ಕಲಬುರಗಿ | ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಹೆಚ್ಚಿನ ಎಚ್ಚರಿಕೆ ಅಗತ್ಯ: ಡಾ.ವಾಸು ಹೆಚ್ ವಿ

Date:

ಮತದಾರರ ಹಕ್ಕುಗಳ ರಕ್ಷಣೆಗಾಗಿ ಬೂತ್ ಲೆವೆಲ್ ಏಜೆಂಟ್‌ಗಳು (ಬಿಎಲ್‌ಎ) ಜಾಗೃತರಾಗಿ ಕಾರ್ಯನಿರ್ವಹಿಸಬೇಕು. ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ ವಹಿಸುವುದು ಅತ್ಯಂತ ಮಹತ್ವದ್ದಾಗಿದೆ ಎಂದು ಜಾಗೃತ ಕರ್ನಾಟಕ ರಾಜ್ಯ ಸಂಚಾಲಕ ಡಾ. ಹೆಚ್.ವಿ. ವಾಸು ಹೇಳಿದರು.

- Advertisement -

ಆಳಂದ ಹಾಗೂ ಮಾದನ ಹಿಪ್ಪರಗಾ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ನೇತೃತ್ವದಲ್ಲಿ ಭಾನುವಾರ ನಗರದ ದಮಾತಾ ವೈದ್ಯಕೀಯ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕುರಿತ ಬಿಎಲ್‌ಎ ಪ್ರತಿನಿಧಿಗಳ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ, ‘ಚುನಾವಣಾ ಆಯೋಗದ ನಿಯಮಗಳು ಹಾಗೂ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕುರಿತು ವಿವರಿಸಿದ ಅವರು, ಮತದಾರರ ಪಟ್ಟಿಯ ನಿರಂತರ ನವೀಕರಣ ಮತ್ತು ಸಾರಾಂಶ ಪರಿಷ್ಕರಣೆ ಚುನಾವಣಾ ವ್ಯವಸ್ಥೆಯ ಸಾಮಾನ್ಯ ಮತ್ತು ಅಗತ್ಯ ಪ್ರಕ್ರಿಯೆಗಳಾಗಿವೆ. ಮೃತಪಟ್ಟಿರುವ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವುದು, ಸ್ಥಳಾಂತರಗೊಂಡವರ ವಿವರಗಳನ್ನು ಪರಿಷ್ಕರಿಸುವುದು ಹಾಗೂ 18 ವರ್ಷ ಪೂರ್ಣಗೊಳಿಸಿದ ಹೊಸ ಮತದಾರರನ್ನು ಸೇರ್ಪಡೆಗೊಳಿಸುವುದು ಈ ಪ್ರಕ್ರಿಯೆಯ ಪ್ರಮುಖ ಉದ್ದೇಶವಾಗಿದೆ’ ಎಂದು ತಿಳಿಸಿದರು.

‘ಆದರೆ ಇತ್ತೀಚಿನ ದಿನಗಳಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದ ಪ್ರಕ್ರಿಯೆಗಳ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬಿಎಲ್‌ಎಗಳು ಹೆಚ್ಚಿನ ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸಬೇಕಾಗಿದೆ ಎಂದು ಹೇಳಿದರು. ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಮೂಲಭೂತ ಪ್ರಜಾಪ್ರಭುತ್ವ ಹಕ್ಕಾಗಿದ್ದು, ಯಾವುದೇ ಕಾರಣಕ್ಕೂ ಅರ್ಹ ಮತದಾರರು ಮತದಾನದಿಂದ ವಂಚಿತರಾಗಬಾರದು ಎಂಬುದನ್ನು ಖಚಿತಪಡಿಸಿಕೊಳ್ಳಬೇಕು’ ಎಂದು ತಿಳಿಸಿದರು.

‘ಮತದಾರರ ಪಟ್ಟಿಯಿಂದ ಹೆಸರು ಕೈಬೀಳುವ ಅಥವಾ ಆಕ್ಷೇಪಣೆಗಳು ಉಂಟಾಗುವ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡುವುದು, ಅಗತ್ಯ ದಾಖಲೆಗಳ ಸಂಗ್ರಹಕ್ಕೆ ನೆರವಾಗುವುದು ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವುದು ಬಿಎಲ್‌ಎಗಳ ಪ್ರಮುಖ ಕರ್ತವ್ಯವಾಗಿದೆ ಎಂದು ಹೇಳಿದರು. ಮತದಾರರ ಪಟ್ಟಿಯಲ್ಲಿನ ಪ್ರತಿಯೊಂದು ಹೆಸರನ್ನು ಸಂರಕ್ಷಿಸುವ ದೃಷ್ಟಿಯಿಂದ ಕಾರ್ಯಕರ್ತರು ಮನೆಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು’ ಎಂದು ಸಲಹೆ ನೀಡಿದರು.

‘ಸಾರ್ವತ್ರಿಕ ವಯಸ್ಕ ಮತದಾನ ಹಕ್ಕು ದೇಶದ ಸ್ವಾತಂತ್ರ್ಯ ಹೋರಾಟದ ಮಹತ್ತರ ಸಾಧನೆಗಳಲ್ಲಿ ಒಂದಾಗಿದೆ. ರೈತರು, ಕಾರ್ಮಿಕರು, ಮಹಿಳೆಯರು, ದಲಿತರು, ಆದಿವಾಸಿಗಳು ಸೇರಿದಂತೆ ಸಮಾಜದ ಎಲ್ಲ ವರ್ಗಗಳ ಜನರ ದೀರ್ಘ ಹೋರಾಟದ ಫಲವಾಗಿ ಪ್ರತಿಯೊಬ್ಬ ಪ್ರಾಪ್ತವಯಸ್ಕ ನಾಗರಿಕನಿಗೂ ಮತದಾನದ ಹಕ್ಕು ದೊರೆತಿದೆ. ಆದ್ದರಿಂದ ಈ ಹಕ್ಕಿನ ರಕ್ಷಣೆ ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ’ ಎಂದು ಅವರು ಹೇಳಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಯನ್ನು ಉಲ್ಲೇಖಿಸಿದ ಅವರು, “ಪ್ರಜಾಪ್ರಭುತ್ವದ ಜೀವಾಳವೇ ಮತದಾರರ ಪಟ್ಟಿ. ಮತದಾರರ ಪಟ್ಟಿಯಿಂದ ಒಬ್ಬ ವ್ಯಕ್ತಿಯ ಹೆಸರು ಕೈಬೀಳುವುದು ಎಂದರೆ ಆತನ ಸಂವಿಧಾನಬದ್ಧ ಹಕ್ಕಿನ ಮೇಲೆ ಪರಿಣಾಮ ಬೀರುವಂತಾಗಿದೆ. ಹೀಗಾಗಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಎಚ್ಚರಿಕೆ ಮತ್ತು ಜಾಗರೂಕತೆ ಅಗತ್ಯ” ಎಂದು ಹೇಳಿದರು.

‘ಮುಂಬರುವ ಮತದಾರರ ಪಟ್ಟಿ ಪರಿಷ್ಕರಣೆ ವೇಳಾಪಟ್ಟಿಯ ಕುರಿತು ಮಾಹಿತಿ ನೀಡಿದ ಅವರು, ಜೂನ್ 30ರಿಂದ ಮ್ಯಾಪಿಂಗ್ ಪ್ರಕ್ರಿಯೆ ಆರಂಭವಾಗಲಿದ್ದು, ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ. ಕರಡು ಪಟ್ಟಿಯಲ್ಲಿ ಹೆಸರು ಇಲ್ಲದಿರುವವರು, ವಿವರಗಳಲ್ಲಿ ದೋಷ ಕಂಡುಬಂದವರು ಅಥವಾ ತಿದ್ದುಪಡಿ ಅಗತ್ಯವಿರುವವರು ಕೂಡಲೇ ಸಂಬಂಧಿತ ಅಧಿಕಾರಿಗಳನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ’ ಎಂದು ತಿಳಿಸಿದರು.

‘ಬಿಎಲ್‌ಎ ಪ್ರತಿನಿಧಿಗಳು ಮತದಾರರ ಪಟ್ಟಿ ಪರಿಶೀಲನೆ, ಹೊಸ ಮತದಾರರ ನೋಂದಣಿ, ಸ್ಥಳಾಂತರಗೊಂಡ ಮತದಾರರ ವಿವರಗಳ ನವೀಕರಣ, ಮೃತರ ಹೆಸರುಗಳ ತೆರವು ಸೇರಿದಂತೆ ವಿವಿಧ ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಸಮಗ್ರ ಮಾಹಿತಿ ಹೊಂದಿರಬೇಕು. ಸಾರ್ವಜನಿಕರಲ್ಲಿ ಮತದಾನದ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸುವ ಕೆಲಸಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಹೇಳಿದರು.

‘ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು, ಗ್ಯಾರಂಟಿ ಯೋಜನೆಗಳು ಹಾಗೂ ವಿವಿಧ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮಾಹಿತಿ ತಲುಪಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು. ಸಾರ್ವಜನಿಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು’ ಎಂದು ಕರೆ ನೀಡಿದರು.

ಕಾರ್ಯಾಗಾರದಲ್ಲಿ ಬಿಎಲ್‌ಎ ಪ್ರತಿನಿಧಿಗಳಿಗೆ ಮತದಾರರ ಪಟ್ಟಿ ಪರಿಶೀಲನೆ, ಆಕ್ಷೇಪಣೆ ಸಲ್ಲಿಕೆ, ಹೊಸ ಮತದಾರರ ನೋಂದಣಿ, ದಾಖಲೆಗಳ ಪರಿಶೀಲನೆ ಹಾಗೂ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಯಿತು.

ಇದನ್ನು ಓದಿದ್ದೀರಾ? ಯಾದಗಿರಿ | ಸಿದ್ದಪ್ಪ ಮಾಸ್ತರ ಹೊಸಮನಿ ಪುಣ್ಯಸ್ಮರಣೆ ಅರ್ಥಪೂರ್ಣ ಆಚರಣೆ; ಶಾಲಾ ಮಕ್ಕಳಿಗೆ ಪ್ಲೇಟ್, ಗ್ಲಾಸ್ ವಿತರಣೆ

ಈ ಸಂದರ್ಭದಲ್ಲಿ ಕೆಎಂಎಫ್ ಅಧ್ಯಕ್ಷ ಆರ್‌ಕೆ ಪಾಟೀಲ್ ಸೇರಿದಂತೆ ಆಳಂದ ಹಾಗೂ ಮಾದನ ಹಿಪ್ಪರಗಾ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಮುಖಂಡರು, ಬಿಎಲ್‌ಎ ಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ವಿವಿಧ ಘಟಕಗಳ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಓವರ್‌ಪಾಸ್‌ ಉದ್ಘಾಟನೆಯಾದರೂ ಸರ್ವಿಸ್‌ ರಸ್ತೆಗೆ ಮುಕ್ತಿ ಸಿಕ್ಕಿಲ್ಲ; ಧೂಳಿನಿಂದ ವಾಹನ ಸವಾರರಿಗೆ ಸಂಕಷ್ಟ

ಉಡುಪಿ ನಗರದ ಕರಾವಳಿ ಜಂಕ್ಷನ್‌ನಿಂದ ಕಿನ್ನಿಮೂಲ್ಕಿವರೆಗಿನ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿರುವ ಸರ್ವಿಸ್‌...

ಯಲ್ಲಾಪುರ | ವನ್ಯಜೀವಿಗಳ ಅಂಗಾಂಗ ವಶ ಪ್ರಕರಣ: ಸಮಗ್ರ ತನಿಖೆಗೆ ಸೋಮೇಶ್ವರ ನಾಯ್ಕ ಆಗ್ರಹ

ಯಲ್ಲಾಪುರ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ವನ್ಯಜೀವಿಗಳ ಅಂಗಾಂಗಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ ಹಲವು...

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...