ಕಲಬುರಗಿ | ಕೆಕೆಆರ್‌ಡಿಬಿ ಕಾರ್ಯದರ್ಶಿಯಾಗಿ ನಳಿನ್‌ ಅತುಲ್‌ ಅಧಿಕಾರ ಸ್ವೀಕಾರ

Date:

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ನೂತನ ಕಾರ್ಯದರ್ಶಿಯಾಗಿ 2014ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ನಳಿನ್‌ ಅತುಲ್‌ ಗುರುವಾರ ಅಧಿಕಾರ ಸ್ವೀಕರಿಸಿದರು.

- Advertisement -

ಕೆಕೆಆರ್‌ಡಿಬಿ ಕಾರ್ಯದರ್ಶಿಯಾಗಿದ್ದ ಐಎಎಸ್ ಅಧಿಕಾರಿ ಎಂ.ಸುಂದರೇಶ ಬಾಬು ಅವರನ್ನು ಕೇಂದ್ರ ಸರ್ಕಾರದ ಸೇವೆಗೆ ನಿಯೋಜನೆ ಮಾಡಿದ್ದರಿಂದ ತೆರವಾದ ಸ್ಥಾನಕ್ಕೆ ನಲಿನ್ ಅತುಲ್ ಅವರನ್ನು ಸರ್ಕಾರ ಇತ್ತೀಚೆಗೆ ವರ್ಗಾಯಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಮೂಲತಃ ಬಿಹಾರ್‌ ರಾಜ್ಯದವರಾದ ನಳಿನ್ ಅತುಲ್ ಬಿ.ಟೆಕ್ ಪದವೀಧರರು. ರಾಯಚೂರು ಜಿ.ಪಂ. ಸಿಇಒ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಖ್ಯಸ್ಥ, ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿ ಕೆಲಸ ಮಾಡಿದ್ದಾರೆ. ಈ ಹಿಂದೆ ಕಲಬುರಗಿಯಲ್ಲಿ 2019ರ ಅ.22ರಿಂದ 2022ರ ಜ.27ರವರೆಗೆ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.

ʼಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಮತ್ತು ಸರ್ವ ಸದಸ್ಯರ ಸಲಹೆ ಹಾಗೂ ಪ್ರದೇಶದ ಏಳು ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒಗಳ ಅಭಿಪ್ರಾಯ ಪಡೆದು ರಾಜ್ಯ ಸರ್ಕಾರ ಮಂಡಳಿಗೆ ಒದಗಿಸಿರುವ ಅನುದಾನವನ್ನು ಪ್ರದೇಶದ ಒಳಿತಿಗೆ ಸಮರ್ಪಕವಾಗಿ ಅನುಷ್ಠಾನ ಮಾಡುವುದರ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವೆʼ ಎಂದು ನಳಿನ್ ಅತುಲ್ ತಿಳಿಸಿದ್ದಾರೆ.

ಇದನ್ನೂ ಓದಿ : ಕಲಬುರಗಿ | ಕರ್ತವ್ಯ ಲೋಪ ಆರೋಪ : ಪ್ರಭಾರ ಮುಖ್ಯಶಿಕ್ಷಕ ಅಮಾನತು

ಈ ಸಂದರ್ಭದಲ್ಲಿ ಮಂಡಳಿ ಉಪ ಕಾರ್ಯದರ್ಶಿ ಮಂಜುನಾಥ ಸ್ವಾಮಿ ಜಿ.ಎನ್., ಹೆಚ್ಚುವರಿ ನಿರ್ದೇಶಕಿ ಪ್ರವೀಣಪ್ರಿಯಾ ಡೇವಿಡ್, ಅಧೀಕ್ಷಕ ಎಂಜಿನಿಯರ್‌ ವಿಜಯಕುಮಾರ ಪಾಟೀಲ, ಅಕ್ಕನಾಗಮ್ಮ, ಪ್ರಕಾಶ ಕುದರಿ ಸೇರಿದಂತೆ ಹಲವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...