ಕಲಬುರಗಿ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ: ಅಜ್ಮಲ್ ಅಹಮದ್ ಗೋಳಾ ಮೇಯರ್, ಫರ್ಹಾನಾಜ್ ಜಹಗೀರ್ದಾರ್ ಉಪ ಮೇಯರ್

Date:

ಭಾರಿ ಕುತೂಹಲ ಕೆರಳಿಸಿದ್ದ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಮೇಲುಗೈ ಸಾಧಿಸಿದೆ. ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಜ್ಮಲ್ ಅಹಮದ್ ಗೋಳಾ ಹಾಗೂ ಉಪ ಮೇಯರ್ ಸ್ಥಾನಕ್ಕೆ ಫರ್ಹಾನಾಜ್ ಖುಸ್ರೋ ಜಹಗೀರ್ದಾರ್ ಆಯ್ಕೆಯಾಗಿದ್ದು, ಪಾಲಿಕೆಯ ಆಡಳಿತದ ಚುಕ್ಕಾಣಿ ಮತ್ತೊಮ್ಮೆ ಕಾಂಗ್ರೆಸ್ ತೆಕ್ಕೆಗೆ ಬಂದಿದೆ.

- Advertisement -

ಕಲಬುರಗಿ ಮಹಾನಗರ ಪಾಲಿಕೆಯ 21ನೇ ವಾರ್ಡ್ ಸದಸ್ಯ ಅಜ್ವಲ್ ಅಹಮದ್ ಗೋಳಾ ಅವರು ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದರು. 20ನೇ ವಾರ್ಡ್ ಸದಸ್ಯೆ ಫರ್ಹಾನಾಜ್ ಖುಸ್ರೋ ಜಹಗೀರ್ದಾರ್ ಅವರು ಉಪ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ಮೂಲತಃ ಆಗಸ್ಟ್ 7ರಂದು ಚುನಾವಣೆ ನಡೆಯಬೇಕಾಗಿತ್ತು. ಆದರೆ ಕೆಲ ಕಾರಣಗಳಿಂದ ಚುನಾವಣೆ ಮುಂದೂಡಿಕೆಯಾಗಿತ್ತು. ಬಳಿಕ ಪ್ರಾದೇಶಿಕ ಆಯುಕ್ತೆ ಜಾಹೀರಾ ನಶೀಮ್ ಅವರು ಆಗಸ್ಟ್ 29ರಂದು ಚುನಾವಣೆ ನಡೆಸುವಂತೆ ಪರಿಷ್ಕೃತ ಅಧಿಸೂಚನೆ ಹೊರಡಿಸಿದ್ದರು.

ಪರಿಷ್ಕೃತ ಅಧಿಸೂಚನೆಯಂತೆ ಶನಿವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಸಂಖ್ಯಾಬಲವನ್ನು ಪ್ರದರ್ಶಿಸಿ ಜಯ ಸಾಧಿಸಿದೆ. ಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜ್ಮಲ್ ಅಹಮದ್ ಗೋಳಾ ಅವರು 35 ಮತಗಳನ್ನು ಪಡೆದು ಜಯಗಳಿಸಿದರೆ, ಬಿಜೆಪಿ ಅಭ್ಯರ್ಥಿ 29 ಮತಗಳನ್ನು ಪಡೆದುಕೊಂಡಿದ್ದಾರೆ.

ಈ ಮೂಲಕ ಅಜ್ವಲ್ ಅಹಮದ್ ಗೋಳಾ ಅವರು ಕಲಬುರಗಿ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಫರ್ಹಾನಾಜ್ ಖುಸ್ರೋ ಜಹಗೀರ್ದಾರ್ ಅವರು ನೂತನ ಉಪ ಮೇಯರ್ ಆಗಿ ಆಯ್ಕೆಯಾಗಿದ್ದು, ಇಬ್ಬರೂ ಪಾಲಿಕೆಯ 24ನೇ ಅವಧಿಯ ಆಡಳಿತದ ಹೊಣೆಗಾರಿಕೆಯನ್ನು ವಹಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಮ್ಯುಟೇಷನ್‌ಗೆ ₹18 ಸಾವಿರ ಲಂಚ ಬೇಡಿಕೆ: ಪಿಡಿಒ ಲೋಕಾಯುಕ್ತ ಬಲೆಗೆ

ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ಮೇಯರ್-ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಪಾಲಿಕೆ ರಾಜಕೀಯದಲ್ಲಿ ಕಾಂಗ್ರೆಸ್ ಮೇಲುಗೈಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ನೂತನ ಮೇಯರ್ ಹಾಗೂ ಉಪ ಮೇಯರ್ ಆಯ್ಕೆಯೊಂದಿಗೆ ಮುಂದಿನ ದಿನಗಳಲ್ಲಿ ನಗರದ ಅಭಿವೃದ್ಧಿ, ಮೂಲಸೌಕರ್ಯ ಮತ್ತು ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಯಾವ ರೀತಿಯ ಆದ್ಯತೆ ನೀಡಲಾಗುತ್ತದೆ ಎಂಬುದು ಇದೀಗ ಸಾರ್ವಜನಿಕ ವಲಯದಲ್ಲಿ ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...