ಕಲಬುರಗಿ | ನಿಯಂತ್ರಣ ತಪ್ಪಿದ ಬೈಕ್ ಕಲ್ಲಿಗೆ ಡಿಕ್ಕಿ; ಮೂವರು ಯುವಕರ ದಾರುಣ ಸಾವು

Date:

ವೇಗವಾಗಿ ಚಲಿಸುತ್ತಿದ್ದ ಬೈಕ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ಹೊರವಲಯದ ಪಾಣೇಗಾಂವ ಸಮೀಪ ಭಾನುವಾರ ತಡರಾತ್ರಿ ನಡೆದಿದೆ.

- Advertisement -

ಮೃತರನ್ನು ಪಾಣೇಗಾಂವ ಸಮೀಪದ ಶಿವಾಜಿ ತಾಂಡಾ ನಿವಾಸಿಗಳಾದ ಧರ್ಮರಾಜ ಚವ್ಹಾಣ (30), ಗೋಪಾಲ ಪವಾರ್ (26) ಹಾಗೂ ಸುಂದರ ಹರಿಶ್ಚಂದ್ರ ರಾಠೋಡ್ (28) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಭಾನುವಾರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಮೂವರು ಒಂದೇ ಬೈಕ್‌ನಲ್ಲಿ ಪಾಣೇಗಾಂವ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಬೈಕ್‌ ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಮೂವರಿಗೂ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್‌.ಡಿ., ಡಿಸಿಪಿ ಶಾಲೂ, ಸಂಚಾರಿ-1 ಎಸಿಪಿ ಡಿ.ಟಿ. ಪ್ರಭು, ಪಿಐ ಶಕೀಲ್ ಅಂಗಡಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಹತ್ಯೆ

ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...