ಆಳಂದ ತಾಲ್ಲೂಕಿನ ಚಿಂಚನಸೂರ ಗ್ರಾಮದಲ್ಲಿ ತಾಯಿಯೊಬ್ಬರು ತನ್ನ ಎರಡು ವರ್ಷದ ಮಗುವನ್ನು ತಬ್ಬಿಕೊಂಡೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಗುರುವಾರ ನಡೆದಿದೆ.
ಮೃತರನ್ನು ಅಂಬಿಕಾ ವೀರಭದ್ರಪ್ಪ ವಾಡಿ (26) ಹಾಗೂ ಅವರ ಪುತ್ರಿ ಲಕ್ಷ್ಮಿ (2) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಅಂಬಿಕಾ ಅವರು ಗುರುವಾರ ನಸುಕಿನ ಜಾವ ಮಗುವನ್ನು ಕರೆದುಕೊಂಡು ಮನೆಯಿಂದ ಹೊರಟಿದ್ದರು. ಬಳಿಕ ಅವರು ಸಂಗೋಳಗಿ ಗ್ರಾಮದ ಸಮೀಪದ ರೈತರೊಬ್ಬರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಬೆಳಗ್ಗೆಯಿಂದ ತಾಯಿ ಹಾಗೂ ಮಗಳ ಸುಳಿವು ಸಿಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಹುಡುಕಾಟ ನಡೆಸಿದರು. ವಿವಿಧ ಕಡೆಗಳಲ್ಲಿ ಹುಡುಕಿದ ಬಳಿಕ ಸಂಗೋಳಗಿ ಸಮೀಪದ ಹೊಲದ ಬಾವಿಯ ಬಳಿ ಮಹಿಳೆಯ ಚಪ್ಪಲಿ ಕಂಡುಬಂದಿದ್ದು, ಅನುಮಾನಗೊಂಡು ಬಾವಿಯಲ್ಲಿ ಪರಿಶೀಲನೆ ನಡೆಸಿದಾಗ ತಾಯಿ ಮತ್ತು ಮಗುವಿನ ಶವಗಳು ಪತ್ತೆಯಾಗಿವೆ.
ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶವಗಳನ್ನು ಬಾವಿಯಿಂದ ಹೊರತೆಗೆದರು. ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಶ್ರೀನಿವಾಸ ಬಾಳುವಾಲೆ ಅಮಾನತು ಆದೇಶ ಹಿಂಪಡೆಯುವಂತೆ ಭೀಮ್ ಆರ್ಮಿ ಆಗ್ರಹ
ಘಟನೆ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಡಿವೈಎಸ್‌ಪಿ ತಮ್ಮರಾಯ ಪಾಟೀಲ ಹಾಗೂ ಪಿಐ ಶರಣಬಸಪ್ಪ ಕೋಡ್ತಾ ಭೇಟಿ ನೀಡಿ ಪರಿಶೀಲನೆ ನಡೆಸಿದ





