ಕಲಬುರಗಿ | ನ.2: ಎಸ್‌ಐಓ ಸಂಘಟನೆಯಿಂದ ವಿದ್ಯಾರ್ಥಿ-ಯುವಜನರ ಸಮ್ಮೇಳನ; ಸಾರ್ವಜನಿಕ ಸಮಾವೇಶ

Date:

ಐತಿಹಾಸಿಕ ನಗರಿ ಮತ್ತು ಕಲ್ಯಾಣ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯಾದ ಕಲಬುರಗಿ ನಗರದಲ್ಲಿ ಸ್ಟೂಡೆಂಟ್ಸ್‌ ಇಸ್ಲಾಮಿಕ್ ಆರ್ಗನೈಜೇಷನ್(ಎಸ್‌ಐಓ) ವಿದ್ಯಾರ್ಥಿ ಸಂಘಟನೆಯ “ರಾಜ್ಯ ಸದಸ್ಯರ ಸಮ್ಮೇಳನದ ಭಾಗವಾಗಿ ನವೆಂಬರ್ 2ನೇ ತಾರೀಕಿನಂದು ಸಾರ್ವಜನಿಕ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಐಓ ಗುಲ್ಬರ್ಗಾ ನಗರ ಘಟಕದ ಅಧ್ಯಕ್ಷರಾದ ಸುಫಿಯಾನ್ ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಮಾಹಿತಿ ನೀಡಿರುವ ಅವರು, ರಾಜ್ಯ ಸದಸ್ಯರ ಸಮ್ಮೇಳನವು ನವೆಂಬರ್ 1, 2 ಮತ್ತು 3ನೇ ತಾರೀಕಿನಂದು ಮೂರು ದಿನಗಳ ಕಾಲ “ಓದು, ಪ್ರತಿರೋಧ ಹಾಗೂ ಪುನಶ್ಚೇತನ” ಎಂಬ ಘೋಷ್ಯ ವಾಕ್ಯದಡಿ ನಡೆಯಲಿದೆ. ಇದರ ಎರಡನೇ ದಿನವಾದ ಶನಿವಾರ ನವೆಂಬರ್ 2ನೇ ತಾರೀಖಿನಂದು ಸಂಜೆ 6 ಗಂಟೆಗೆ ಕಲಬುರಗಿ ಮೊಘಲ್ ಗಾರ್ಡನ್‌ನಲ್ಲಿ ಬೃಹತ್ ಸಾರ್ವಜನಿಕ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸಾರ್ವಜನಿಕ ಸಮಾವೇಶಕ್ಕೆ ಮುಖ್ಯ ಅತಿಥಿಯಾಗಿ ಜಮಾಅತೆ ಇಸ್ಲಾಮಿ ಹಿಂದ್‌ನ ರಾಷ್ಟ್ರೀಯ ಅಧ್ಯಕ್ಷರಾದ ಸೈಯ್ಯದ್ ಸಾದತುಲ್ಲಾಹ್ ಹುಸೇನಿಯವರು ದೆಹಲಿಯಿಂದ ಆಗಮಿಸಲಿದ್ದಾರೆ. ಕಲಬುರಗಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ರವರು ಅತಿಥಿಯಾಗಿ ಭಾಗವಹಿಸಲಿದ್ದಾರೆ, ಇದರೊಂದಿಗೆ ಜಮಾಅತ್ ಇಸ್ಲಾಮಿ ಹಿಂದ್‌ನ ರಾಷ್ಟ್ರೀಯ ಕಾರ್ಯದರ್ಶಿ ಎಸ್ ಅಮೀನುಲ್ ಹಸನ್, ಎಸ್.ಐ.ಓ ಕರ್ನಾಟಕ ರಾಜ್ಯಾಧ್ಯಕ್ಷರಾದ ಝೀಶಾನ್ ಅಖಿಲ್ ಸಿದ್ದೀಕಿ ಹಾಗೂ ಜಮಾಅತೆ ಇಸ್ಲಾಮಿ ಹಿಂದ್ ನ ಗುಲ್ಬರ್ಗಾ ಇದರ ಸ್ಥಾನೀಯ ಅಧ್ಯಕ್ಷರಾದ ಝಾಕೀರ್ ಹುಸೇನ್ ಅವರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದ್ದಾರೆ.

ನಗರದ ಎಲ್ಲ ಧರ್ಮೀಯ ವಿದ್ಯಾರ್ಥಿಗಳು, ಯುವಜನರು, ಹಾಗೂ ಹಿರಿಯ ನಾಗರಿಕರು “ಓದು, ಪ್ರತಿರೋಧ ಮತ್ತು ಪುನಶ್ಚೇತನ” ಎಂಬ ವಿಷಯದಲ್ಲಿ ನಡೆಯುವ ಈ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಗುಲ್ಬರ್ಗಾ ನಗರ ಘಟಕದ ಅಧ್ಯಕ್ಷರಾದ ಸುಫಿಯಾನ್ ವಿನಂತಿಸಿಕೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...