ಕಲಬುರಗಿ | ಮೀತಿ ಮೀರಿದ ಧೂಳಿನಿಂದ ಬದುಕು ಅಸಹನೀಯ

Date:

ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣ ಸಿಮೆಂಟ್‌ಗೆ ಹೆಸರುವಾಸಿ. ಅತೀ ಹೆಚ್ಚು ಧೂಳಿನ ಪಟ್ಟಣ ಸಹ ಹೌದು. ಈ ಧೂಳಿನಿಂ ಜನರ ಬದುಕು ಅಸ್ಥಿರವಾಗಿದೆ. ಆದರೆ, ಧೂಳನ್ನು ನಿಯಂತ್ರಿಸುವಲ್ಲಿ ಸ್ಥಳೀಯ ಆಡಳಿತ ವಿಫಲವಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಪಟ್ಟಣದಲ್ಲಿ ಧೂಳಿನಿಂದ ಸಾರ್ವಜನಿಕರು ಅಕ್ಷರಶಃ ನಲುಗಿ ಹೋಗಿದ್ದಾರೆ. ಇಲ್ಲಿ ಬದುಕು ಅಸಹನೀಯವೆನ್ನಿಸುವಷ್ಟು ಮಟ್ಟಿಗೆ ಪಟ್ಟಣದಲ್ಲಿ ದೂಳು ಹರಡುತ್ತಿದ್ದು, ಗಂಭೀರ ಕಾಯಿಲೆಗಳ ಸಾಧ್ಯತೆ ಹೆಚ್ಚಾಗಿದೆ ಎಂದು ನಾಗರಿಕರು ದೂಳು ಹರಡುತ್ತಿರುವ ಕಾರ್ಖಾನೆ ಹಾಗೂ ಹದಗೆಟ್ಟ ರಸ್ತೆಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸ್ಥಳೀಯ ಸಿಮೆಂಟ್ ಕಾರ್ಖಾನೆಯಿಂದ ವಿಪರೀತ ದೂಳು ಹೊರಬರುತ್ತದೆ. ದೂಳಿನೊಂದಿಗೆ ಹೊರಬರುವ ವಿಷಕಾರಿ ಕಣಗಳು ಜನರಶ್ವಾಸಕೋಶ ಸೇರಿ ಅನಾರೋಗ್ಯಕ್ಕೆ ಕಾರಣವಾಗುತ್ತಿದೆ. ಕಾರ್ಖಾನೆ ನಿರ್ಮಿಸಿದ ರಸ್ತೆಯನ್ನು ಸರಿಯಾಗಿ ನಿರ್ವಹಣೆ ಮಾಡದೇ ಇರುವುದರಿಂದ ಈ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ವಾಹನಗಳು ಓಡಾಡುವಾಗ ಮುಗಿಲೆತ್ತರ ಧೂಳು ಏಳುತ್ತದೆ. ಪಕ್ಕದಲ್ಲಿನ ವಾಹನಗಳು ಕಾಣದಿರುವಷ್ಟು ದೂಳು ಹರಡುತ್ತಿದ್ದು ಇದರಿಂದ ವಾಹನ ಸವಾರರು ಮತ್ತು ಸ್ಥಳೀಯರು ಕಂಗಲಾಗಿದ್ದು ಪ್ರತೀ ದಿನ ಪುರಸಭೆ ಮತ್ತು ಕಾರ್ಖಾನೆಗೆ ಹಿಡಿ ಶಾಪ ಹಾಕುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾವೂರಿನಿಂದ ಪಟ್ಟಣ ಸಂಪರ್ಕಿಸುವ ರಸ್ತೆ ಹಾಗೂ ಪಟ್ಟಣದ ಶ್ರೀನಿವಾಸ ಗುಡಿ ಚೌಕ್ ವೃತ್ತದಿಂದ ಬಸವೇಶ್ವರ ವೃತ್ತದವರೆಗಿನ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು,ರಸ್ತೆಗೆ ಹೊಂದಿಕೊಂಡು ಪೊಲೀಸ್ ಠಾಣೆ ಹಾಗೂ ಪೊಲೀಸ್ ವಸತಿ ಗೃಹಗಳಿದ್ದು ಇಲ್ಲಿರುವ ಕುಟುಂಬಗಳು ಹೆಚ್ಚಿನ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿವೆ. ಪೊಲೀಸರು ವಸತಿ ಗೃಹಗಳಲ್ಲಿ ವಾಸಮಾಡಲಾಗದೇ ಕೆಲವರು ಬೇರೆಕಡೆ ಮನೆ ಮಾಡಿಕೊಂಡಿದ್ದಾರೆ ಎನ್ನುತ್ತಾರೆ ಸ್ಥಳೀಯರು.

ಹದಗೆಟ್ಟ ರಸ್ತೆಯನ್ನು ಮತ್ತೇ ನಿರ್ಮಾಣ ಮಾಡುವ, ಪ್ರತಿನಿತ್ಯ ರಸ್ತೆ ಮೇಲೆ ನೀರು ಸಿಂಪಡಿಸಬೇಕೆನ್ನುವ ಕನಿಷ್ಠ ಕಾಳಜಿಯನ್ನು ಎಸಿಸಿ ಕಾರ್ಖಾನೆ ಹಾಗೂ ಸ್ಥಳೀಯ ಪುರಸಭೆ ತೋರುತ್ತಿಲ್ಲ. ನಮಗೆ ಬದುಕೇ ನರಕ ಎನ್ನುವಂತಾಗಿದೆ  ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ದೂಳು ನಿಯಂತ್ರಣಕ್ಕೆ ಆದಷ್ಟು ಬೇಗ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಬಸ್‌ಗಳಿಲ್ಲದೇ ಪರದಾಟ; ವಿದ್ಯಾರ್ಥಿಗಳ ಪ್ರತಿಭಟನೆ

ಬಸ್ ಅವಾಂತರದಿಂದ ಬೇಸತ್ತ ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ....

ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

ಬೆಳಗಿನ ಜನದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ...

ವಿಪಕ್ಷ ನಾಯಕನ ಹುದ್ದೆಗೆ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್

ವಿಧಾನಸಭೆ ವಿಪಕ್ಷ ನಾಯಕನ ಹುದ್ದೆಗೆ ಆರ್ ಅಶೋಕ್ ನಾಲಾಯಕ್. ಬೆಂಗಳೂರಿನ ಚಾಮರಾಜಪೇಟೆಯಲ್ಲಿ...

ಶಿವಮೊಗ್ಗ | ಫೆ.24ರಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ...