ಕಲಬುರಗಿ | 260ಕ್ಕೂ ಹೆಚ್ಚು ಮನೆಗಳ್ಳತನ; ಅಂತಾರಾಜ್ಯ ಆರೋಪಿ ಬಂಧನ

Date:

ನಾಲ್ಕು ರಾಜ್ಯಗಳಲ್ಲಿ 260ಕ್ಕೂ ಹೆಚ್ಚು ಮನೆಗಳ್ಳತನ ಮಾಡಿ, ಕದ್ದ ಹಣದಲ್ಲಿ ಪಾಪ ಪರಿಹಾರಕ್ಕಾಗಿ ಸಮಾಜ ಸೇವೆ ಮಾಡುವುದರ ಜತೆಗೆ ಐಷಾರಾಮಿ ಜೀವನ ಸಾಗಿಸುತ್ತಿದ್ದ ಅಂತಾರಾಜ್ಯ ಕಳ್ಳನನ್ನು ಕಲಬುರಗಿಯ ಅಶೋಕ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

- Advertisement -

ಪೊಲೀಸ್ ಕಮಿಷನರ್ ಶರಣಪ್ಪ ಎಸ್‌ ಡಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಮನೆಗಳ್ಳತನ ಮಾಡುತ್ತಿದ್ದ ತೆಲಂಗಾಣದ ಸಿಕಂದರಬಾದ್‌ ನಿವಾಸಿ ಶಿವಪ್ರಸಾದ ಅಲಿಯಾಸ್ ಮಂತ್ರಿ ಶಂಕರ(56) ಎಂಬಾತನನ್ನು ಬಂಧಿಸಿ, ₹30 ಲಕ್ಷ ಮೌಲ್ಯದ 412 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಆರೋಪಿ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ 260ಕ್ಕೂ ಹೆಚ್ಚು ಮನೆಗಳ್ಳತನ ಮಾಡಿದ್ದಾನೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಶಿವಪ್ರಸಾದ 14 ವರ್ಷದವನಿರುವಾಗಲೇ ಕಳ್ಳತನ ಶುರು ಮಾಡಿದ್ದ. ಕಳ್ಳತನದ ಪಾಪ ಪರಿಹಾರಕ್ಕಾಗಿ ದೇವಸ್ಥಾನ, ಜಾತ್ರೆಯಲ್ಲಿ ಅನ್ನ ಸಂತರ್ಪಣೆ, ಬಡ ರೋಗಿಗಳಿಗೆ ಧನಸಹಾಯದಂತಹ ಸಮಾಜ ಸೇವೆಯನ್ನೂ ಮಾಡುತ್ತಿದ್ದ. ಸಹಾಯ ಪಡೆದವರು ಈತನಿಗೆ ಮಂತ್ರಿ ಶಂಕರನೆಂದು ಕರೆಯುತ್ತಿದ್ದರು. ಈತ ಐವರನ್ನು ಮದುವೆ ಆಗಿದ್ದು, ಮಹಾನಗರಗಳ ಡ್ಯಾನ್ಸ್‌ ಕ್ಲಬ್‌ಗಳಲ್ಲಿ ಹಣವನ್ನು ಖರ್ಚು ಮಾಡುತ್ತಿದ್ದ” ಎಂದರು.

“ಕಳ್ಳತನ ಮಾಡಿದ ಬಳಿಕ ಫಿಂಗರ್‌ ಪ್ರಿಂಟ್ಸ್‌ ಗುರುಗಳು ಸಿಗಬಾರದೆಂಬ ಕಾರಣಕ್ಕೆ ಕೈಗಳಿಗೆ ಫೆವಿಕಲ್‌ ಹಾಕಿಕೊಂಡು ಕೃತ್ಯ ಎಸಗುತ್ತಾನೆ. ಒಂದು ವೇಳೆ ಫೆವಿಕಲ್‌ ಸಿಗಲಿಲ್ಲ ಅಂದರೆ ಮನೆಗಳ ಡೋರ್‌ಗಳನ್ನು ಒಡೆಯುವಾಗ ಸ್ಕ್ರೂಡ್ರೈವರ್‌ಗಳನ್ನು ಬಳಸಿ ಮನೆಗಳ್ಳತನ ಮಾಡುತ್ತಾನೆ. ಒಂದು ವೇಳೆ ಫಿಂಗರ್‌ ಪ್ರಿಂಟ್ಸ್‌ ಬರಬಾರದು ಅಂತ ಬಟ್ಟೆಗಳಿಂದ ನೀಟಾಗಿ ಕ್ಲೀನ್‌ ಮಾಡ್ತಾನೆ. ಈಗ ಕಳ್ಳತನ ಮಾಡಿರುವ ಮನೆಯಲ್ಲಿಯೂ ಕೂಡಾ ಸಿಕ್ಕಿರಲಿಲ್ಲ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | 8 ಮಂದಿ ಮಕ್ಕಳೊಂದಿಗೆ ಆರಂಭವಾದ ಶಾಲೆಯಲ್ಲಿ ಇಂದು 148 ದಾಖಲಾತಿ; ಕಾರಣವೇನು?

“ಕಲಬುರಗಿಯ ಭಾಗ್ಯವಂತಿ ನಗರದ ಮನೆಯಲ್ಲಿ ಕಳ್ಳತನಕ್ಕಾಗಿ ಕಾಂಪೌಂಡ್ ಹಾರಿದಾಗ ಗಾಯಗೊಂಡಿದ್ದ. ಇದರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮಾಹಿತಿ ಆಧಾರದ ಮೇಲೆ ಆರೋಪಿಯನ್ನು ಪತ್ತೆ ಹಚ್ಚಲಾಗಿದೆ. ಇದಕ್ಕೂ ಮುನ್ನ 210 ಕಳ್ಳತನ ಪ್ರಕರಣಗಳಲ್ಲಿ ಶಿಕ್ಷೆಗೆ ಒಳಗಾಗಿದ್ದು, ಸ್ಥಳೀಯ ವಿಶೇಷ ಕಾಯದೆಯಡಿ ನಾಲ್ಕು ವರ್ಷ ಜೈಲಿಗೂ ಹೋಗಿದ್ದ. ಆದರೂ ಕಳ್ಳತನ ಕೃತ್ಯ ಬಿಟ್ಟಿರಲಿಲ್ಲ” ಎಂದು ಪೊಲೀಸ್ ಕಮಿಷನರ್ ಶರಣಪ್ಪ ಎಸ್‌ ಡಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...