ಕಲಬುರಗಿ | ವಸತಿ ನಿಲಯದಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Date:

ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ಗುರುವಾರ ಸಂಜೆ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಏಕಾಏಕಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

- Advertisement -

ವಸತಿ ನಿಲಯದಲ್ಲಿ ಸಂಜೆ ಊಟವಾಗಿ ನೀಡಿದ್ದ ಅನ್ನ, ಸಾಂಬಾರ್ ಸೇವಿಸಿದ ಸ್ವಲ್ಪ ಸಮಯದಲ್ಲೇ 6ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಾಂತಿ, ಹೊಟ್ಟೆನೋವು ಹಾಗೂ ತಲೆಸುತ್ತು ಕಾಣಿಸಿಕೊಂಡಿದೆ. ಪರಿಸ್ಥಿತಿಯನ್ನು ಗಮನಿಸಿದ ವಸತಿ ನಿಲಯದ ಸಿಬ್ಬಂದಿ ತಕ್ಷಣವೇ ಎಲ್ಲ ವಿದ್ಯಾರ್ಥಿಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ವೈದ್ಯರ ಪ್ರಾಥಮಿಕ ಚಿಕಿತ್ಸೆಯಿಂದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಯಾರಿಗೂ ಪ್ರಾಣಾಪಾಯವಿಲ್ಲ ಎಂದು ತಿಳಿದುಬಂದಿದೆ.
ಅಸ್ವಸ್ಥತೆಗೆ ಕಲುಷಿತ ಕುಡಿಯುವ ನೀರು ಅಥವಾ ಆಹಾರದ ಗುಣಮಟ್ಟ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಆಹಾರ ಹಾಗೂ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕವೇ ನಿಖರ ಕಾರಣ ಬಹಿರಂಗವಾಗಲಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿದ್ಯಾರ್ಥಿಗಳ ಪೋಷಕರು ಆತಂಕದಿಂದ ಆಸ್ಪತ್ರೆಗೆ ಹಾಗೂ ವಸತಿ ನಿಲಯಕ್ಕೆ ಧಾವಿಸಿ ಮಕ್ಕಳ ಆರೋಗ್ಯ ವಿಚಾರಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಒಣಗಿದ ಹತ್ತಿ ಬೆಳೆ ಕಂಡು ರೈತನ ಆತ್ಮಹತ್ಯೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಂಗಮೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೆಣ್ಣೂರ ಬಿ ಗ್ರಾಮಕ್ಕೆ ಪ್ರತ್ಯೇಕ ಬಸ್‌ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಆಗ್ರಹ

ಕಾಳಗಿ ತಾಲೂಕಿನ ಬೆಣ್ಣೂರ ಬಿ ಗ್ರಾಮಕ್ಕೆ ಸಮರ್ಪಕ ಬಸ್‌ ಸಂಚಾರವಿಲ್ಲದೆ ಕಳೆದ...

ಯಾದಗಿರಿ | ‘ಬೆಂಕಿ ಹಚ್ಚುತ್ತೇನೆ’ ಹೇಳಿಕೆ ಶಾಸಕರ ಘನತೆಗೆ ತಕ್ಕುದಲ್ಲ: ಮಂಜುನಾಥ ಮೇತ್ರಿ

ಅಕ್ರಮ ಮರಳು ಸಾಗಾಟ ಹಾಗೂ ಓವರ್‌ಲೋಡ್ ಟಿಪ್ಪರ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುವುದು...

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...