೆ ಹಿಡಿದು ಗ್ರಾಮದ ಜನರ ಆತಂಕ ದೂರ ಮಾಡಬೇಕುʼ ಎಂದು ಗ್ರಾಮಸ್ಥರು ಮಾಧ್ಯಮಗಳ ಮೂಲಕ ಮನವಿ ಮಾಡಿದ್ದಾರೆ.