ಮೆನೆಯ ಅಂಗಳದಲ್ಲಿರುವ ವಿದ್ದುತ್ ಕಂಬ ಮುರಿದು ಬೀಳುವ ಸ್ಥಿತಿಯಲ್ಲಿದೆ. ಈ ಬಗ್ಗೆ ಹಲವು ಬಾರಿ ಜೆಸ್ಕಾಂ ಅಧಿಕಾರಿಗಳಿಗೆ ಕರೆ ಮಾಡಿ ತಿಳಿಸಿದರೂ ಕಂಬ ಬೀಳುವುದಿಲ್ಲವೆಂದು ಅಧಿಕಾರಿಗಳು ನಿರ್ಲಕ್ಷ್ಯದ ಮಾತುಗಳನ್ನಾಡುತ್ತಾರೆ ಎಂದು ಕಲಬುರಗಿ ಜಿಲ್ಲೆ ತಾಜ್ ಸುಲ್ತಾನಪುರ್ ನಿವಾಸಿ ಆರೋಪಿಸಿದ್ದಾರೆ.

“ಮಳೆಗಾಲ ಆರಂಭವಾಗಿದ್ದು, ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ವಿದ್ಯುತ್ ಕಂಬ ಮತ್ತಷ್ಟು ಬಾಗಿದೆ. ಇದರಿಂದ ಆತಂಕ ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಪರಿಶೀಲನೆ ನಡೆಸಿ ವಿದ್ಯುತ್ ಕಂಬ ತೆರವುಗೊಳಿಸಬೇಕು” ಎಂದು ನಿವಾಸಿ ಶರಣಯ್ಯ ಮತ್ತು ಕುಟುಂಬಸ್ಥರು ಮನವಿ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ದುರಸ್ತಿ ಕಾರ್ಯಕ್ಕೆ ಜಿಲ್ಲಾಧಿಕಾರಿ ಸೂಚನೆ
ಶರಣಯ್ಯ ಕುಟುಂಬಸ್ಥರು ಈ ದಿನ.ಕಾಮ್ ಜೊತೆಗೆ ಮಾತನಾಡಿ, “ಮಳೆಗಾಲದಲ್ಲಿ ವಿದ್ಯುತ್ ಕಂಬಗಳು ಸ್ಪರ್ಶಿಸಬಾರದು ಎಂದು ಹೇಳುತ್ತಾರೆ. ಆದರೆ, ಮನೆಯಲ್ಲಿ ಚಿಕ್ಕಮಕ್ಕಳು ಇದ್ದಾರೆ. ಆಚಿಂದೀಚೆ ಓಡಾಡುತ್ತಿರುತ್ತಾರೆ. ವಿದ್ಯುತ್ ಕಂಬ ಮುಟ್ಟಬಾರದು ಎಂದು ಅವರಿಗೆ ತಿಳಿಯುವುದಿಲ್ಲ. ಅವರಿಗೆ ಎಷ್ಟೇ ಹೇಳಿದರೂ ಅರ್ಥ ಆಗುವುದಿಲ್ಲ. ಇದರಿಂದ ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ?” ಎಂದು ಆಕ್ರೋಶ ವ್ಯಕ್ತಪಡಿಸಿದರು.